DC vs LSG: ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್

ಇಂಡಿಯನ್ ಪ್ರೀಮಿಯರ್ ಲೀಗ್‌ನ 15ನೇ ಆವೃತ್ತಿಯಲ್ಲಿ ಇಂದು 45ನೇ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪ್ರಮುಖ ಹಣಾಹಣಿ ನಡೆಯುತ್ತಿದ್ದು ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದೆ.
ಆಡುವ ಬಳಗ ಹೀಗದೆ:
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್(ವಿಕೆಟ್ ಕೀಪರ್/ ನಾಯಕ), ಲಲಿತ್ ಯಾದವ್, ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಚೇತನ್ ಸಕರಿಯಾ
ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಕೆಎಲ್ ರಾಹುಲ್(ನಾಯಕ), ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಕೃಷ್ಣಪ್ಪ ಗೌತಮ್, ಜೇಸನ್ ಹೋಲ್ಡರ್, ದುಷ್ಮಂತ ಚಮೀರಾ, ಮೊಹ್ಸಿನ್ ಖಾನ್, ರವಿ ಬಿಷ್ಣೋಯ್
ಡೆಲ್ಲಿ ಕ್ಯಾಪಿಟಲ್ಸ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಕದನ ಎರಡು ತಂಡಗಳಿಗೂ ಬಹಳ ಮಹತ್ವದ್ದಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡ ಪ್ರಸ್ತುತ 9ನೇ ಸ್ಥಾನದಲ್ಲಿದ್ದು ಅಗ್ರ ನಾಲ್ಕರಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಲು ಪ್ರಯತ್ನಿಸುತ್ತಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ ತಂಡ ಆಡಿದ 8 ಪಂದ್ಯಗಳಲ್ಲಿ ನಾಲ್ಕು ಗೆಲುವು ನಾಲ್ಕು ಸೋಲು ಅನುಭವಿಸಿದ್ದು ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಹೀಗಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುವತ್ತ ಡೆಲ್ಲಿ ಕ್ಯಾಪಿಟಲ್ಸ್ ಚಿತ್ತ ನೆಡಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications