For Quick Alerts
ALLOW NOTIFICATIONS  
For Daily Alerts
 

DC vs SRH: ಇತ್ತಂಡಗಳ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯ ಗೆದ್ದಿರುವ ಬಲಿಷ್ಠ ತಂಡ ಯಾವುದು?

IPL 2022: Delhi Capitals vs Sunrisers Hyderabad head to head record details in kannada

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 50ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ಬ್ರಬೌರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನು ಈ ಬಾರಿಯ ಆವೃತ್ತಿಯಲ್ಲಿನ ತನ್ನ ಮೊದಲ ಎರಡು ಪಂದ್ಯಗಳಲ್ಲಿ ಸೋಲನ್ನುಂಡಿದ್ದ ಸನ್ ರೈಸರ್ಸ್ ಹೈದರಾಬಾದ್ ನಂತರ ನಡೆದ ಪಂದ್ಯಗಳಲ್ಲಿ ಸಾಲು ಸಾಲು ಗೆಲುವನ್ನು ಕಂಡು ಕಮ್‌ಬ್ಯಾಕ್ ಮಾಡಿದ್ದು ಇದೀಗ ಪ್ಲೇಆಫ್ ಪ್ರವೇಶಿಸಲು ರೇಸ್‌ನಲ್ಲಿರುವ ತಂಡಗಳಲ್ಲೊಂದಾಗಿದೆ.

ಕೇನ್ ವಿಲಿಯಮ್ಸನ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ಇಲ್ಲಿಯವರೆಗೂ ಟೂರ್ನಿಯಲ್ಲಿ ಒಟ್ಟು 9 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಜಯ ಸಾಧಿಸಿದ್ದು 4 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದರೆ, ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ 9 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು ಉಳಿದ 5 ಪಂದ್ಯಗಳಲ್ಲಿ ಸೋತಿದ್ದು 8 ಅಂಕಗಳನ್ನು ಪಡೆದುಕೊಳ್ಳವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಇನ್ನು ಈ ಎರಡೂ ತಂಡಗಳೂ ಸಹ ಪ್ಲೇಆಫ್ ಪ್ರವೇಶ ಪಡೆದುಕೊಳ್ಳುವತ್ತ ಕಣ್ಣಿಟ್ಟಿದ್ದು ಪಂದ್ಯ ಅತಿ ಮುಖ್ಯದ್ದಾಗಿದೆ.

ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಒಟ್ಟು ಎಷ್ಟು ಪಂದ್ಯಗಳಲ್ಲಿ ಸೆಣಸಾಟ ನಡೆಸಿವೆ, ಈ ಪಂದ್ಯಗಳ ಪೈಕಿ ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಗೆದ್ದು ಬಲಿಷ್ಠವಾಗಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ ಓದಿ..

ಒಟ್ಟಾರೆ ಐಪಿಎಲ್ ಮುಖಾಮುಖಿ

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಒಟ್ಟು 20 ಪಂದ್ಯಗಳಲ್ಲಿ ಸೆಣಸಾಟ ನಡೆಸಿದ್ದು, ಈ ಪೈಕಿ 11 ಪಂದ್ಯಗಳಲ್ಲಿ ಸನ್ ರೈಸರ್ಸ್ ಹೈದರಾಬಾದ್ ಜಯ ಸಾಧಿಸಿದ್ದರೆ, ಉಳಿದ 9 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದಿತು. ಈ ಮೂಲಕ ಇತ್ತಂಡಗಳ ನಡುವಿನ ಒಟ್ಟಾರೆ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳ ಮುಖಾಮುಖಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೇಲುಗೈ ಸಾಧಿಸಿದೆ.

ಕಳೆದ ಆವೃತ್ತಿಯ ಮುಖಾಮುಖಿ

ಕಳೆದ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹೀನಾಯವಾಗಿ ಲೀಗ್ ಹಂತದಲ್ಲಿ ಹೊರಬಿದ್ದಿದ್ದ ಸನ್ ರೈಸರ್ಸ್ ಹೈದರಾಬಾದ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲೀಗ್ ಹಂತದ ಎರಡು ಪಂದ್ಯಗಳಲ್ಲಿ ಸೆಣಸಾಡಿತ್ತು. ಈ ಪೈಕಿ ಎರಡೂ ಪಂದ್ಯಗಳಲ್ಲಿಯೂ ಡೆಲ್ಲಿ ಕ್ಯಾಪಿಟಲ್ಸ್ ಎದುರು ಸನ್ ರೈಸರ್ಸ್ ಹೈದರಾಬಾದ್ ಸೋಲಿಗೆ ಶರಣಾಗಿತ್ತು. ಇತ್ತಂಡಗಳ ನಡುವಿನ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೂಪರ್ ಓವರ್‌ನಲ್ಲಿ ಗೆಲುವು ಸಾಧಿಸಿತ್ತು ಹಾಗೂ ಎರಡನೇ ಪಂದ್ಯದಲ್ಲಿಯೂ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದಿತ್ತು. ಈ ಮೂಲಕ ಕಳೆದ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮುಖಾಮುಖಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ಮೇಲುಗೈ ಸಾಧಿಸಿದೆ.

ಕಳೆದ 5 ಪಂದ್ಯಗಳ ಮುಖಾಮುಖಿ

ಸನ್ ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ನಡೆದಿರುವ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 3 ಪಂದ್ಯಗಳಲ್ಲಿ ಗೆದ್ದಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ಉಳಿದ ಎರಡು ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮೇಲುಗೈ ಸಾಧಿಸಿದೆ.

Story first published: Thursday, May 5, 2022, 10:41 [IST]
Other articles published on May 5, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+