ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

DC vs PBKS: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಗೆದ್ದಿರುವ ಬಲಿಷ್ಠ ತಂಡ ಯಾವುದು?

IPL 2022: Delhi Capitals vs Punjab Kings head to head details in Kannada

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಸಮೀಪಿಸುತ್ತಿದ್ದು, ಲೀಗ್ ಹಂತದ 64ನೇ ಪಂದ್ಯ ನಾಳೆ ( ಮೇ 16 ) ನಡೆಯಲಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಂಬೈನ ಡಾ ಡಿವೈ ಪಾಟೀಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿದ್ದು ಈ ಹಿಂದೆ ಏಪ್ರಿಲ್ 20ರಂದು ನಡೆದಿದ್ದ ಪ್ರಥಮ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 9 ವಿಕೆಟ್‍ಗಳ ಭರ್ಜರಿ ಜಯವನ್ನು ಸಾಧಿಸಿತ್ತು.

ಇನ್ನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇಲ್ಲಿಯವರೆಗೂ 12 ಪಂದ್ಯಗಳನ್ನಾಡಿರುವ ಡೆಲ್ಲಿ ಕ್ಯಾಪಿಟಲ್ಸ್ 6 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತು 12 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ತಂಡ ಕೂಡ 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆಲುವನ್ನು ಸಾಧಿಸಿ, ಉಳಿದ 6 ಪಂದ್ಯಗಳಲ್ಲಿ ಸೋತು 12 ಅಂಕಗಳನ್ನು ಪಡೆದುಕೊಂಡಿದ್ದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಇನ್ನು ಈ ಎರಡೂ ತಂಡಗಳು ಸರಿಸಮನಾದ ಫಲಿತಾಂಶಗಳನ್ನು ಪಡೆದುಕೊಂಡಿದ್ದರೂ ಸಹ ಪಂಜಾಬ್ ಕಿಂಗ್ಸ್ ತಂಡಕ್ಕಿಂತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೆಚ್ಚಿನ ನೆಟ್ ರನ್ ರೇಟ್ ಹೊಂದಿರುವ ಕಾರಣ ಅಂಕಪಟ್ಟಿಯಲ್ಲಿ ತುಸು ಮೇಲಿನ ಸ್ಥಾನವನ್ನು ಪಡೆದುಕೊಂಡಿದೆ.

ಥಾಮಸ್ ಕಪ್: ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟು ಐತಿಹಾಸಿಕ ದಾಖಲೆ ಬರೆದ ಆಟಗಾರರ ಬಗ್ಗೆ ತಿಳಿಯಿರಿಥಾಮಸ್ ಕಪ್: ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟು ಐತಿಹಾಸಿಕ ದಾಖಲೆ ಬರೆದ ಆಟಗಾರರ ಬಗ್ಗೆ ತಿಳಿಯಿರಿ

ಹೀಗಾಗಿ ಈ ಎರಡೂ ತಂಡಗಳ ನಡುವೆ ಪ್ಲೇ ಆಫ್ ಪ್ರವೇಶಕ್ಕಾಗಿ ಪೈಪೋಟಿ ಏರ್ಪಟ್ಟಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕಪಟ್ಟಿಯಲ್ಲಿ ಏರಿಕೆಯನ್ನು ಕಾಣಲಿದೆ. ಹೀಗಾಗಿ ಪಂದ್ಯದಲ್ಲಿ ಇತ್ತಂಡಗಳು ಗೆಲುವಿನತ್ತ ಕಣ್ಣಿಟ್ಟಿದ್ದು ಪಂದ್ಯದಲ್ಲಿ ಜಯ ಸಾಧಿಸಿ ತಮ್ಮ ಪ್ಲೇ ಆಫ್ ಹಾದಿಯನ್ನು ಸುಲಭ ಪಡಿಸಿಕೊಳ್ಳುವತ್ತ ಕಣ್ಣಿಟ್ಟಿವೆ. ಇನ್ನು ಈ ಎರಡೂ ತಂಡಗಳ ಐಪಿಎಲ್ ಇತಿಹಾಸದ ಮುಖಾಮುಖಿ ಪಂದ್ಯಗಳ ವಿವರ ಈ ಕೆಳಕಂಡಂತಿದೆ ಓದಿ..

ಒಟ್ಟಾರೆ ಐಪಿಎಲ್ ಮುಖಾಮುಖಿ:

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ಇದುವರೆಗೂ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಒಟ್ಟು 29 ಪಂದ್ಯಗಳು ನಡೆದಿದ್ದು, ಪಂಜಾಬ್ ಕಿಂಗ್ಸ್ 15 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 14 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವೆ ಐಪಿಎಲ್ ಇತಿಹಾಸದಲ್ಲಿ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಮೇಲುಗೈ ಸಾಧಿಸಿದೆ.

ಕಳೆದ 5 ಪಂದ್ಯಗಳ ಮುಖಾಮುಖಿ:

ಈ ಬಾರಿಯ ಐಪಿಎಲ್ ಆವೃತ್ತಿಯ ಮುಖಾಮುಖಿ ಪಂದ್ಯವೂ ಸೇರಿದಂತೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ನಡೆದಿರುವ ಕೊನೆಯ 5 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಪಂಜಾಬ್ ಕಿಂಗ್ಸ್ ತಂಡ ಕೇವಲ ಒಂದೇ ಒಂದು ಪಂದ್ಯದಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಐಪಿಎಲ್ ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸ್ಪಷ್ಟ ಮೇಲುಗೈ ಸಾಧಿಸಿದೆ.

CSK vs GT: ಸಿಎಸ್‌ಕೆ ವಿರುದ್ಧ ಭರ್ಜರಿಯಾಗಿ ಗೆದ್ದ ಗುಜರಾತ್ ಟೈಟನ್ಸ್‌, ಪಾಯಿಂಟ್ಸ್ ಪಟ್ಟಿಯಲ್ಲಿ ನಂ.1CSK vs GT: ಸಿಎಸ್‌ಕೆ ವಿರುದ್ಧ ಭರ್ಜರಿಯಾಗಿ ಗೆದ್ದ ಗುಜರಾತ್ ಟೈಟನ್ಸ್‌, ಪಾಯಿಂಟ್ಸ್ ಪಟ್ಟಿಯಲ್ಲಿ ನಂ.1

ಕಳೆದ ಆವೃತ್ತಿಯ ಮುಖಾಮುಖಿ:

IPL ನಲ್ಲಿ RCB ಬಿಟ್ರೆ ಇನ್ಯಾವ ತಂಡವೂ ಇಂಥಾ ಕೆಟ್ಟ ದಾಖಲೆ ಮಾಡಿಲ್ಲ | Oneindia Kannada

2021ರ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯ ಲೀಗ್ ಹಂತದ 2 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪೈಕಿ ಎರಡೂ ಪಂದ್ಯಗಳಲ್ಲಿಯೂ ಸಹ ಡೆಲ್ಲಿ ಕ್ಯಾಪಿಟಲ್ಸ್ ಜಯ ಸಾಧಿಸಿ ಪಂಜಾಬ್ ಕಿಂಗ್ಸ್ ವಿರುದ್ಧ ಸಂಪೂರ್ಣ ಮೇಲುಗೈ ಸಾಧಿಸಿತ್ತು.

Story first published: Monday, May 16, 2022, 9:04 [IST]
Other articles published on May 16, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X