ಐಪಿಎಲ್ 2022: ಕೋಚ್ ಆಶಿಶ್ ನೆಹ್ರಾ ನೀಡಿದ ಬೆಂಬಲದಿಂದ ಇದೆಲ್ಲವೂ ಸಾಧ್ಯವಾಯಿತು: ಹಾರ್ದಿಕ್ ಪಾಂಡ್ಯ

ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಫೈನಲ್ ಪಂದ್ಯಕ್ಕೂ ಮುನ್ನ ತಂಡದ ಕೋಚ್ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಮಾಜಿ ವೇಗಿ ಆಶಿಶ್ ನೆಹ್ರಾ ಟೂರ್ನಿಯುದ್ದಕ್ಕೂ ಅದ್ಭುತ ರೀತಿಯಲ್ಲಿ ಬೆಂಬಲವನ್ನು ನೀಡಿದ್ದಾರೆ ಎಂದು ಮೊದಲ ಬಾರಿಗೆ ಐಪಿಎಲ್ ತಂಡವೊಂದರ ನಾಯಕತ್ವ ವಹಿಸಿಕೊಂಡು ಫೈನಲ್ ಹಂತಕ್ಕೆ ಪ್ರವೇಶ ಪಡೆದಿರುವ ಹಾರ್ದಿಕ್ ಪಾಂಡ್ಯ ತಿಳಿಸಿದ್ದಾರೆ.
ಗುಜರಾತ್ ಟೈಟನ್ಸ್ ತಂಡ ಈ ಬಾರಿಯ ಐಪಿಎಲ್‌ನ ಲೀಗ್ ಹಂತದಲ್ಲಿ 14 ಪಂದ್ಯಗಳ ಪೈಕಿ 10 ಗೆಲುವು ಸಾಧಿಸಿ ನಂಬರ್ 1 ತಂಡವಾಗಿ ಪ್ಲೇಆಫ್‌ಗೆ ಪ್ರವೇಶಿಸಿತ್ತು. ನಂತರ ಈಡನ್ ಗಾರ್ಡನ್‌ನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿ ಫೈನಲ್ ಹಂತಕ್ಕೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಇನ್ನು ಈ ಸಂದರ್ಭದಲ್ಲಿ ಟೂರ್ನಿಯುದ್ದಕ್ಕೂ ಆಶಿಶ್ ನೆಹ್ರಾ ಅವರೊಂದಿಗಿನ ಒಡನಾಟ ನನಗೆ ಬಹಳ ಆನಂದವನ್ನು ನೀಡಿದೆ ಎಂದಿದ್ದಾರೆ ಆಶಿಶ್ ನೆಹ್ರಾ.
ಇನ್ನು ಈ ಸಂದರ್ಭದಲ್ಲಿ ತನ್ನ ಸೋದರ ಕೃನಾಲ್ ಪಾಂಟ್ಯ ಜೊತೆಗೆ ಜಿಟಿ ತಂಡದೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮುನ್ನ ನಡೆಸಿದ ಸಂವಾದವೊಂದರ ಬಗ್ಗೆ ಪಾಂಡ್ಯ ಮಾತನಾಡಿದ್ದಾರೆ. "ನಾನು ಹಾಗೂ ನನ್ನ ಸೋದರ ಒಪ್ಪಂದ ಮಾಡಿಕೊಳ್ಳುವುದಕ್ಕೂ ಮುನ್ನ ಮಾತುಕತೆಯನ್ನು ನಡೆಸಿದ್ದೆವು. ಆ ಸಂದರ್ಭದಲ್ಲಿ ನಾನು, ವ್ಯಕ್ತಿಯಾಗಿ ನನ್ನನ್ನು ಅರ್ಥ ಮಾಡಿಕೊಳ್ಳಬಲ್ಲವರು, ತಿಳಿದುಕೊಳ್ಳಬಲ್ಲವರು ಹಾಗೂ ನನ್ನಿಂದ ಅತ್ಯುತ್ತಮ ಪ್ರದರ್ಶಣವನನ್ಉ ಹೊರೆತೆಗೆಯುವ ಸಾಮರ್ರ್ಥಯ ಯಾರಿಗಾದರೂ ಇದ್ದರೆ ಅದು ಆಶಿಶ್ ನೆಹ್ರಾ ಅವರಿಗೆ ಮಾತ್ರ ಎಂದಿದ್ದೆ. ಹಾಗಾಗಿ ನನಗೆ ಅವರೊಂದಿಗೆ ಆಡಿದ್ದು ಹಾಗೂ ಹೆಚ್ಚಿನ ಸಮಯವನ್ನು ಕಳೆದಿದ್ದು ಉತ್ತಮ ಅನುಭವ. ನಾನು ಅವರೊಂದಿಗಿನ ಒಡನಾಡವನ್ನು ಯಾವುದೇ ಕಾರಣವಿದ್ದರೂ ಆನಂದಿಸುತ್ತೇನೆ" ಎಂದಿದ್ದಾರೆ ಹಾರ್ದಿಕ್ ಪಾಂಡ್ಯ.
"ನಮ್ಮ ಕ್ರಿಕೆಟಿಂಗ್ ಯೋಚನೆಗಳಿಗೆ ಬಹಳ ಸಾಮ್ಯತೆಗಳು ಇದೆ. ಅವರು ಪ್ರತಿಯೊಬ್ಬ ವ್ಯಕ್ತಿಗೆ ಸಾಕಷ್ಟು ಸಮಯವನ್ನು ನೀಡುತ್ತಾರೆ. ನಮ್ಮ ತಂಡದೊಳಗಿನ ವಾತಾವರಣ ಅದ್ಭುತವಾಗಿರಲು ಆಶಿಶ್ ನೆಹ್ರಾ ಹಾಗೂ ತಂಡದ ಸಹಾಯಕ ಸಿಬ್ಬಂದಿಗಳ ಕೊಡುಗೆ ಬಹಳ ದೊಡ್ಡದಿದೆ" ಎಂದಿದ್ದಾರೆ ಹಾರ್ದಿಕ್ ಪಾಂಡ್ಯ.
ಇನ್ನು ಈ ಬಾರಿಯ ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಆಟಗಾರನಾಗಿಯೂ ಅದ್ಭುತ ಪ್ರದರ್ಶನ ನೀಡಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಬ್ಯಾಟಿಂಗ್ ನಡೆಸಿರುವ ಹಾರ್ದಿಕ್ ಪಾಂಡ್ಯ ಆಡಿದ 14 ಪಂದ್ಯಗಳಲ್ಲಿ 453 ರನ್‌ಗಳನ್ನು ಗಳಿಸಿದ್ದಾರೆ. 45.30 ಸರಾಸರಿಯಲ್ಲಿ ಬ್ಯಾಟಿಂಗ್ ನಡೆಸಿರುವ ಪಾಂಡ್ಯ 132.84ರಷ್ಟು ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ್ದಾರೆ. ಇದರಲ್ಲಿ ನಾಲ್ಕು ಅರ್ಧ ಶತಕಗಳು ಸೇರಿಕೊಂಡಿದೆ. ಇನ್ನು ಬೌಲಿಂಗ್‌ನಲ್ಲಿ 9 ಇನ್ನಿಂಗ್ಸ್‌ಗಳಲ್ಲಿ ಅವರು 5 ವಿಕೆಟ್ ಪಡೆದುಕೊಂಡಿದ್ದಾರೆ.
ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಬ್ಮನ್ ಗಿಲ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್, ರಹಮಾನುಲ್ಲಾ ಗುರ್ಬಾಜ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications