DC vs MI: ಮುಂಬೈ ಇಂಡಿಯನ್ಸ್ ಜರ್ಸಿಯಲ್ಲಿನ ಫೋಟೋ ಶೇರ್ ಮಾಡಿದ ದಿನೇಶ್ ಕಾರ್ತಿಕ್

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಪ್ಲೇಆಫ್ ಹಂತಕ್ಕೇರಲು ನಿರ್ಣಾಯಕವಾಗಿದೆ. ಇದರ ಜೊತೆಗೆ ಆರ್‌ಸಿಬಿ ತಂಡ ಪ್ಲೇಆಪ್ ಹಂತಕ್ಕೇರಲು ಈ ಪಂದ್ಯದ ಫಲಿತಾಂಶ ನಿರ್ಣಾಯಕವಾಗಿದ್ದು ಮುಂಬೈ ಇಂಡಿಯನ್ಸ್ ತಂಡದ ಗೆದ್ದರೆ ಮಾತ್ರವೇ ಇದು ಸಾಧ್ಯವಾಗಲಿದೆ. ಹೀಗಾಗಿ ಆರ್‌ಸಿಬಿ ಅಭಿಮಾನಿಗಳು ಮುಂಬೈ ಹಾಗೂ ಡೆಲ್ಲಿ ವಿರುದ್ಧದ ಪಂದ್ಯದ ಮೇಲೆ ಸಾಕಷ್ಟು ನಿರೀಕ್ಷೆಯಿಟ್ಟು ಗಮನಿಸುತ್ತಿದ್ದಾರೆ.

ಅಭಿಮಾನಿಗಳ ಜೊತೆಗೆ ಆರ್‌ಸಿಬಿ ತಂಡದ ಆಟಗಾರರು ಕೂಡ ಮುಂಬೈ ಇಂಡಿಯನ್ಸ್ ತಂಡಕ್ಕೆ ನೇರವಾಗಿಯೇ ಬೆಂಬಲವನ್ನು ಸೂಚಿಸಿದ್ದಾರೆ. ಆರ್‌ಸಿಬಿ ತಂಡದ ಟ್ವಿಟ್ಟರ್ ಖಾತೆಯಲ್ಲಿ ಕೂಡ ಇಶೇಷ ಪೋಸ್ಟ್‌ಗಳನ್ನು ಮಾಡಲಾಗಿದ್ದು ತಮಾಷೆಯಾಗಿ ಮುಂಬೈ ಇಂಡಿಯನ್ಸ್ ತಂಡಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದೆ. ಇನ್ನು ಆರ್‌ಸಿಬಿ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ತಾವು ಕೂಡ ಮುಂಬೈ ತಂಡಕ್ಕೆ ಬೆಂಬಲವನ್ನು ಸೂಚಿಸಲಿದ್ದೇವೆ ಎಂದಿದ್ದಾರೆ.

ಒಲಿಂಪಿಕ್‌ನಲ್ಲಿ ಚಿನ್ನದ ಪದಕ ಗೆಲ್ಲುವುದು ನನ್ನ ಅಂತಿಮ ಗುರಿ: ನಿಖತ್ ಜರೀನ್ಒಲಿಂಪಿಕ್‌ನಲ್ಲಿ ಚಿನ್ನದ ಪದಕ ಗೆಲ್ಲುವುದು ನನ್ನ ಅಂತಿಮ ಗುರಿ: ನಿಖತ್ ಜರೀನ್

ಈ ಮಧ್ಯೆ ಆರ್‌ಸಿಬಿ ತಂಡದ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಸಾಮಾಜಿಕ ಜಾಲತಾಣದಲ್ಲಿ ಹಳೇಯ ಫೋಟೊವೊಂದನ್ನು ಹಂಚಿಕೊಂಡು ಗಮನಸೆಳೆದಿದ್ದಾರೆ. ಮುಂಬೈ ಇಂಡಿಯನ್ಸ್ ತಂಡಕ್ಕೆ ಬೆಂಬಲವನ್ನು ಸೂಚಿಸುವ ರೀತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಆಡುತ್ತಿದ್ದಾಗಿನ ಫೋಟೋವೊಂದನ್ನು ದಿನೇಶ್ ಕಾರ್ತಿಕ್ ಹಂಚಿಕೊಂಡಿದ್ದಾರೆ. ಇನ್ನು ಈ ಫೋಟೋಗೆ "ಆರ್ಕೈವ್ಸ್‌ನಲ್ಲಿ ದೊರೆಯಿತು" ಎಂದು ತಮಾಷೆಯಾಗಿ ಡಿಕೆ ಬರೆದುಕೊಂಡಿದ್ದಾರೆ.

ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಅದ್ಭುತ ಆರಂಭವನ್ನು ಪಡೆಯುವಲ್ಲಿ ಯಶಸ್ವಿಯಾಯಿತು. ನಂತರ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಉತ್ತಮ ಹೋರಾಟವನ್ನು ಪ್ರದರ್ಶಿಸಿದೆ. ನಿಗದಿತ 20 ಓವರ್‌ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ ತಂಡ 7 ವಿಕೆಟ್ ಕಳೆದುಕೊಂಡು 159 ರನ್‌ಗಳನ್ನು ಗಳಿಸಿದೆ.

ಪ್ಲೇಯಿಂಗ್ XI ಹೀಗಿದೆ: ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ರಮಣದೀಪ್ ಸಿಂಗ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಹೃತಿಕ್ ಶೋಕೀನ್, ರಿಲೆ ಮೆರೆಡಿತ್, ಜಸ್ಪ್ರೀತ್ ಬುಮ್ರಾ, ಮಯಾಂಕ್ ಮಾರ್ಕಂಡೆ
ಬೆಂಚ್: ಕೀರನ್ ಪೊಲಾರ್ಡ್, ಜಯದೇವ್ ಉನದ್ಕತ್, ಮುರುಗನ್ ಅಶ್ವಿನ್, ಫ್ಯಾಬಿಯನ್ ಅಲೆನ್, ಬೇಸಿಲ್ ಥಂಪಿ, ಅನ್ಮೋಲ್ಪ್ರೀತ್ ಸಿಂಗ್, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ಕುಮಾರ್ ಕಾರ್ತಿಕೇಯ, ಆಕಾಶ್ ಮಾಧ್ವಲ್, ರಾಹುಲ್ ಬುದ್ಧಿ, ಟ್ರಿಸ್ಟಾನ್ ಸ್ಟಬ್ಸ್, ಸಂಜಯ್ ಯಾದವ್

ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್ (ನಾಯಕ & ವಿಕೆಟ್ ಕೀಪರ್), ಸರ್ಫರಾಜ್ ಖಾನ್, ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್
ಬೆಂಚ್: ಮನ್‌ದೀಪ್ ಸಿಂಗ್, ಶ್ರೀಕರ್ ಭರತ್, ಟಿಮ್ ಸೀಫರ್ಟ್, ಲುಂಗಿ ಎನ್‌ಗಿಡಿ, ಮುಸ್ತಾಫಿಜುರ್ ರೆಹಮಾನ್, ಅಶ್ವಿನ್ ಹೆಬ್ಬಾರ್, ಪ್ರವೀಣ್ ದುಬೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್, ಲಲಿತ್ ಯಾದವ್

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Saturday, May 21, 2022, 21:43 [IST]
Other articles published on May 21, 2022

Latest Videos

  + More
  POLLS
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Yes No
  Settings X