RR vs DC: ಪಂದ್ಯದಲ್ಲಿ ಗೆಲ್ಲಲು ನಿಮ್ಮ ಡ್ರೀಮ್ ಟೀಮ್ ಹೀಗಿರಲಿ; ಈತನಿಗೆ ನಾಯಕತ್ವ ನೀಡಿ

ಮೇ 11ರಂದು ನಡೆಯಲಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 58ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯ ಎರಡೂ ತಂಡಗಳಿಗೂ ಸಹ ಬಹಳ ಮುಖ್ಯವಾದ ಪಂದ್ಯವಾಗಿದೆ. ಹೌದು, ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ 11 ಪಂದ್ಯಗಳನ್ನಾಡಿರುವ ರಾಜಸ್ಥಾನ್ ರಾಯಲ್ಸ್ 7 ಪಂದ್ಯಗಳಲ್ಲಿ ಗೆದ್ದು ಉಳಿದ 4 ಪಂದ್ಯಗಳಲ್ಲಿ ಸೋತು 14 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು ಉಳಿದ 6 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಹೀಗಾಗಿ ಪ್ಲೇಆಫ್ ಪ್ರವೇಶಿಸಬೇಕೆಂದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಅದರಲ್ಲಿಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಪರಿಣಮಿಸಿದೆ.
ಇನ್ನು ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಊಹೆಗಳಲ್ಲಿ ಕೆಲ ಕ್ರಿಕೆಟ್ ಅಭಿಮಾನಿಗಳು ತೊಡಗಿಕೊಂಡಿದ್ದರೆ, ಇನ್ನೂ ಕೆಲ ಅಭಿಮಾನಿಗಳು ಈ ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸುವುದರಲ್ಲಿ ನಿರತರಾಗಿದ್ದಾರೆ. ಹೀಗೆ ಈ ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸುತ್ತಿರುವ ಕ್ರಿಕೆಟ್ ಪ್ರೇಮಿಗಳು ಈ ಕೆಳಕಂಡ ಆಟಗಾರರನ್ನೊಳಗೊಂಡ ತಂಡಗಳನ್ನು ರಚಿಸಿದರೆ ಉತ್ತಮ ಫ್ಯಾಂಟಸಿ ಅಂಕಗಳನ್ನು ಗಳಿಸಿ ಜಯ ಸಾಧಿಸಬಹುದಾಗಿದೆ..
ಡ್ರೀಮ್ ಟೀಮ್ 1: 1 ಜೋಸ್ ಬಟ್ಲರ್, 2 ಯಶಸ್ವಿ ಜೈಸ್ವಾಲ್, 3 ಡೇವಿಡ್ ವಾರ್ನರ್, 4 ರಿಷಬ್ ಪಂತ್, 5 ಸಂಜು ಸ್ಯಾಮ್ಸನ್, 6 ರೋವ್ಮನ್ ಪೊವೆಲ್, 7 ಅಕ್ಸರ್ ಪಟೇಲ್, 8 ಟ್ರೆಂಟ್ ಬೌಲ್ಟ್, 9 ಖಲೀಲ್ ಅಹ್ಮದ್, 10 ಯುಜ್ವೇಂದ್ರ ಚಾಹಲ್, 11 ಕುಲದೀಪ್ ಸೇನ್,
ನಾಯಕ: ಸಂಜು ಸ್ಯಾಮ್ಸನ್ ಉಪ-ನಾಯಕ: ಜೋಸ್ ಬಟ್ಲರ್, ವಿಕೆಟ್ ಕೀಪರ್: ರಿಷಭ್ ಪಂತ್,
ಡ್ರೀಮ್ ಟೀಮ್ 2: 1 ಜೋಸ್ ಬಟ್ಲರ್, 2 ಡೇವಿಡ್ ವಾರ್ನರ್, 3 ಸಂಜು ಸಾಸ್ಮನ್, 4 ರಿಷಬ್ ಪಂತ್, 5 ದೇವದತ್ ಪಡಿಕ್ಕಲ್, 6 ರೋವ್ಮನ್ ಪೊವೆಲ್, 7 ಆರ್ ಅಶ್ವಿನ್, 8 ಶಾರ್ದೂಲ್ ಠಾಕೂರ್, 9 ಕುಲದೀಪ್ ಯಾದವ್, 10 ಅನ್ರಿಚ್ ನಾರ್ಟ್ಜೆ, 11 ಪ್ರಸಿದ್ಧ್ ಕೃಷ್ಣ.
ನಾಯಕ: ಸಂಜು ಸ್ಯಾಮ್ಸನ್, ಉಪನಾಯಕ: ಡೇವಿಡ್ ವಾರ್ನರ್, ವಿಕೆಟ್ ಕೀಪರ್: ರಿಷಬ್ ಪಂತ್.
ಪಂದ್ಯದ ಪ್ರೆಡಿಕ್ಷನ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಸತತವಾಗಿ ಉತ್ತಮ ಪ್ರದರ್ಶನ ನೀಡಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಹೇಳಕೊಳ್ಳುವಂತ ಉತ್ತಮ ಪ್ರದರ್ಶನ ನೀಡಲಾಗದೇ ಮಂಕಾಗಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಇಲ್ಲಿಯವರೆಗೂ ಸೆಣಸಾಟ ನಡೆಸಿರುವ ಪಂದ್ಯಗಳ ಪೈಕಿ ಬಹುತೇಕ ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದ್ದು, ಈ ಪಂದ್ಯದಲ್ಲಿಯೂ ಗೆಲ್ಲುವ ಫೇವರಿಟ್ ಆಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications