Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

DC vs RR: ಇತ್ತಂಡಗಳ ನಡುವಿನ 24 ಪಂದ್ಯಗಳಲ್ಲಿ ಹೆಚ್ಚು ಪಂದ್ಯ ಗೆದ್ದಿರುವ ಬಲಿಷ್ಟ ತಂಡ ಯಾವುದು?

IPL 2022: Delhi Capitals vs Rajasthan Royals head to head records details in kannada

ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 34ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಇತ್ತಂಡಗಳ ನಡುವಿನ ಈ ಪಂದ್ಯ ಪುಣೆಯ ಎಂಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೊರೊನಾ ಕಾಣಿಸಿಕೊಂಡಿರುವ ಕಾರಣ ಪ್ರಯಾಣವನ್ನು ನಿಯಂತ್ರಿಸುವ ಸಲುವಾಗಿ ಈ ಪಂದ್ಯವನ್ನು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಇಲ್ಲಿಯವರೆಗೂ ಒಟ್ಟು 6 ಪಂದ್ಯಗಳನ್ನಾಡಿದ್ದು, ನಾಲ್ಕರಲ್ಲಿ ಜಯ ಸಾಧಿಸಿ ಉಳಿದೆರಡು ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 6 ಪಂದ್ಯಗಳನ್ನಾಡಿದ್ದು, ಮೂರು ಪಂದ್ಯಗಳಲ್ಲಿ ಸೋತು ಉಳಿದ ಮೂರು ಪಂದ್ಯಗಳಲ್ಲಿ ಗೆದ್ದು, 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

rr vs dc

ಹೀಗೆ ಟೂರ್ನಿಯಲ್ಲಿ ಇಲ್ಲಿಯವರೆಗೂ ನಡೆದಿರುವ ಪಂದ್ಯಗಳ ಪೈಕಿ ರಾಜಸ್ಥಾನ್ ರಾಯಲ್ಸ್ ಹೆಚ್ಚು ಪಂದ್ಯಗಳನ್ನು ಗೆದ್ದು ಮುಂಚೂಣಿಯಲ್ಲಿದ್ದು, ಮತ್ತೊಂದು ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಮೇಲೇರುವ ಯೋಜನೆಯಲ್ಲಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಗೆಲುವಿನತ್ತ ಚಿತ್ತ ನೆಟ್ಟಿದೆ. ಇನ್ನು ಈ ಎರಡೂ ತಂಡಗಳು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು ಎಷ್ಟು ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ ಮತ್ತು ಯಾವ ತಂಡಗಳು ಎಷ್ಟು ಪಂದ್ಯಗಳಲ್ಲಿ ಗೆದ್ದಿವೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

ಒಟ್ಟಾರೆ ಐಪಿಎಲ್ ಮುಖಾಮುಖಿ:

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಒಟ್ಟು 24 ಪಂದ್ಯಗಳಲ್ಲಿ ಸೆಣಸಾಟ ನಡೆಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ 12 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ರಾಜಸ್ಥಾನ್ ರಾಯಲ್ಸ್ ಕೂಡ 12 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಇತ್ತಂಡಗಳ ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಎರಡೂ ತಂಡಗಳೂ ಸಹ ಸಮಬಲವನ್ನು ಸಾಧಿಸಿವೆ.

ಕೊನೆಯ 5 ಪಂದ್ಯಗಳ ಐಪಿಎಲ್ ಮುಖಾಮುಖಿ

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಕೊನೆಯದಾಗಿ ನಡೆದಿರುವ 5 ಪಂದ್ಯಗಳ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ರಾಜಸ್ಥಾನ್ ರಾಯಲ್ಸ್ ಒಂದು ಪಂದ್ಯದಲ್ಲಿ ಜಯ ಸಾಧಿಸಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಐಪಿಎಲ್ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸ್ಪಷ್ಟ ಮೇಲುಗೈಯನ್ನು ಸಾಧಿಸಿದೆ.

ಕಳೆದ ಆವೃತ್ತಿಯ ಮುಖಾಮುಖಿ ಫಲಿತಾಂಶ

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 2 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯಗಳ ಪೈಕಿ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವು ಸಾಧಿಸಿದರೆ, ದ್ವೀತೀಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಜಯ ಸಾಧಿಸಿತ್ತು.

Story first published: Friday, April 22, 2022, 15:11 [IST]
Other articles published on Apr 22, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+