IPL 2022 Final Highlights : ರಾಜಸ್ಥಾನ ರಾಯಲ್ಸ್ ಮಣಿಸಿ ಚಾಂಪಿಯನ್ ಆದ ಗುಜರಾತ್ ಟೈಟನ್ಸ್

ಐಪಿಎಲ್ 2022ರ ಹದಿನೈದನೇ ಆವೃತ್ತಿಯ ತನ್ನ ಪದಾರ್ಪಣೆ ಟೂರ್ನಿಯಲ್ಲೇ ಚಾಂಪಿಯನ್ ತಂಡವಾಗಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ಹೊರಹೊಮ್ಮಿದೆ. ಟೂರ್ನಿಯುದ್ದಕ್ಕೂ ಆಲ್‌ರೌಂಡ್ ಪ್ರದರ್ಶನ ನೀಡಿದ್ದ ಗುಜರಾತ್ ಟೈಟನ್ಸ್ ತವರಿನ ಅಂಗಳದಲ್ಲಿ ಪ್ರಶಸ್ತಿಗೆ ಮುತ್ತಿಕ್ಕಿದರು.
ಐಪಿಎಲ್ ಪಂದ್ಯಾವಳಿಯ ಮಾಜಿ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ತಂಡವನ್ನು 7 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು. ಇನ್ನು ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದುರು ಮಂಡಿಯೂರಿದ ರಾಜಸ್ಥಾನ ರಾಯಲ್ಸ್ ಐಪಿಎಲ್ 2022ರ ರನ್ನರ್ ಅಪ್ ತಂಡವಾಗಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದರು. ಹೀಗಾಗಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಮೊದಲು ಬೌಲಿಂಗ್ ಮಾಡಿತ್ತು.
ರಾಜಸ್ಥಾನ ರಾಯಲ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಆರೆಂಜ್ ಕ್ಯಾಪ್ ವೀರ ಜೋಸ್ ಬಟ್ಲರ್ (39) ಮತ್ತು ಯಶಸ್ವಿ ಜೈಸ್ವಾಲ್ (22) ನೆರವಿನಿಂದ ರಾಜಸ್ಥಾನ ರಾಯಲ್ಸ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 130 ರನ್ ಗಳಿಸಿ, ಗುಜರಾತ್ ಟೈಟನ್ಸ್ ತಂಡಕ್ಕೆ 131 ರನ್‌ಗಳ ಸಾಧಾರಣ ಮೊತ್ತದ ಟಾರ್ಗೆಟ್ ನೀಡಿತ್ತು.

ಗುಜರಾತ್ ಟೈಟನ್ಸ್ ಬ್ಯಾಟಿಂಗ್
ಈ ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ ಗುಜರಾತ್ ಟೈಟನ್ಸ್ ಆರಂಭಿಕ ಶುಭ್‌ಮನ್ ಗಿಲ್ (45), ವೃದ್ಧಿಮಾನ್ ಸಹಾ (5), ನಾಯಕ ಹಾರ್ದಿಕ ಪಾಂಡ್ಯ (34) ಮ್ಯಾಥ್ಯೂ ವೇಡ್ (8) ಮತ್ತು ಡೇವಿಡ್ ಮಿಲ್ಲರ್ (32) ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ ರನ್ ಗಳಿಸಿ ಗೆಲುವಿನ ಕೇಕೆ ಹಾಕಿದರು ಮತ್ತು ಐಪಿಎಲ್ 2022ರ ಚಾಂಪಿಯನ್‌ಗಳಾದರು.

ರಾಜಸ್ಥಾನ ರಾಯಲ್ಸ್ ಬೌಲಿಂಗ್
ಇನ್ನು ಬೌಲಿಂಗ್‌ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಟ್ರೆಂಟ್ ಬೌಲ್ಟ್ 4 ಓವರ್‌ಗಳಲ್ಲಿ 14 ರನ್ ನೀಡಿ 1 ವಿಕೆಟ್ ಪಡೆದರೆ, ಪ್ರಸಿದ್ಧ್ ಕೃಷ್ಣ 4 ಓವರ್‌ಗಳಲ್ಲಿ 40 ರನ್ ನೀಡಿ 1 ವಿಕೆಟ್ ಪಡೆದರು. ಅದೇ ರೀತಿ ಯುಜ್ವೇಂದ್ರ ಚಹಲ್ 4 ಓವರ್‌ಗಳಲ್ಲಿ 20 ರನ್ ನೀಡಿ 1 ವಿಕೆಟ್ ಪಡೆರು. ಉಳಿದಂತೆ ಎಲ್ಲ ಬೌಲರ್‌ಗಳು ದುಬಾರಿಯಾದರು.

ರಾಜಸ್ಥಾನ ರಾಯಲ್ಸ್ ಬ್ಯಾಟಿಂಗ್
ರಾಜಸ್ಥಾನ ರಾಯಲ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಜೋಸ್ ಬಟ್ಲರ್ (39) ಮತ್ತು ಯಶಸ್ವಿ ಜೈಸ್ವಾಲ್ (22) ಫೈನಲ್ ಪಂದ್ಯದಲ್ಲಿ ಉತ್ತಮ ಆರಂಭ ಮಾಡಿದರು. ಆದರೆ ಇನ್ನಿಂಗ್ಸ್‌ನ ನಾಲ್ಕನೇ ಓವರ್‌ನ ಕಡೆಯ ಎಸೆತದಲ್ಲಿ ಸಿಕ್ಸರ್ ಬಾರಿಸಲು ಹೋಗಿ ಯಶಸ್ವಿ ಜೈಸ್ವಾಲ್ ಕ್ಯಾಚ್ ನೀಡಿ ಹೋದರು.
ನಂತರ ಬಂದ ಸಂಜು ಸ್ಯಾಮ್ಸನ್ ಅಬ್ಬರಿಸುವ ಮುನ್ಸೂಚನೆ ನೀಡಿದರೂ, 14 ರನ್ ಗಳಿಸಿ ಔಟಾದರು. ಇನ್ನು ಕನ್ನಡಿಗ ದೇವದತ್ ಪಡಿಕ್ಕಲ್ (2) ನಿರ್ಣಾಯಕ ನಿರಾಸೆ ಮೂಡಿಸಿದರು. ಉತ್ತಮವಾಗಿ ಆಡುತ್ತಿದ್ದ ಹೆಟ್ಮೆಯರ್ (11) ಅವರು ಹಾರ್ದಿಕ್ ಪಾಂಡ್ಯ ಬೌಲಿಂಗ್‌ನಲ್ಲಿ ಅವರಿಗೆ ಮರು ಕ್ಯಾಚ್ ನೀಡಿ ಪೆವಿಲಿಯನ್ ಕಡೆ ಮುಖ ಮಾಡಿದರು. ದೊಡ್ಡ ಹೊಡೆತ ಬಾರಿಸಲು ಹೋಗಿ ಆರ್ ಅಶ್ವಿನ್ (8) ಬೌಂಡರಿ ಲೈನ್‌ನಲ್ಲಿ ಕ್ಯಾಚ್ ನೀಡಿ ಔಟಾದರು.
ರಾಜಸ್ಥಾನ ರಾಯಲ್ಸ್ ಪರ ಜೋಸ್ ಬಟ್ಲರ್ ಮತ್ತು ಯಶಸ್ವಿ ಜೈಸ್ವಾಲ್ ಹೊರತುಪಡಿಸಿ ಯಾವೊಬ್ಬ ಬ್ಯಾಟ್ಸ್‌ಮನ್‌ಗಳು ಗುಜರಾತ್ ಬೌಲರ್‌ಗಳಿಗೆ ಬೌಲರ್‌ಗಳಿಗೆ ಪ್ರತಿರೋಧ ತೋರಲಿಲ್ಲ. ಟ್ರೆಂಟ್ ಬೌಲ್ಟ್ (11) ರನ್ ಗಳಿಸಿ ಔಟಾದರೆ, ಕೊನೆಯುಲ್ಲಿ ರಿಯಾನ್ ಪರಾಗ್ (15) ಮತ್ತು ಒಬೆದ್ ಮಕಾಯ್ (8) ತಂಡದ ಮೊತ್ತವನ್ನು ಹೆಚ್ಚಿಸಿದರು.

ಗುಜರಾತ್ ಟೈಟನ್ಸ್ ಬೌಲಿಂಗ್
ಇನ್ನು ಬೌಲಿಂಗ್‌ನಲ್ಲಿ ಗುಜರಾತ್ ಟೈಟನ್ಸ್ ತಂಡದ ಪರ ನಾಯಕ ಹಾರ್ದಿಕ್ ಪಾಂಡ್ಯ 4 ಓವರ್‌ಗಳಲ್ಲಿ 17 ರನ್ ನೀಡಿ 3 ವಿಕೆಟ್ ಪಡೆದರೆ, ರವಿಶ್ರೀನಿವಾಸನ್ ಸಾಯಿ ಕಿಶೋರ್ 2 ಓವರ್‌ಗಳಲ್ಲಿ 20 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಮೊಹಮ್ಮದ್ ಶಮಿ, ಯಶ್ ದಯಾಳ್ ಮತ್ತು ರಶೀದ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications