For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022: DC vs RR: ಡೆಲ್ಲಿ vs ರಾಜಸ್ಥಾನ್ ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ XI

IPL 2022: Delhi Capitals vs Rajasthan Royals toss report and playing XI
DC vs RR ಪಂದ್ಯದಲ್ಲಿ ಅಸಲಿಗೆ ನಡೆದಿದ್ದೇನು | Oneindia Kannada

ಐಪಿಎಲ್‌ನಲ್ಲಿ ಇಂದು 34ನೇ ಪಂದ್ಯ ನಡೆಯುತ್ತಿದ್ದು ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸಿ ಗುರಿಯನ್ನು ನಿಗದಿಪಡಿಸುವ ಸವಾಲು ಸ್ವೀಕರಿಸಿದೆ.

ಇನ್ನು ಈ ಪಂದ್ಯದಲ್ಲಿ ಎರಡು ತಂಡಗಳು ಕೂಡ ಕಳೆದ ಪಂದ್ಯದಲ್ಲಿ ಆಡಿದ್ದ ಬಳಗದೊಂದಿಗೆ ಕಣಕ್ಕಿಳಿದಿದೆ. ಕಳೆದ ಪಂದ್ಯದಲ್ಲಿ ಈ ಎರಡು ತಂಡಗಳು ಕೂಡ ಗೆಲುವು ಸಾಧಿಸಿರುವ ಕಾರಣ ಗೆಲುವಿನ ಕಾಂಬಿನೇಶನ್ ಮುಂದುವರಿಸಲು ನಿರ್ಧರಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಯಾವ ತಂಡ ಮೇಲುಗೈ ಸಾಧಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಇನ್ನು ಈ ಪಂದ್ಯದಲ್ಲಿ ಎರಡು ತಮಡಗಳ ಬ್ಯಾಟಿಂಗ್ ವಿಭಾಗ ಬಲಿಷ್ಠವಿದೆ. ಅದರಲ್ಲೂ ಡೆಲ್ಲಿ ತಂಡದ ಬ್ಯಾಟಿಂಗ್ ವಿಭಾಗ ಹಾಗೂ ರಾಜಸ್ಥಾನ್ ಪಡೆಯ ಬೌಲಿಂಗ್ ವಿಭಾಗದ ನಡುವಿನ ಸೆಣೆಸಾಟ ಅಭಿಮಾನಿಗಳಿಗೆ ಮನರಂಜನೆ ನೀಡುವುದರಲ್ಲಿ ಅನುಮಾನವಿಲ್ಲ.

ರಾಜಸ್ಥಾನ್ ರಾಯಲ್ಸ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಅಂತಿಮ ಹಂತದವರೆಗೂ ತನ್ನ ಹೋರಾಟವನ್ನು ಸಡಿಲಗೊಳಿಸಲಿಲ್ಲ. ಅಂತಿಮ ಓವರ್‌ನಲ್ಲಿ 36 ರನ್‌ಗಳಿಸುವ ಅಸಾಧ್ಯ ಗುರಿ ಮುಂದಿದ್ದರೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಪೋವೆಲ್ ಅಂತಿಮ ಓವರ್‌ನ ಆರಂಭಿಕ ಮೂರು ಎಸೆತಗಳನ್ನು ಭರ್ಜರಿಯಾಗಿ ಸಿಕ್ಸರ್‌ಗೆ ಅಟ್ಟಿದ್ದರು. ಹೀಗಾಗಿ ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಲಿದೆಯಾ ಎಂಬ ಕುತೂಹಲ ಅಭಿಮಾನಿಗಳನ್ನು ಮೂಡಿತ್ತು. ಅಂತಿಮ ಮೂರು ಎಸೆತಗಳನ್ನು ಉತ್ತಮವಾಗಿ ಮಾಡಿದ ಆರ್ಆರ್ ವೇಗಿ ಒಬೆಡ್ ಮೆಕ್‌ಕಾಯ್ ಮೂರು ಎಸೆತಗಳಲ್ಲಿ ಕೂಡ ನಿಯಂತ್ರಣ ಸಾಧಿಸಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಗೆಲುವು ಸಾಧಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ರೋವ್ಮನ್ ಪೊವೆಲ್, ಸರ್ಫರಾಜ್ ಖಾನ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್

ಬೆಂಚ್: ಮನ್‌ದೀಪ್ ಸಿಂಗ್, ಶ್ರೀಕರ್ ಭರತ್, ಲುಂಗಿ ಎನ್‌ಗಿಡಿ, ಅಶ್ವಿನ್ ಹೆಬ್ಬಾರ್, ಪ್ರವೀಣ್ ದುಬೆ, ಅನ್ರಿಚ್ ನೋರ್ಟ್ಜೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ಕರುಣ್ ನಾಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಓಬೇದ್ ಮೆಕಾಯ್, ಯುಜ್ವೇಂದ್ರ ಚಹಾಲ್

ಬೆಂಚ್: ನವದೀಪ್ ಸೈನಿ, ಕೆಸಿ ಕಾರಿಯಪ್ಪ, ಡೆರಿಲ್ ಮಿಚೆಲ್, ಜೇಮ್ಸ್ ನೀಶಮ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಯಶಸ್ವಿ ಜೈಸ್ವಾಲ್, ಅನುನಯ್ ಸಿಂಗ್, ಕುಲದೀಪ್ ಸೇನ್, ಧ್ರುವ್ ಜುರೆಲ್, ಶುಭಂ ಗರ್ವಾಲ್

Story first published: Saturday, April 23, 2022, 0:32 [IST]
Other articles published on Apr 23, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+