
ಐಪಿಎಲ್ 15ನೇ ಆವೃತ್ತಿಯ ಫೈನಲ್ ಪಂದ್ಯ ನಡೆಯುತ್ತಿದ್ದು ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದೆ. ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ನಡೆಸಿರುವ ರಾಜಸ್ಥಾನ್ ರಾಯಲ್ಸ್ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ಆರಂಭದಲ್ಲಿ ವಿಫಲವಾಗಿದೆ.
ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ವೇಗದ ಬೌಲರ್ ಲೂಕಿ ಪರ್ಗ್ಯೂಸನ್ ಈ ಆವೃತ್ತಿಯ ಅತ್ಯಂತ ವೇಗದ ಚೆಂಡೆಸದ ದಾಖಲೆ ಮಾಡಿದ್ದಾರೆ. ಲೂಕಿ ಫರ್ಗ್ಯೂಸನ್ ಈ ಪಂದ್ಯದಲ್ಲಿ ಗಂಟೆಗೆ 157.3 ಕಿ.ಮಿ ವೇಗದಲ್ಲಿ ಚೆಂಡೆಸೆಯುವ ಮೂಲಕ ಭಾರತದ ಯುವ ವೇಗಿ ಉಮ್ರಾನ್ ಮಲಿಕ್ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಜೋಸ್ ಬಟ್ಲರ್‌ಗೆ ಎಸೆದ ಎಸೆತದಲ್ಲಿ ಈ ದಾಖಲೆ ಮಾಡಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ ತಂಡದ ಯುವ ವೇಗಿ ಉಮ್ರಾನ್ ಮಲಿಕ್ ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಲೀಗ್ ಪಂದ್ಯದಲ್ಲಿ ಗಂಟೆಗೆ 157 ಕಿ.ಮೀ ವೇಗದಲ್ಲಿ ಚೆಂಡೆಸಿದ್ದರು. ಈ ಎಸೆತದಲ್ಲಿ ರೋವ್ಮನ್ ಪೋವೆಲ್ ಅವರನ್ನು ಬೌಲ್ಡ್ ಮಾಡಿದ್ದರು ಉಮ್ರಾನ್ ಮಲಿಕ್. ಈಗ ಈ ವೇಗದ ಬೌಲಿಂಗ್ ಸಾಧನೆಯನ್ನು ಲೂಕಿ ಫರ್ಗ್ಯೂಸನ್ ಹಿಂದಿಕ್ಕಿದ್ದಾರೆ.
ಇನ್ನು ಫೈನಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಬೌಲರ್‌ಗಳು ಸಂಪೂರ್ಣ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟಾಸ್ ಸೋತು ಮೊದಲಿಗೆ ಬೌಲಿಂಗ್ ನಡೆಸಿದ ಗುಜರಾತ್ ಟೈಟನ್ಸ್ ತಂಡ ಆರ್‌ಆರ್ ದಾಂಡಿಗರ ಮೇಲೆ ಸವಾರಿ ಮಾಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ಪ್ರಮುಖ ದಾಂಡಿಗರೆಲ್ಲರೂ ಕನಿಷ್ಠ ಮೊತ್ತಕ್ಕೆ ವಿಕೆಟ್ ಕಳೆದುಕೊಂಡಿದ್ದಾರೆ. ಜೋಸ್ ಬಟ್ಲರ್ 39 ರನ್‌ಗಳಿಸಿದರೆ ಯಶಸ್ವಿ ಜೈಸ್ವಾಲ್ 22 ರನ್ ಗಳಿಸಿ ವಿಕೆಟ್ ಕಳೆದುಕೊಂಡರು. ಉಳಿದಂತೆ ನಾಯಕ ಸಂಜು ಸ್ಯಾಮ್ಸನ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೇಟ್ಮೇಯರ್ ಈ ಪಂದ್ಯದಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದಾರೆ.
ಇತ್ತಂಡಗಳ ಆಡುವ ಬಳಗ:
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿ ಶ್ರೀನಿವಾಸನ್ ಸಾಯಿ ಕಿಶೋರ್, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಶಮಿ
ಬೆಂಚ್: ಪ್ರದೀಪ್ ಸಾಂಗ್ವಾನ್, ವರುಣ್ ಆರೋನ್, ಜಯಂತ್ ಯಾದವ್, ವಿಜಯ್ ಶಂಕರ್, ಗುರುಕೀರತ್ ಸಿಂಗ್ ಮಾನ್, ಅಭಿನವ್ ಮನೋಹರ್, ದರ್ಶನ್ ನಲ್ಕಂಡೆ, ರಹಮಾನುಲ್ಲಾ ಗುರ್ಬಾಜ್, ಡೊಮಿನಿಕ್ ಡ್ರೇಕ್ಸ್, ಸಾಯಿ ಸುದರ್ಶನ್, ನೂರ್ ಅಹ್ಮದ್, ಅಲ್ಜಾರಿ ಜೋಸೆಫ್
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್/ ನಾಯಕ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಓಬೇದ್ ಮೆಕಾಯ್, ಯುಜ್ವೇಂದ್ರ ಚಾಹಲ್
ಬೆಂಚ್: ಕರುಣ್ ನಾಯರ್, ಜೇಮ್ಸ್ ನೀಶಮ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಕಾರ್ಬಿನ್ ಬಾಷ್, ನವದೀಪ್ ಸೈನಿ, ಕೆಸಿ ಕಾರಿಯಪ್ಪ, ಡೇರಿಲ್ ಮಿಚೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಅನುನಯ್ ಸಿಂಗ್, ಕುಲದೀಪ್ ಸೇನ್, ಧ್ರುವ್ ಜುರೆಲ್, ಶುಭಂ ಗರ್ವಾಲ್