
ಐಪಿಎಲ್ 15ನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇಂದು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಪಡೆ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೇವಲ ಇಬ್ಬರು ವಿದೇಶಿ ಆಟಗಾರರೊಂದಿಗೆ ಕಣಕ್ಕಿಳಿದಿದೆ. ಟಿಮ್ ಸೈಫರ್ಟ್ ಹಾಗೂ ರೋವ್ಮನ್ ಪೋವೆಲ್ ಮಾತ್ರವೇ ಡೆಲ್ಲಿ ತಮಡದ ಪರವಾಗಿ ಕಣಕ್ಕಿಳಿದಿರುವ ವಿದೇಢಶಿ ಆಟಗಾರರಾಗಿದ್ದಾರೆ. ಮುಂಬೈ ತಂಡದಲ್ಲಿ ಕಿರಾನ್ ಪೊಲಾರ್ಡ್, ಟಿಮ್ ಡೇವಿಡ್, ಡೇನಿಯಲ್ ಸ್ಯಾಮ್ಸ್ ಹಾಗೂ ಟೈಮಲ್ ಮಿಲ್ಸ್ ವಿದೇಶಿ ಆಟಗಾರರಾಗಿ ಕಣಕ್ಕಿಳಿದಿದ್ದಾರೆ.
ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಐಪಿಎಲ್ 14 ಸೀಸನ್‌ಗಳಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ 30 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಮುಂಬೈ 16 ಪಂದ್ಯಗಳಲ್ಲಿ ಜಯಿಸಿದೆ. ಆದ್ರೆ ಅದೇ ಡೆಲ್ಲಿ ಕ್ಯಾಪಿಟಲ್ಸ್ 14 ಪಂದ್ಯಗಳನ್ನ ಮಾತ್ರ ಗೆದ್ದಿದೆ.
ಮುಂಬೈ ಇಂಡಿಯನ್ಸ್, ಪ್ಲೇಯಿಂಗ್ XI: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ತಿಲಕ್ ವರ್ಮಾ, ಅನ್ಮೋಲ್ಪ್ರೀತ್ ಸಿಂಗ್, ಕೀರಾನ್ ಪೊಲಾರ್ಡ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಟೈಮಲ್ ಮಿಲ್ಸ್, ಜಸ್ಪ್ರೀತ್ ಬುಮ್ರಾ, ಬೆಸಿಲ್ ಥಂಪಿ
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಪೃಥ್ವಿ ಶಾ, ಟಿಮ್ ಸೀಫರ್ಟ್, ಮನ್‌ದೀಪ್ ಸಿಂಗ್, ರಿಷಬ್ ಪಂತ್(ವಿಕೆಟ್ ಕೀಪರ್/ನಾಯಕ), ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಖಲೀಲ್ ಅಹ್ಮದ್, ಕುಲದೀಪ್ ಯಾದವ್, ಕಮಲೇಶ್ ನಾಗರಕೋಟಿ