SRH Vs RR: 8 ಕೋಟಿಗೆ ಖರೀದಿಸಿದ ಸ್ಪೋಟಕ ಆಟಗಾರನನ್ನು 8ನೇ ಕ್ರಮಾಂಕದಲ್ಲಿ ಕಣಕ್ಕಿಳಿಸಿ ಬೆಪ್ಪಾದ ಫ್ರಾಂಚೈಸಿ!

ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ಟೀಕೆ ಹಾಗೂ ಅತಿ ಹೆಚ್ಚು ವಿವಾದಕ್ಕೊಳಗಾಗಿದ್ದ ತಂಡ ಮತ್ತು ಅತಿ ಕಳಪೆ ಪ್ರದರ್ಶನ ನೀಡಿದ ತಂಡ ಎನಿಸಿಕೊಂಡು ಟೂರ್ನಿಯ ಲೀಗ್ ಹಂತದ ಬಹುತೇಕ ಪಂದ್ಯಗಳಲ್ಲಿ ಸೋತು ಹೀನಾಯವಾಗಿ ಟೂರ್ನಿಯಿಂದ ಹೊರಬಿದ್ದಿದ್ದ ಸನ್ ರೈಸರ್ಸ್ ಹೈದರಾಬಾದ್, ಕಳೆದ ಬಾರಿ ಡೇವಿಡ್ ವಾರ್ನರ್ ವಿಚಾರವಾಗಿ ತಾನು ಇಟ್ಟ ಹೆಜ್ಜೆಗಳಿಗೂ ಸಾಕಷ್ಟು ವಿರೋಧವನ್ನು ಎದುರಿಸಿತ್ತು. ಹೀಗೆ ಕಳೆದ ಐಪಿಎಲ್ ಆವೃತ್ತಿಯಲ್ಲಿ ಅತಿ ಹೀನಾಯ ಸ್ಥಿತಿಯಲ್ಲಿದ್ದ ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಈ ಬಾರಿಯ ಮೆಗಾ ಹರಾಜಿನಲ್ಲಿ ನೂತನ ಆಟಗಾರರನ್ನು ಖರೀದಿಸಿದ್ದು, ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಕಮ್‌ಬ್ಯಾಕ್ ಮಾಡಿತ್ತು.
ಆದರೆ, ಸನ್ ರೈಸರ್ಸ್ ಹೈದರಾಬಾದ್ ತಂಡದ ಈ ಕನಸಿಗೆ ರಾಜಸ್ಥಾನ್ ರಾಯಲ್ಸ್ ತಣ್ಣೀರನ್ನು ಎರಚಿದೆ. ಹೌದು, ಮಾರ್ಚ್ 29ರ ಮಂಗಳವಾರದಂದು ಪುಣೆಯ ಎಂಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 61 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿ 6 ವಿಕೆಟ್ ನಷ್ಟಕ್ಕೆ 210 ರನ್ ಗಳಿಸಿದ ರಾಜಸ್ಥಾನ್ ರಾಯಲ್ಸ್ ಎದುರಾಳಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 211 ರನ್‌ಗಳ ಕಠಿಣ ಗುರಿಯನ್ನು ನೀಡಿತು. ಇತ್ತ ತಂಡದಲ್ಲಿ ಕೇನ್ ವಿಲಿಯಮ್ಸನ್, ನಿಕೋಲಸ್ ಪೂರನ್, ಏಡಮ್ ಮಾರ್ಕ್ರಮ್ ಮತ್ತು ರೊಮಾರಿಯೊ ಶೆಫರ್ಡ್ ರೀತಿಯ ಸ್ಪೋಟಕ ಆಟಗಾರನ್ನು ಹೊಂದಿದ್ದ ಸನ್ ರೈಸರ್ಸ್ ಹೈದರಾಬಾದ್ ಈ ಬೃಹತ್ ಮೊತ್ತವನ್ನು ಚೇಸ್ ಮಾಡುವ ಪ್ರಯತ್ನ ಮಾಡಬಹದು ಎಂಬ ಊಹೆಯನ್ನು ಹಲವಾರು ಕ್ರಿಕೆಟ್ ಪ್ರೇಮಿಗಳು ಮಾಡಿದ್ದರು. ಆದರೆ, ಈ ಊಹೆ ಉಲ್ಟಾ ಆಗಿದ್ದು, ಸನ್ ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 149 ರನ್ ಗಳಸಿ ಎಲ್ಲಿಯೂ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಪೈಪೋಟಿ ನೀಡಲಾಗದೇ ಹೀನಾಯ ಸೋಲುಂಡು ಅಂಕಪಟ್ಟಿಯಲ್ಲಿ ನೆಲಕಚ್ಚಿದೆ. ಹೀಗೆ ತನ್ನ ಮೊದಲ ಪಂದ್ಯದಲ್ಲಿಯೇ ಸೋತ ಸನ್ ರೈಸರ್ಸ್ ಹೈದರಾಬಾದ್ ಮಾಡಿದ ತಪ್ಪಿನ ಕುರಿತು ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಮಾತನಾಡಿದ್ದು, ಈ ಕೆಳಕಂಡಂತೆ ಹೇಳಿಕೆ ನೀಡಿದ್ದಾರೆ.

8 ಕೋಟಿಗೆ ಖರೀದಿಸಿದ ಸ್ಪೋಟಕ ಆಟಗಾರನನ್ನು 8ನೇ ಬ್ಯಾಟ್ಸ್‌ಮನ್ ಆಗಿ ಕಣಕ್ಕಿಳಿಸಿದ ಸನ್ ರೈಸರ್ಸ್ ಹೈದರಾಬಾದ್
ಈ ಬಾರಿಯ ಐಪಿಎಲ್ ಆಟಗಾರರ ಮೆಗಾ ಹರಾಜು ಪ್ರಕ್ರಿಯೆಯಲ್ಲಿ 8.75 ಕೋಟಿಗೆ ಆಲ್‌ರೌಂಡರ್ ಆಟಗಾರ ವಾಷಿಂಗ್ಟನ್ ಸುಂದರ್ ಅವರನ್ನು ಖರೀದಿಸಿದ್ದ ಸನ್ ರೈಸರ್ಸ್ ಹೈದರಾಬಾದ್ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆತನನ್ನು ಎಂಟನೇ ಕ್ರಮಾಂಕದಲ್ಲಿ ಕಣಕ್ಕಿಳಿಸಿ ದಡ್ಡತನ ಪ್ರದರ್ಶಿಸಿದೆ. ಈ ಕುರಿತಾಗಿ ಮಾತನಾಡಿರುವ ಆಕಾಶ್ ಚೋಪ್ರಾ ಇಷ್ಟು ದೊಡ್ಡ ಮೊತ್ತ ಕೊಟ್ಟು ಖರೀದಿಸಿದ ಉತ್ತಮವಾಗಿ ಆಡಬಲ್ಲ ಆಟಗಾರನನ್ನು ಎಂಟನೇ ಕ್ರಮಾಂಕದಲ್ಲಿ ಕಣಕ್ಕಿಳಿಸಿದ್ದರ ಕುರಿತು ಕಿಡಿಕಾರಿದ್ದು, ವಾಷಿಂಗ್ಟನ್ ಸುಂದರ್ ಅವರನ್ನು ತುಸು ಬೇಗನೇ ಕಣಕ್ಕಿಳಿಸಬೇಕಿತ್ತು ಎಂಬ ಅಭಿಪ್ರಾಯ ಹೊರಹಾಕಿದ್ದಾರೆ.

ಸುಂದರ್ ನಿಕೋಲಸ್ ಪೂರನ್‌ಗಿಂತ ಚೆನ್ನಾಗಿ ಆಡಬಲ್ಲ
ಇನ್ನೂ ಮುಂದುವರೆದು ಮಾತನಾಡಿರುವ ಆಕಾಶ್ ಚೋಪ್ರಾ ಅಭಿಶೇಕ್ ಶರ್ಮಾರನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸಿ ವಾಷಿಂಗ್ಟನ್ ಸುಂದರ್ ಅವರನ್ನು ಮೇಲಿನ ಕ್ರಮಾಂಕದಲ್ಲಿಅ ಕಣಕ್ಕಿಳಿಸುವುದು ಉತ್ತಮ ಎಂದು ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಸಲಹೆ ನೀಡಿದ್ದಾರೆ. ನಿಮಗೆ ನಿಕೋಲಸ್ ಪೂರನ್ ಮೇಲೆ ಸಾಕಷ್ಟು ನಂಬಿಕೆಯಿದೆ ಆದರೆ, ಆತನಿಗಿಂತ ಚೆನ್ನಾಗಿ ಆಡಬಲ್ಲ ವಾಷಿಂಗ್ಟನ್ ಸುಂದರ್ ಮೇಲಿಲ್ಲ ಎಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕಿಡಿಕಾರಿದ್ದು, ಎಂಟನೇ ಕ್ರಮಾಂಕದಲ್ಲಿ ಕಣಕ್ಕಿಳಿಸಲು ಈತನಿಗೆ ಎಂಟು ಕೋಟಿ ನೀಡಿ ಖರೀದಿಸಿದ್ರಾ ಎಂದು ಪ್ರಶ್ನಿಸಿದ್ದಾರೆ.

ಅಬ್ಬರಿಸಿದ ಸುಂದರ್
ಎಂಟನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಾಷಿಂಗ್ಟನ್ ಸುಂದರ್ 14 ಎಸೆತಗಳನ್ನು ಎದುರಿಸಿ 40 ರನ್ ಬಾರಿಸಿ ಅಬ್ಬರಿಸಿದರು. 5 ಬೌಂಡರಿ ಮತ್ತು 2 ಸಿಕ್ಸರ್ ಬಾರಿಸಿದ ವಾಷಿಂಗ್ಟನ್ ಸುಂದರ್ ಅಬ್ಬರ ಕಂಡ ವೀಕ್ಷಕರೂ ಸಹ ಸುಂದರ್ ಅವರನ್ನು ತಡವಾಗಿ ಕಣಕ್ಕಿಳಿಸಿದ ಸನ್ ರೈಸರ್ಸ್ ವಿರುದ್ಧ ಕಿಡಿಕಾರಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications