ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆರ್‌ಸಿಬಿ ತಂಡದಿಂದ ಆಪದ್ಬಾಂದವನೇ ಹೊರಬೀಳುವ ಸಾಧ್ಯತೆ!; ಈತನಿಲ್ಲದೇ ಚೆನ್ನೈ ವಿರುದ್ಧ ಗೆಲ್ಲುತ್ತಾ ಆರ್‌ಸಿಬಿ?

IPL 2022: Dinesh Karthik is doubtful to participate in the match against CSK

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪ್ಲೇಆಫ್ ಸುತ್ತು ಸಮೀಪಿಸುತ್ತಿದ್ದಂತೆ ಅರ್ಹತೆ ಪಡೆದುಕೊಳ್ಳುವಲ್ಲಿ ವಿವಿಧ ತಂಡಗಳ ನಡುವೆ ಪೈಪೋಟಿ ಶುರುವಾಗಿದೆ. ಅದರಲ್ಲಿಯೂ ಆರಂಭದ ಪಂದ್ಯಗಳಲ್ಲಿ ಅಬ್ಬರಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹ್ಯಾಟ್ರಿಕ್ ಸೋಲನ್ನು ಕಂಡಿದ್ದು, ಪ್ಲೇಆಫ್ ಸುತ್ತಿಗೆ ಪ್ರವೇಶಿಸಲು ಹರಸಾಹಸ ಪಡಬೇಕಾದ ಹಂತಕ್ಕೆ ಬಂದು ನಿಂತಿದೆ.

IPL 2022: ಟೂರ್ನಿಯಲ್ಲಿ ಕಣಕ್ಕಿಳಿದಿರುವ ಅತಿ ಹೆಚ್ಚು ವಯಸ್ಸಾದ ಐವರು ಕ್ರಿಕೆಟಿಗರು ಇವರೇ!IPL 2022: ಟೂರ್ನಿಯಲ್ಲಿ ಕಣಕ್ಕಿಳಿದಿರುವ ಅತಿ ಹೆಚ್ಚು ವಯಸ್ಸಾದ ಐವರು ಕ್ರಿಕೆಟಿಗರು ಇವರೇ!

ಹೌದು, ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು 5 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಉಳಿದ 5 ಪಂದ್ಯಗಳಲ್ಲಿ ಸೋಲನ್ನು ಕಂಡು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಸದ್ಯ ಆರನೇ ಸ್ಥಾನದಲ್ಲಿದೆ. ಇನ್ನು ಗುಜರಾತ್ ಟೈಟನ್ಸ್ ವಿರುದ್ಧ ಗೆದ್ದ ಪಂಜಾಬ್ ಕಿಂಗ್ಸ್ ಟೂರ್ನಿಯಲ್ಲಿ ಆರ್‌ಸಿಬಿ ತಂಡದಷ್ಟೇ ಪಂದ್ಯಗಳಲ್ಲಿ ಗೆದ್ದಿದ್ದರೂ ಸಹ ಹೆಚ್ಚಿನ ನೆಟ್ ರನ್ ರೇಟ್ ಹೊಂದಿರುವ ಕಾರಣಕ್ಕೆ ಅಂಕಪಟ್ಟಿಯಲ್ಲಿ ಆರ್‌ಸಿಬಿಗಿಂತ ಮೇಲಕ್ಕೇರಿದೆ. ಹೀಗೆ ಪಂಜಾಬ್ ಕಿಂಗ್ಸ್ ಗುಜರಾತ್ ಟೈಟನ್ಸ್ ತಂಡವನ್ನು ಮಣಿಸಿದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇ ಆಫ್ ಪ್ರವೇಶ ಮತ್ತಷ್ಟು ಕಠಿಣವಾಗಿದ್ದು, ಇಂದು ( ಮೇ 4 ) ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ.

ಈತ ಚೆನ್ನಾಗಿ ಆಡುವುದು ತಲೆಮಾರಿಗೊಮ್ಮೆ; ಹೀನಾಯ ಟ್ರೋಲ್‌ಗೆ ತುತ್ತಾದ ಮಾಜಿ ಆರ್‌ಸಿಬಿ ಆಟಗಾರಈತ ಚೆನ್ನಾಗಿ ಆಡುವುದು ತಲೆಮಾರಿಗೊಮ್ಮೆ; ಹೀನಾಯ ಟ್ರೋಲ್‌ಗೆ ತುತ್ತಾದ ಮಾಜಿ ಆರ್‌ಸಿಬಿ ಆಟಗಾರ

ಹೀಗೆ ಗೆಲ್ಲಲೇಬೇಕಾದ ಒತ್ತಡದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಈ ಪಂದ್ಯ ಆರಂಭವಾಗುವುದಕ್ಕೂ ಮುನ್ನವೇ ಆಘಾತ ಎದುರಾಗಿದೆ. ತಂಡದ ಆಪದ್ಬಾಂದವ ಆಟಗಾರನಾದ ದಿನೇಶ್ ಕಾರ್ತಿಕ್ ಗಾಯದ ಸಮಸ್ಯೆಗೆ ಒಳಗಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಮಹತ್ವದ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ ಮೂಡಿಸಿದೆ. ಈ ಕುರಿತಾದ ಮತ್ತಷ್ಟು ಮಾಹಿತಿ ಮುಂದೆ ಇದೆ ಓದಿ.

ಗಾಯಕ್ಕೊಳಗಾಗಿದ್ದಾರೆ ಡಿಕೆ

ಗಾಯಕ್ಕೊಳಗಾಗಿದ್ದಾರೆ ಡಿಕೆ

ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವ ವೇಳೆ ದಿನೇಶ್ ಕಾರ್ತಿಕ್ ಕೈಗೆ ಪೆಟ್ಟು ಬಿದ್ದಿತ್ತು. ಹೀಗೆ ದಿನೇಶ್ ಕಾರ್ತಿಕ್‌ಗೆ ಪೆಟ್ಟು ಬಿದ್ದ ಕಾರಣ ಆ ಪಂದ್ಯದಲ್ಲಿ ಕಾರ್ತಿಕ್ ವಿಕೆಟ್ ಕೀಪಿಂಗ್ ಕೂಡ ಮಾಡಿರಲಿಲ್ಲ. ಹೌದು, ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ದಿನೇಶ್ ಕಾರ್ತಿಕ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದೇ ವಿಫಲರಾದರು ಹಾಗೂ ಗುಜರಾತ್ ಟೈಟನ್ಸ್ ಬ್ಯಾಟಿಂಗ್ ವೇಳೆ ಕಣಕ್ಕಿಳಿಯದ ದಿನೇಶ್ ಕಾರ್ತಿಕ್ ಬದಲಾಗಿ ಅನುಜ್ ರಾವತ್ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.

ದಿನೇಶ್ ಕಾರ್ತಿಕ್ ಇಲ್ಲದೇ ಆರ್‌ಸಿಬಿ ಸಿಎಸ್‌ಕೆ ವಿರುದ್ಧ ಗೆಲ್ಲುತ್ತಾ ಚೆನ್ನೈ?

ದಿನೇಶ್ ಕಾರ್ತಿಕ್ ಇಲ್ಲದೇ ಆರ್‌ಸಿಬಿ ಸಿಎಸ್‌ಕೆ ವಿರುದ್ಧ ಗೆಲ್ಲುತ್ತಾ ಚೆನ್ನೈ?

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ದಿನೇಶ್ ಕಾರ್ತಿಕ್ ಕಣಕ್ಕಿಳಿಯುವುದು ಅನುಮಾನ ಎನ್ನಲಾಗುತ್ತಿದ್ದು, ಇಂಥಹ ಮಹತ್ವದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ರೀತಿಯ ಫಿನಿಷರ್ ಇಲ್ಲದೇ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೋಲುಣಿಸುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಯಶಸ್ವಿಯಾಗುತ್ತಾ ಎಂಬ ಅನುಮಾನ ಶುರುವಾಗಿದೆ.

ದಿನೇಶ್ ಕಾರ್ತಿಕ್ ಭಾಗವಹಿಸುವಿಕೆ ಕುರಿತು ನಿರ್ಧಾರ ಯಾವಾಗ?

ದಿನೇಶ್ ಕಾರ್ತಿಕ್ ಭಾಗವಹಿಸುವಿಕೆ ಕುರಿತು ನಿರ್ಧಾರ ಯಾವಾಗ?

ಇನ್ನು ಗಾಯದ ಸಮಸ್ಯೆಗೆ ಒಳಗಾಗಿರುವ ದಿನೇಶ್ ಕಾರ್ತಿಕ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುತ್ತಾರಾ ಅಥವಾ ಇಲ್ಲವಾ ಎಂಬುದರ ಕುರಿತು ತಂಡದ ಮ್ಯಾನೇಜ್‌ಮೆಂಟ್ ಪಂದ್ಯ ಆರಂಭದ ಸನಿಹದಲ್ಲಿ ಘೋಷಿಸಲಿದೆ ಎನ್ನಲಾಗಿದೆ. ಹೌದು, ಪಂದ್ಯ ಆರಂಭವಾಗಲು ಕೆಲ ನಿಮಿಷಗಳು ಬಾಕಿ ಇರುವಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ದಿನೇಶ್ ಕಾರ್ತಿಕ್ ಕಣಕ್ಕಿಳಿಯುವ ಕುರಿತು ಅಂತಿಮ ತೀರ್ಮಾನವನ್ನು ಕೈಗೊಳ್ಳಲಿದೆ.

Story first published: Thursday, May 5, 2022, 14:53 [IST]
Other articles published on May 5, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X