IPL 2022 ಎಲಿಮಿನೇಟರ್: RCB vs LSG ಟಾಸ್ ವರದಿ, ಆಡುವ 11ರ ಬಳಗ

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ 2022ರ ಪ್ಲೇಆಫ್ ಹಂತಗಳ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು (ಬುಧವಾರ, ಮೇ 25) ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಲಿದೆ.
ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವು ಈ ಋತುವಿನ ಪಂದ್ಯಾವಳಿಯ ಅತ್ಯುತ್ತಮ ತಂಡಗಳಲ್ಲಿ ಒಂದಾದ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದೆ.
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ಮಹತ್ವದ ಪಂದ್ಯವನ್ನು ಆಡಲು ಸಜ್ಜಾಗಿದ್ದು, ಈ ಎಲಿಮಿನೇಟರ್ ಪಂದ್ಯದ ವಿಜೇತರು ಕ್ವಾಲಿಫೈಯರ್ 2ರಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈಗಾಗಲೇ ಗುಜರಾತ್ ಟೈಟನ್ಸ್ ಐಪಿಎಲ್ 2022ರ ಫೈನಲ್ ಪ್ರವೇಶಿಸಿದ ಮೊದಲ ತಂಡವಾಗಿದೆ.

ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಪಂದ್ಯಗಳು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದ್ದರೆ, ಕ್ವಾಲಿಫೈಯರ್ 2 ಮತ್ತು ಫೈನಲ್ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಆಡುವ 11ರ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ) ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್ , ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ವನಿಂದು ಹಸರಂಗಾ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್
ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್) ಕೆ.ಎಲ್. ರಾಹುಲ್ (ನಾಯಕ), ಎವಿನ್ ಲೇವಿಸ್, ದೀಪಕ್ ಹೂಡಾ, ಮನನ್ ವೋಹ್ರಾ, ಕೃಣಾಲ್ ಪಾಂಡ್ಯ, ಮಾರ್ಕಸ್ ಸ್ಟೋಯ್ನಿಸ್, ಚಮೀರ, ರವಿ ಬಿಷ್ಣೋಯಿ, ಆವೇಶ್ ಖಾನ್, ಮೊಹ್ಸಿನ್ ಖಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications