ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RCB vs LSG Highlights: ಕೆಎಲ್ ರಾಹುಲ್ ಹೋರಾಟ ವ್ಯರ್ಥ, ಲಕ್ನೋಗೆ ಮಣ್ಣು ಮುಕ್ಕಿಸಿದ ಆರ್‌ಸಿಬಿ ಟ್ರೋಫಿ ಕನಸು ಜೀವಂತ

IPL 2022 Eliminator: Royal Challengers Bangalore Beat Lucknow Super Giants By 14 Runs and Entered Qualifier 2

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ 2022ರ ಪ್ಲೇಆಫ್ ಹಂತಗಳ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು (ಬುಧವಾರ, ಮೇ 25) ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಕ್ವಾಲಿಫೈಯರ್ 2 ಅನ್ನು ಪ್ರವೇಶಿಸಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಎಲಿಮಿನೇಟರ್ ಆರ್‌ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 14 ರನ್‌ಗಳ ಭರ್ಜರಿ ದಾಖಲಿಸಿದರು. ಲಕ್ನೋ ನಾಯಕ ಕೆಎಲ್ ರಾಹುಲ್ (79) ಅವರ ಬಿರುಸಿನ ಬ್ಯಾಟಿಂಗ್ ವ್ಯರ್ಥವಾಯಿತು. ಆ ಮೂಲಕ ಕ್ವಾಲಿಫೈಯರ್ 2ರಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಆರ್‌ಸಿಬಿ ಎದುರಿಸಲಿದೆ.

ರಜತ್ ಪಾಟಿದಾರ್ ಭರ್ಜರಿ ಶತಕ ಹಾಗೂ ದಿನೇಶ್ ಕಾರ್ತಿಕ್ ಅವರ ಅಮೋಘ ಬ್ಯಾಟಿಂಗ್ ಮೂಲಕ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿ, ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಬೃಹತ್ ಟಾರ್ಗೆಟ್ ನೀಡಿದರು.

IPL 2022 Eliminator: Royal Challengers Bangalore Beat Lucknow Super Giants By 14 Runs and Entered Qualifier 2

208 ರನ್‌ಗಳ ಬೃಹತ್ ಮೊತ್ತ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಆರಂಭದಲ್ಲಿಯೇ ಕ್ವಿಂಟನ್ ಡಿ ಕಾಕ್ ವಿಕೆಟ್ ಕಳೆದುಕೊಂಡರು. ಆರಂಭಿಕರಾಗಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ ಮತ್ತು ಮನನ್ ವೋಹ್ರಾ ಬಿರುಸಿನ ಬ್ಯಾಟಿಂಗ್ ಮೂಲಕ ಆರ್‌ಸಿಬಿ ಬೌಲರ್‌ಗಳ ಬೆವರಿಳಿಸಿದರು. ನಂತರ ಉತ್ತಮವಾವಿ ಬ್ಯಾಟಿಂಗ್ ಆಡುತ್ತಿರುವ ಮನನ್ ವೋಹ್ರಾ ವಿಕೆಟ್ ಒಪ್ಪಿಸಿದರು.

ನಂತರ ದೀಪಕ್ ಹೂಡಾ ಮತ್ತು ಕೆಎಲ್ ರಾಹುಲ್ ಉತ್ತಮ ಜೊತೆಯಾಟವಾಡಿದರು. ಕೊನೆಯಲ್ಲಿ ರಾಹುಲ್ ಔಟಾಗುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಸೋಲೊಪ್ಪಿಕೊಂಡಿತು ಮತ್ತು ಟೂರ್ನಿಯಲ್ಲಿ ನಾಲ್ಕನೇ ಸ್ಥಾನ ಪಡೆದು ಪ್ರಶಸ್ತಿ ರೇಸ್‌ನಿಂದ ಹೊರಬಿದ್ದಿತು.

ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕರಾಗಿ ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಕಣಕ್ಕಿಳಿದರು. ಆದರೆ ಮೊದಲ ಓವರ್‌ನಲ್ಲಿಯೇ ಫಾಫ್ ಡು ಪ್ಲೆಸಿಸ್ ವಿಕೆಟ್ ಒಪ್ಪಿಸಿದರು. ನಂತರ ವಿರಾಟ್ ಕೊಹ್ಲಿ ರಜತ್ ಪಾಟಿದಾರ್ ಜೊತೆ ಉತ್ತಮ ಜೊತೆಯಾಟವಾಡಿದರು.

IPL 2022 Eliminator: Royal Challengers Bangalore Beat Lucknow Super Giants By 14 Runs and Entered Qualifier 2

ಉತ್ತಮವಾಗಿ ಆಡುತ್ತಿರುವಾಗಲೇ ವಿರಾಟ್ ಕೊಹ್ಲಿ ಆವೇಶ್ ಖಾನ್ ಬೌಲಿಂಗ್‌ನಲ್ಲಿ ವಿಕೆಟ್ ನೀಡಿ, ಮತ್ತೆ ನಿರಾಸೆ ಅನುಭವಿಸಿದರು. ನಂತರ ಬಂದ ಗ್ಲೆನ್ ಮ್ಯಾಕ್ಸ್‌ವೆಲ್ ಒಂದು ಸಿಕ್ಸರ್ ಬಾರಿಸಿದರೂ, ನಂತರದ ಬಾಲ್‌ನಲ್ಲಿ ಮತ್ತೊಂದು ಸಿಕ್ಸರ್ ಬಾರಿಸಲು ಹೋಗಿ ಔಟಾದರು.

ನಂತರ ಜೊತೆಗೂಡಿದ ರಜತ್ ಪಾಟಿದಾರ್ (112) ಮತ್ತು ದಿನೇಶ್ ಕಾರ್ತಿಕ್ (37) ಮುರಿಯದ ಐದನೇ ವಿಕೆಟ್‌ಗೆ 43 ಎಸೆತಗಳಲ್ಲಿ 92 ರನ್‌ಗಳ ಜೊತೆಯಾಟ ನೀಡಿದರು.

LSG ತಂಡವನ್ನು ಎಲಿಮಿನೇಟ್ ಮಾಡಿದ RCB | Oneindia Kannada

ಇನ್ನು ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಎಲ್ಲ ಬೌಲರ್‌ಗಳು ದುಬಾರಿಯಾದರು. ಮೊಹ್ಸಿನ್ ಖಾನ್ 4 ಓವರ್‌ಗಳಲ್ಲಿ 25 ರನ್ ನೀಡಿ ಒಂದು ವಿಕೆಟ್ ಪಡೆದರು. ಕೃಣಾಲ್ ಪಾಂಡ್ಯ 4 ಓವರ್‌ಗಳಲ್ಲಿ 39 ರನ್ ನೀಡಿ ಒಂದು ವಿಕೆಟ್ ಪಡೆದರು. ಆವೇಶ್ ಖಾನ್ ಮತ್ತು ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್ ಪಡೆದು ಹೆಚ್ಚು ರನ್ ಬಿಟ್ಟುಕೊಟ್ಟರು.

Story first published: Thursday, May 26, 2022, 10:30 [IST]
Other articles published on May 26, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X