RR vs DC: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಗೆದ್ದಿರುವ ಬಲಿಷ್ಠ ತಂಡ ಯಾವುದು?

ಸದ್ಯ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 58ನೇ ಪಂದ್ಯ ನಾಳೆ ( ಮೇ 11 ) ನಡೆಯಲಿದೆ. ಮುಂಬೈನ ಡಾ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಈ ಬಾರಿಯ ಟೂರ್ನಿಯಲ್ಲಿ ಇತ್ತಂಡಗಳ ನಡುವೆ ನಡೆಯಲಿರುವ ಎರಡನೇ ಪಂದ್ಯವಾಗಿದ್ದು, ಇತ್ತಂಡಗಳ ನಡುವೆ ಏಪ್ರಿಲ್ 22ರಂದು ನಡೆದಿದ್ದ ಪ್ರಥಮ ಹಣಾಹಣಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 15 ರನ್‌ಗಳ ಜಯವನ್ನು ಕಂಡಿತ್ತು.
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಎರಡೂ ತಂಡಗಳು ಸಹ ಈ ಬಾರಿಯ ಟೂರ್ನಿಯಲ್ಲಿ ಪ್ಲೇಆಫ್ ಪ್ರವೇಶಿಸುವ ರೇಸ್‌ನಲ್ಲಿದ್ದು, ಇತ್ತಂಡಗಳ ನಡುವಿನ ಈ ಪಂದ್ಯ ಎರಡೂ ತಂಡಗಳಿಗೂ ಸಹ ಮಹತ್ವದ್ದಾಗಿದೆ. ಟೂರ್ನಿಯಲ್ಲಿ ಇಲ್ಲಿಯವರೆಗೂ 11 ಪಂದ್ಯಗಳನ್ನಾಡಿರುವ ರಾಜಸ್ಥಾನ್ ರಾಯಲ್ಸ್ 7 ಪಂದ್ಯಗಳಲ್ಲಿ ಗೆದ್ದು ಉಳಿದ 4 ಪಂದ್ಯಗಳಲ್ಲಿ ಸೋತು 14 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು ಉಳಿದ 6 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
ಹೀಗಾಗಿ ಈ ಎರಡೂ ತಂಡಗಳಿಗೂ ಇಂದಿನ ಪಂದ್ಯ ನಿರ್ಣಾಯಕವಾಗಿದ್ದು, ಗೆಲ್ಲಲೇಬೇಕಾದ ಒತ್ತಡದೊಂದಿಗೆ ಕಣಕ್ಕಿಳಿಯಲಿವೆ. ಇನ್ನು ಇತ್ತಂಡಗಳ ನಡುವೆ ಇದುವರೆಗೂ ನಡೆದಿರುವ ಪಂದ್ಯಗಳ ಪೈಕಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.
ಒಟ್ಟಾರೆ ಐಪಿಎಲ್ ಮುಖಾಮುಖಿ: ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ನಡೆದಿರುವ ಇದುವರೆಗೂ ಒಟ್ಟು 25 ಪಂದ್ಯಗಳು ನಡೆದಿದ್ದು, ರಾಜಸ್ಥಾನ್ ರಾಯಲ್ಸ್ 13 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 12 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಮೇಲುಗೈ ಸಾಧಿಸಿದೆ.
ಕಳೆದ 5 ಪಂದ್ಯಗಳ ಮುಖಾಮುಖಿ: ಈ ಬಾರಿ ನಡೆದಿರುವ ಪಂದ್ಯವೂ ಸೇರಿದಂತೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ನಡೆದಿರುವ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮೂರು ಪಂದ್ಯಗಳಲ್ಲಿ ಗೆದ್ದಿದ್ದರೆ, ರಾಜಸ್ಥಾನ್ ರಾಯಲ್ಸ್ ಉಳಿದ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮೇಲುಗೈ ಸಾಧಿಸಿದೆ.
ಕೊನೆಯ ಆವೃತ್ತಿಯ ಮುಖಾಮುಖಿ: ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯ ಲೀಗ್ ಹಂತದ ಒಟ್ಟು 2 ಪಂದ್ಯಗಳ ಮುಖಾಮುಖಿಯಲ್ಲಿ ಮೊದಲ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ಗೆದ್ದಿತ್ತು ಹಾಗೂ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಜಯ ಸಾಧಿಸಿತ್ತು.
ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ ( ನಾಯಕ ಮತ್ತು ವಿಕೆಟ್ ಕೀಪರ್ ), ದೇವದತ್ ಪಡಿಕ್ಕಲ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಕುಲದೀಪ್ ಸೇನ್
ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಆಡುವ ಬಳಗ: ಡೇವಿಡ್ ವಾರ್ನರ್, ಶ್ರೀಕರ್ ಭರತ್, ಮಿಚೆಲ್ ಮಾರ್ಷ್, ರಿಷಭ್ ಪಂತ್ ( ನಾಯಕ ಮತ್ತು ವಿಕೆಟ್ ಕೀಪರ್ ), ರೋವ್‌ಮನ್ ಪೊವೆಲ್, ರಿಪಾಲ್ ಪಟೇಲ್, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications