'ಮೋದಿಜೀ ಇದೇನಾ ನೀವು ಹೇಳಿದ ಅಚ್ಛೇ ದಿನ್?': ಆರ್‌ಸಿಬಿ vs ಚೆನ್ನೈ ಪಂದ್ಯದ ವೇಳೆ ಅಭಿಮಾನಿಯ ಅಳಲು

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಮುಖಾಮುಖಿಯಾಗಿದ್ದು, ಟೂರ್ನಿಯ 22ನೇ ಪಂದ್ಯದಲ್ಲಿ ಪರಸ್ಪರ ಸೆಣಸಾಡಿವೆ. ಇನ್ನು ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ಡಾ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದು, ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 23 ರನ್‌ಗಳ ಅಂತರದಿಂದ ಸೋಲಿಸಿ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ರಾಬಿನ್ ಉತ್ತಪ್ಪ ಮತ್ತು ಶಿವಂ ದುಬೆ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 216 ರನ್ ಗಳಿಸಿ ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 217 ರನ್ ಗುರಿ ನೀಡಿತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 193 ರನ್ ಕಲೆಹಾಕಿತು.
ಹೀಗೆ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸೋಲು ತಂಡದ ಅಭಿಮಾನಿಗಳಿಗೆ ಬೇಸರವನ್ನುಂಟುಮಾಡದಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವು ಆ ತಂಡದ ಅಭಿಮಾನಿಗಳ ಪಾಲಿಗೆ ಸಂತಸವನ್ನುಂಟು ಮಾಡಿದೆ. ಆದರೆ ಈ ಎರಡೂ ತಂಡಗಳ ಇಬ್ಬರು ಪ್ರಮುಖ ಆಟಗಾರರ ಅಭಿಮಾನಿಗಳಿಗೆ ಮಾತ್ರ ಈ ಪಂದ್ಯ ಬೇಸರವನ್ನುಂಟು ಮಾಡಿದೆ. ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರ ವಿರಾಟ್ ಕೊಹ್ಲಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಆಟಗಾರ ಎಂಎಸ್ ಧೋನಿ ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟಿಗರ ಕುರಿತಾಗಿ ಇತ್ತಂಡಗಳ ನಡುವಿನ ಈ ಪಂದ್ಯದಲ್ಲಿ ನೋವನ್ನು ಹೊರಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಕೆಳಕಂಡಂತೆ ಪ್ರತಿಕ್ರಿಯಿಸಿದ್ದಾರೆ.

ಹಳೆಯದೆಲ್ಲ ಇನ್ನು ನೆನಪು ಮಾತ್ರ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ವೇಳೆ ಟ್ವಿಟ್ಟರ್‌ನಲ್ಲಿ ಕ್ರಿಕೆಟ್ ಅಭಿಮಾನಿಯೋರ್ವರು ಟ್ವೀಟ್‌ವೊಂದನ್ನು ಮಾಡಿದ್ದು, ಸಿಎಸ್‌ಕೆ ಮತ್ತು ಆರ್‌ಸಿಬಿ ನಡುವಿನ ಪಂದ್ಯದ ದಿನ ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ನಾಯಕರಾಗಿ ಟಾಸ್‌ನಲ್ಲಿ ಭಾಗವಹಿಸುತ್ತಿದ್ದನ್ನು ನೆನಪಿಸಿಕೊಂಡು ಇದೆಲ್ಲಾ ಇನ್ನು ನೆನಪು ಮಾತ್ರ ಎಂದು ಬರೆದುಕೊಂಡಿದ್ದಾರೆ.

ಇದೇನಾ ಮೋದಿಜೀ ಅಚ್ಛೇ ದಿನ್?
ಮತ್ತೋರ್ವ ಕ್ರಿಕೆಟ್ ಪ್ರೇಮಿ ಟ್ವೀಟ್ ಮಾಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ಟಾಸ್ ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಅನುಪಸ್ಥಿತಿಯಲ್ಲಿ ನಡೆಯುತ್ತಿದೆ, ಇದೇನಾ ಮೋದಿಜೀ ನೀವು ಹೇಳುತ್ತಿದ್ದ ಅಚ್ಛೇ ದಿನ್ ಎಂದು ಬರೆದುಕೊಂಡಿದ್ದಾರೆ.

ಧೋನಿ ಮತ್ತು ಕೊಹ್ಲಿಯನ್ನು ಕಳುಹಿಸಿ
ಮತ್ತೋರ್ವ ಅಭಿಮಾನಿ ಟ್ವಿಟ್ಟರ್‌ನಲ್ಲಿ ರವೀಂದ್ರ ಜಡೇಜಾ ಮತ್ತು ಫಾಫ್ ಡು ಪ್ಲೆಸಿಸ್ ಅವರ ಟ್ವಿಟ್ಟರ್ ಖಾತೆಗಳನ್ನು ಉಲ್ಲೇಖಿಸಿದ್ದು, ಇದೊಂದು ದಿನ ನಿಮ್ಮ ಬದಲಾಗಿ ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ಅವರನ್ನು ಬದಲಿ ಪ್ರತಿನಿಧಿಗಳಾಗಿ ಕಳುಹಿಸಿಕೊಡುತ್ತೀರಾ ಎಂದು ಮನವಿ ಮಾಡಿಕೊಂಡಿದ್ದಾರೆ.
ಹೀಗೆ ಹಲವಾರು ಕ್ರಿಕೆಟ್ ಪ್ರೇಮಿಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ಕುರಿತು ಟ್ವೀಟ್ ಮಾಡಿದ್ದು ನೋವನ್ನು ತೋಡಿಕೊಂಡಿದ್ದಾರೆ. ಇನ್ನು ಇಂಗ್ಲೆಂಡ್‌ನ ಮಾಜಿ ಕ್ರಿಕೆಟಿಗ ಗ್ರೇಮ್ ಸ್ವಾನ್ ಇತ್ತಂಡಗಳ ನಡುವಿನ ಸೆಣಸಾಟದ ಕುರಿತು ಮಾತನಾಡಿದ್ದು, ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯ ಎಂಎಸ್ ಧೋನಿ vs ವಿರಾಟ್ ಕೊಹ್ಲಿ ನಡುವಿನ ಹಣಾಹಣಿ ಎಂದು ಹೇಳಿಕೆಯನ್ನು ನೀಡಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications