DC vs PBKS: ಹೈವೋಲ್ಟೇಜ್ ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ ಇಲೆವೆನ್ ಮಾಹಿತಿ; ಗೆದ್ದವರು ನಾಲ್ಕನೇ ಸ್ಥಾನಕ್ಕೆ!

ಸದ್ಯ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 64ನೇ ಪಂದ್ಯ ( ಮೇ 16 ) ನಡೆಯುತ್ತಿದ್ದು, ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯ ಮುಂಬೈನ ಡಾ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡು ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಆಡುವ ಬಳಗಗಳು:
ಪಂಜಾಬ್ ಕಿಂಗ್ಸ್ ಆಡುವ ಬಳಗ: ಜಾನಿ ಬೈರ್‌ಸ್ಟೋವ್, ಶಿಖರ್ ಧವನ್, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಮಯಾಂಕ್ ಅಗರ್ವಾಲ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್‌ಪ್ರೀತ್ ಬ್ರಾರ್, ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್, ಸರ್ಫರಾಜ್ ಖಾನ್, ಮಿಚೆಲ್ ಮಾರ್ಷ್, ರಿಷಭ್ ಪಂತ್ ( ನಾಯಕ / ವಿಕೆಟ್ ಕೀಪರ್), ಲಲಿತ್ ಯಾದವ್, ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್
ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು, ಪ್ಲೇಆಫ್ ಸುತ್ತಿಗೆ ಅರ್ಹತೆ ಗಿಟ್ಟಿಸಿಕೊಳ್ಳುವಲ್ಲಿ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಈಗಾಗಲೇ ಪ್ಲೇಆಫ್ ಪ್ರವೇಶಿಸಿದ್ದು, ರಾಜಸ್ತಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳೂ ಸಹ ಪ್ಲೇಆಫ್ ಪ್ರವೇಶಿಸುವುದು ಖಚಿತ ಎನ್ನಬಹುದು. ಹೀಗಾಗಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದ ಮೇಲೆ ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಣ್ಣಟ್ಟಿವೆ.
ಇನ್ನು ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಎರಡೂ ತಂಡಗಳೂ ಸಹ ತಲಾ 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು ಉಳಿದ 6 ಪಂದ್ಯಗಳಲ್ಲಿ ಸೋತು 12 ಅಂಕಗಳನ್ನು ಪಡೆದುಕೊಂಡಿವೆ. ಹೀಗೆ ಎರಡೂ ತಂಡಗಳೂ ಸಹ ಸರಿಸಮನಾದ ಅಂಕಗಳನ್ನು ಪಡೆದುಕೊಂಡಿದ್ದರೂ ಸಹ ನೆಟ್ ರನ್ ರೇಟ್ ಹೆಚ್ಚಿರುವ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ಐದನೇ ಸ್ಥಾನದಲ್ಲಿದ್ದು, ಪಂಜಾಬ್ ಕಿಂಗ್ಸ್ ಏಳನೇ ಸ್ಥಾನದಲ್ಲಿದೆ. ಆದರೆ ಇತ್ತಂಡಗಳಲ್ಲಿ ಯಾವುದೇ ತಂಡ ಗೆಲುವು ಕಂಡರೂ ನಾಲ್ಕನೇ ಸ್ಥಾನಕ್ಕೆ ಏರಲಿದ್ದು, ನಾಲ್ಕನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕುಸಿತ ಕಾಣಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications