IPL 2022: ಪಂಜಾಬ್ ವಿರುದ್ಧ ಆರ್‌ಸಿಬಿ ಸೋತರೂ ಎದುರಾಳಿಗಳಲ್ಲಿ ಈ ಕಾರಣಕ್ಕೆ ಶುರುವಾಗಿದೆ ನಡುಕ!

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗಿದ್ದು, ಟೂರ್ನಿಯ ಚೊಚ್ಚಲ ಪಂದ್ಯದಲ್ಲಿಯೇ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಹೀನಾಯ ಸೋಲನ್ನು ಕಾಣುವುದರ ಮೂಲಕ ನೀರಸ ಆರಂಭವನ್ನು ಪಡೆದುಕೊಂಡಿದೆ.
ಹೌದು, ಮಾರ್ಚ್ 27ರ ಭಾನುವಾರದಂದು ಮುಂಬೈನ ಡಿವೈ ಪಾಟೀಲ್ ಕ್ರಿಕೆಟ್ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 205 ರನ್ ಕಲೆಹಾಕಿ ಪಂಜಾಬ್ ಕಿಂಗ್ಸ್ ತಂಡಕ್ಕೆ 206 ರನ್‌ಗಳ ಕಠಿಣ ಸವಾಲನ್ನು ನೀಡಿದರೂ ಸಹ ಪಂಜಾಬ್ ಕಿಂಗ್ಸ್ ತಂಡ ಈ ಮೊತ್ತವನ್ನು ಇನ್ನೂ 1 ಓವರ್ ಬಾಕಿ ಇರುವಾಗಲೇ ಮುಟ್ಟುವುದರ ಮೂಲಕ ಭರ್ಜರಿ ಗೆಲುವನ್ನು ದಾಖಲಿಸಿದೆ. ಇತ್ತ ನಾಯಕ ಫಾಫ್ ಡು ಪ್ಲೆಸಿಸ್, ದಿನೇಶ್ ಕಾರ್ತಿಕ್ ಹಾಗೂ ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಬೃಹತ್ ಮೊತ್ತ ಕಲೆ ಹಾಕಿದರೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಲುಂಡಿರುವುದು ಚರ್ಚೆಗಳಿಗೆ ಕಾರಣವಾಗಿದೆ.
ಈ ಚರ್ಚೆಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯ ಸೋತಿರಬಹುದು ಆದರೆ ಆ ತಂಡದ ಬಹುದಿನಗಳ ಸಮಸ್ಯೆಗೆ ಈ ಪಂದ್ಯದ ಮೂಲಕ ಪರಿಹಾರ ಸಿಕ್ಕಿದೆ ಎಂಬ ಅಭಿಪ್ರಾಯಗಳನ್ನು ಕೂಡ ಕ್ರಿಕೆಟ್ ಪರಿಣಿತರು ವ್ಯಕ್ತಪಡಿಸುತ್ತಿದ್ದಾರೆ. ಅಷ್ಟಕ್ಕೂ ಪರಿಹಾರವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆ ಸಮಸ್ಯೆ ಯಾವುದು ಎಂಬುದರ ಕುರಿತಾದ ವಿವರ ಈ ಕೆಳಕಂಡಂತಿದೆ.

ಆರ್‌ಸಿಬಿಯ ಬಹುದಿನಗಳ ಸಮಸ್ಯೆಗೆ ಸಿಕ್ತು ಪರಿಹಾರ, ಎದುರಾಳಿಗಳಲ್ಲಿ ನಡುಕ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋತಿರಬಹುದು. ಆದರೆ ಈ ಪಂದ್ಯದಿಂದ ತಂಡದ ಹಲವು ದಿನಗಳ ಸಮಸ್ಯೆಗೆ ಪರಿಹಾರ ದೊರಕಿದೆ. ಹೌದು, ಈ ಹಿಂದೆ ಮೇಲಿನ ಕ್ರಮಾಂಕದ ಆಟಗಾರರು ಔಟ್ ಆದ ನಂತರ ಬರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಹೆಚ್ಚೇನೂ ರನ್ ಗಳಿಸುವುದಿಲ್ಲ ಹಾಗೂ ಸ್ಪೋಟಕ ಬ್ಯಾಟಿಂಗ್ ನಡೆಸುವುದಿಲ್ಲ ಎಂಬ ಮೈನಸ್ ಪಾಯಿಂಟ್ಸ್ ಇದ್ದವು. ಆದರೆ ಇದೀಗ ಈ ಸಮಸ್ಯೆಗೆ ದಿನೇಶ್ ಕಾರ್ತಿಕ್ ಅಬ್ಬರದ ಬ್ಯಾಟಿಂಗ್ ಉತ್ತರವನ್ನು ನೀಡಿದ್ದು, ತಂಡದ ಮೇಲಿನ ಕ್ರಮಾಂಕದ ಆಟಗಾರರು ಔಟ್ ಆದ ನಂತರವೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವೇಗವಾಗಿ ರನ್ ಕಲೆ ಹಾಕಲಿದೆ ಎಂಬುದನ್ನು ತಿಳಿಸಿಕೊಟ್ಟಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯಮ ಕ್ರಮಾಂಕ ಬಲಿಷ್ಠವಾಗಿಲ್ಲ ಎಂದು ಆಟದ ಯೋಜನೆ ಮಾಡುತ್ತಿದ್ದ ತಂಡಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಉತ್ತರ ನೀಡಿದೆ.

ಅಬ್ಬರಿಸಿದ ಡಿಕೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ 57 ಎಸೆತಗಳಿಗೆ 88 ರನ್ ಬಾರಿಸಿ ಔಟ್ ಆದ ಬೆನ್ನಲ್ಲೇ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದಿನೇಶ್ ಕಾರ್ತಿಕ್ 14 ಎಸೆತಗಳಲ್ಲಿ ಅಜೇಯ 32 ರನ್ ಬಾರಿಸಿ ಮಿಂಚಿದ್ದಾರೆ. ಸಾಮಾನ್ಯವಾಗಿ ಫಿನಿಷಿಂಗ್ ಹಂತದಲ್ಲಿ ಕಣಕ್ಕಿಳಿಯುವ ದಿನೇಶ್ ಕಾರ್ತಿಕ್ ಈ ಪಂದ್ಯದಲ್ಲಿ ಅಬ್ಬರಿಸಿರುವುದು ಎದುರಾಳಿ ತಂಡಗಳಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ.

ಗ್ಲೆನ್ ಮ್ಯಾಕ್ಸ್‌ವೆಲ್ ಆಗಮನದ ನಂತರ ಮತ್ತಷ್ಟು ಬಲಿಷ್ಠವಾಗಲಿದೆ ತಂಡ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪವರ್ ಹಿಟ್ಟರ್ ಗ್ಲೆನ್ ಮ್ಯಾಕ್ಸ್‌ವೆಲ್ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇನ್ನು ಮುಂದಿನ ಪಂದ್ಯಗಳಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ತಂಡ ಸೇರಿಕೊಂಡ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತಷ್ಟು ಬಲಿಷ್ಠವಾಗಲಿದ್ದು, ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ ಬಲಿಷ್ಠ ಬ್ಯಾಟಿಂಗ್ ಲೈನ್ಅಪ್ ತಂಡಕ್ಕೆ ದೊಡ್ಡ ಪ್ಲಸ್ ಪಾಯಿಂಟ್ ಆಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications