IPL 2022: ಪಂಜಾಬ್‌ಗೆ 206 ರನ್‌ಗಳ ಬೃಹತ್ ಗುರಿ ನೀಡಿದ ಆರ್‌ಸಿಬಿ

ಡಿ.ವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಅಬ್ಬರದ ಬ್ಯಾಟಿಂಗ್ ನಡೆಸಿದ್ದು, ಪಂಜಾಬ್ ಕಿಂಗ್ಸ್‌ಗೆ 206ರನ್‌ಗಳ ಬೃಹತ್ ಗುರಿ ನೀಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಆರ್‌ಸಿಬಿ ಅತ್ಯಂತ ನಿಧಾನಗತಿಯ ಆರಂಭ ಪಡೆಯಿತು. ನಾಯಕ ಫಾಫ್ ಡುಪ್ಲೆಸಿಸ್ ಆರಂಭದಲ್ಲಿ ರನ್‌ಗಳಿಸಲು ಸ್ವಲ್ಪ ಪರದಾಟ ನಡೆಸಿದ್ರೂ ಸಹ ನಂತರ ತನ್ನ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ರು.
ಪಂದ್ಯದ ಮೂಲೆ ಮೂಲೆಗೆ ಚೆಂಡಿನ ದರ್ಶನ ಮಾಡಿಸಿದ ಫಾಫ್ ಡುಪ್ಲೆಸಿಸ್ 57 ಎಸೆತಗಳಲ್ಲಿ 88 ರನ್ ಸಿಡಿಸಿದ್ರು. ಇವರ ಇನ್ನಿಂಗ್ಸ್‌ನಲ್ಲಿ 3 ಬೌಂಡರಿ ಮತ್ತು 7 ಅಮೋಘ ಸಿಕ್ಸರ್‌ಗಳಿದ್ದವು. ಓಪನರ್ ಅನುಜ್ ರಾವತ್ 21ರನ್‌ಗಳಿಸಿ ರಾಹುಲ್ ಚಹಾರ್‌ಗೆ ವಿಕೆಟ್ ಒಪ್ಪಿಸಿದ ಬಳಿಕ ಆಗಮಿಸಿದ ವಿರಾಟ್ ಕೊಹ್ಲಿ ಕೂಡ ಸ್ಫೋಟಕ ಆಟವಾಡಿದ್ರು.
ವಿರಾಟ್ ಕೊಹ್ಲಿ ಎದುರಿಸಿದ 29 ಎಸೆತಗಳಲ್ಲಿ 41ರನ್ ಸಿಡಿಸುವ ಮೂಲಕ ಅಜೇಯರಾಗಿ ಉಳಿದ್ರು. ಫಾಫ್ ಡುಪ್ಲೆಸಿಸ್ ಜೊತೆಗೂಡಿ ಎರಡನೇ ವಿಕೆಟ್‌ಗೆ ಶತಕದ ಜೊತೆಯಾಟವಾಡಿದ್ರು. ಇನ್ನು ಉತ್ತಮ ಇನ್ನಿಂಗ್ಸ್ ಆಡಿ ಶತಕದತ್ತ ಹೆಜ್ಜೆ ಇಟ್ಟಿದ್ದ ಫಾಫ್, ಅರ್ಷ್‌ದೀಪ್ ಬೌಲಿಂಗ್‌ನಲ್ಲಿ ಶಾರೂಕ್ ಖಾನ್ ಹಿಡಿದ ಉತ್ತಮ ಕ್ಯಾಚ್‌ಗೆ ಪೆವಿಲಿಯನ್ ಸೇರಿಕೊಂಡ್ರು.
ಫಾಫ್ ಔಟಾದ ಬಳಿಕ ಕ್ರೀಸ್‌ಗಿಳಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಪಂಜಾಬ್ ಕಿಂಗ್ ಬೌಲರ್‌ಗಳನ್ನ ಧೂಳೀಪಟ ಮಾಡಿದ್ರು. ಡಿಕೆ ಎದುರಿಸಿದ ಕೇವಲ 14 ಎಸೆತಗಳಲ್ಲಿ 3 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ ಅಜೇಯ 32 ರನ್ ಚಚ್ಚಿದ್ರು. ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 205 ರನ್ ಕಲೆಹಾಕಿದ್ದು, ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್‌ಗೆ 206ರನ್ ಟಾರ್ಗೆಟ್ ನೀಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications