For Quick Alerts
ALLOW NOTIFICATIONS  
For Daily Alerts
 

IPL 2022: ರಜತ್ ಪಾಟಿದಾರ್ ಭರ್ಜರಿ ಶತಕ; ಲಕ್ನೋಗೆ ಬೃಹತ್ ರನ್ ಗುರಿ ನೀಡಿದ ಆರ್‌ಸಿಬಿ

IPL 2022 Eliminator: Lucknow Super Giants Need 208 Runs To Win Against Royal Challengers Bangalore

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ 2022ರ ಪ್ಲೇಆಫ್ ಹಂತಗಳ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು (ಬುಧವಾರ, ಮೇ 25) ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಾಡುತ್ತಿವೆ.

ರಜತ್ ಪಾಟಿದಾರ್ ಭರ್ಜರಿ ಶತಕ ಹಾಗೂ ದಿನೇಶ್ ಕಾರ್ತಿಕ್ ಅವರ ಅಮೋಘ ಬ್ಯಾಟಿಂಗ್ ಮೂಲಕ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿ, ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಬೃಹತ್ ಟಾರ್ಗೆಟ್ ನೀಡಿದರು.

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ದುಕೊಂಡಿದ್ದರು. ಹೀಗಾಗಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಿತು.

IPL 2022 Eliminator: Lucknow Super Giants Need 208 Runs To Win Against Royal Challengers Bangalore

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕರಾಗಿ ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಕಣಕ್ಕಿಳಿದರು. ಆದರೆ ಮೊದಲ ಓವರ್‌ನಲ್ಲಿಯೇ ಫಾಫ್ ಡು ಪ್ಲೆಸಿಸ್ ವಿಕೆಟ್ ಒಪ್ಪಿಸಿದರು. ನಂತರ ವಿರಾಟ್ ಕೊಹ್ಲಿ ರಜತ್ ಪಾಟಿದಾರ್ ಜೊತೆ ಉತ್ತಮ ಜೊತೆಯಾಟವಾಡಿದರು.

ಉತ್ತಮವಾಗಿ ಆಡುತ್ತಿರುವಾಗಲೇ ವಿರಾಟ್ ಕೊಹ್ಲಿ ಆವೇಶ್ ಖಾನ್ ಬೌಲಿಂಗ್‌ನಲ್ಲಿ ವಿಕೆಟ್ ನೀಡಿ, ಮತ್ತೆ ನಿರಾಸೆ ಅನುಭವಿಸಿದರು. ನಂತರ ಬಂದ ಗ್ಲೆನ್ ಮ್ಯಾಕ್ಸ್‌ವೆಲ್ ಒಂದು ಸಿಕ್ಸರ್ ಬಾರಿಸಿದರೂ, ನಂತರದ ಬಾಲ್‌ನಲ್ಲಿ ಮತ್ತೊಂದು ಸಿಕ್ಸರ್ ಬಾರಿಸಲು ಹೋಗಿ ಔಟಾದರು.

ನಂತರ ಜೊತೆಗೂಡಿದ ರಜತ್ ಪಾಟಿದಾರ್ (112) ಮತ್ತು ದಿನೇಶ್ ಕಾರ್ತಿಕ್ (37) ಮುರಿಯದ ಐದನೇ ವಿಕೆಟ್‌ಗೆ 43 ಎಸೆತಗಳಲ್ಲಿ 92 ರನ್‌ಗಳ ಜೊತೆಯಾಟ ನೀಡಿದರು.

IPL 2022 Eliminator: Lucknow Super Giants Need 208 Runs To Win Against Royal Challengers Bangalore

ಇನ್ನು ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಎಲ್ಲ ಬೌಲರ್‌ಗಳು ದುಬಾರಿಯಾದರು. ಮೊಹ್ಸಿನ್ ಖಾನ್ 4 ಓವರ್‌ಗಳಲ್ಲಿ 25 ರನ್ ನೀಡಿ ಒಂದು ವಿಕೆಟ್ ಪಡೆದರು. ಕೃಣಾಲ್ ಪಾಂಡ್ಯ 4 ಓವರ್‌ಗಳಲ್ಲಿ 39 ರನ್ ನೀಡಿ ಒಂದು ವಿಕೆಟ್ ಪಡೆದರು. ಆವೇಶ್ ಖಾನ್ ಮತ್ತು ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್ ಪಡೆದು ಹೆಚ್ಚು ರನ್ ಬಿಟ್ಟುಕೊಟ್ಟರು.

ಆಡುವ 11ರ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ) ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್ , ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ವನಿಂದು ಹಸರಂಗಾ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್

LSG ತಂಡವನ್ನು ಎಲಿಮಿನೇಟ್ ಮಾಡಿದ RCB | Oneindia Kannada

ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್) ಕೆ.ಎಲ್. ರಾಹುಲ್ (ನಾಯಕ), ಎವಿನ್ ಲೇವಿಸ್, ದೀಪಕ್ ಹೂಡಾ, ಮನನ್ ವೋಹ್ರಾ, ಕೃಣಾಲ್ ಪಾಂಡ್ಯ, ಮಾರ್ಕಸ್ ಸ್ಟೋಯ್ನಿಸ್, ಚಮೀರ, ರವಿ ಬಿಷ್ಣೋಯಿ, ಆವೇಶ್ ಖಾನ್, ಮೊಹ್ಸಿನ್ ಖಾನ್

Story first published: Wednesday, May 25, 2022, 22:17 [IST]
Other articles published on May 25, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+