IPL 2022 Final: ಗುಜರಾತ್, ರಾಜಸ್ಥಾನ್ ನಡುವೆ ಟ್ರೋಫಿ ಎತ್ತಿಹಿಡಿಯುವ ತಂಡವನ್ನು ಹೆಸರಿಸಿದ ರೈನಾ

ವಿಶ್ವದ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಟೂರ್ನಮೆಂಟ್ ಎಂದೇ ಖ್ಯಾತಿಯನ್ನು ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ ಹದಿನೈದನೇ ಆವೃತ್ತಿಯ ಫೈನಲ್ ಪಂದ್ಯ ಇಂದು ( ಮೇ 29 ) ಅಹಮದಾಬಾದ್ ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗಲಿದ್ದು, ಈ ಬೃಹತ್ ಕಾಳಗದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಮತ್ತು ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡಗಳು ಕಣಕ್ಕಿಳಿಯಲಿವೆ.
ಟೂರ್ನಿಯ ಲೀಗ್ ಹಂತದಲ್ಲಿ ಎರಡೂ ತಂಡಗಳು ಸಹ ಬಲಿಷ್ಠ ಎನಿಸಿಕೊಂಡಿದ್ದು, ಗುಜರಾತ್ ಟೈಟನ್ಸ್ ಲೀಗ್ ಹಂತದ ಮುಕ್ತಾಯದ ವೇಳೆಗೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡರೆ, ರಾಜಸ್ಥಾನ್ ರಾಯಲ್ಸ್ ದ್ವಿತೀಯ ಸ್ಥಾನ ಪಡೆದುಕೊಂಡಿತ್ತು. ಇನ್ನು ಟೂರ್ನಿಯಲ್ಲಿ ಈ ಎರಡೂ ತಂಡಗಳು ಪರಸ್ಪರ 2 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಮೊದಲಿಗೆ ಲೀಗ್ ಹಂತದಲ್ಲಿ ನಡೆದ ಪಂದ್ಯ ಹಾಗೂ ಇತ್ತೀಚೆಗಷ್ಟೇ ಒಂದನೇ ಕ್ವಾಲಿಫೈಯರ್ ಪಂದ್ಯ ಎರಡರಲ್ಲಿಯೂ ಸಹ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಗೆದ್ದಿತ್ತು.
ಹೀಗೆ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಎಲ್ಲಾ 2 ಪಂದ್ಯಗಳಲ್ಲೂ ಸೋಲುಂಡಿರುವ ರಾಜಸ್ತಾನ್ ರಾಯಲ್ಸ್ ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗೆದ್ದಿದ್ದು, ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿಯೂ ಉತ್ತಮ ಪ್ರದರ್ಶನ ನೀಡಿತ್ತು. ಹೀಗಾಗಿ ಇತ್ತಂಡಗಳ ನಡುವಿನ ಫೈನಲ್ ಪಂದ್ಯ ಭಾರೀ ಕುತೂಹಲವನ್ನು ಕೆರಳಿಸಿದ್ದು, ಯಾವ ತಂಡ ಚಾಂಪಿಯನ್ ಆಗಿ ಹೊರಹೊಮ್ಮಲಿದೆ ಎಂಬ ಚರ್ಚೆಗಳು ಆರಂಭವಾಗಿವೆ. ಈ ಕುರಿತಾಗಿ ಇದೀಗ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಮಾತನಾಡಿದ್ದು, ಪಂದ್ಯದಲ್ಲಿ ಗೆಲ್ಲುವ ಅವಕಾಶ ಯಾವ ತಂಡಕ್ಕೆ ಹೆಚ್ಚಿದೆ ಎಂಬುದನ್ನು ಈ ಕೆಳಕಂಡಂತೆ ತಿಳಿಸಿದ್ದಾರೆ.

ಈ ತಂಡಕ್ಕೆ ಗೆಲುವಿನ ಅವಕಾಶ ಹೆಚ್ಚು
ಈ ಬಾರಿಯ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದ ಕುರಿತು ಮಾತನಾಡಿರುವ ಸುರೇಶ್ ರೈನಾ ರಾಜಸ್ತಾನ್ ರಾಯಲ್ಸ್ ತಂಡಕ್ಕಿಂತ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲುವ ಅವಕಾಶ ಹೆಚ್ಚಿರಲಿದೆ ಎಂದಿದ್ದಾರೆ. ಗುಜರಾತ್ ಟೈಟನ್ಸ್ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟ ನಂತರ ನಾಲ್ಕೈದು ದಿನಗಳ ವಿಶ್ರಾಂತಿಯನ್ನು ಪಡೆದುಕೊಂಡಿದೆ. ಹೀಗಾಗಿಯೇ ರಾಜಸ್ತಾನ್ ರಾಯಲ್ಸ್ ತಂಡಕ್ಕಿಂತ ಗುಜರಾತ್ ಟೈಟನ್ಸ್ ತಂಡಕ್ಕೆ ಅನುಕೂಲ ಹೆಚ್ಚಿದೆ ಎಂದು ರೈನಾ ಅಭಿಪ್ರಾಯ ಪಟ್ಟಿದ್ದಾರೆ. ಹೌದು, ಗುಜರಾತ್ ಟೈಟನ್ಸ್ ಆಟಗಾರರು ಹೆಚ್ಚಿನ ವಿಶ್ರಾಂತಿ ಪಡೆದು ಪಂದ್ಯಕ್ಕೆ ಸಿದ್ಧವಾಗಿದ್ದು, ಮೊನ್ನೆಯಷ್ಟೇ ಪಂದ್ಯವನ್ನಾಡಿರುವ ರಾಜಸ್ಥಾನ್ ರಾಯಲ್ಸ್ ಆಟಗಾರರಿಗೆ ಅಷ್ಟು ದಿನಗಳ ವಿಶ್ರಾಂತಿ ಸಿಕ್ಕಿಲ್ಲ.

ರಾಜಸ್ಥಾನ್ ರಾಯಲ್ಸ್ ತಂಡವನ್ನು ಹಗುರವಾಗಿ ತೆಗೆದುಕೊಳ್ಳುವಂತಿಲ್ಲ
ಇನ್ನೂ ಮುಂದುವರಿದು ಮಾತನಾಡಿರುವ ಸುರೇಶ್ ರೈನಾ ರಾಜಸ್ತಾನ್ ರಾಯಲ್ಸ್ ತಂಡವನ್ನು ಹಗುರವಾಗಿ ತೆಗೆದುಕೊಳ್ಳಲು ಆಗುವುದಿಲ್ಲ ಎಂದಿದ್ದಾರೆ. ತಂಡದ ಬಲಿಷ್ಠ ಆಟಗಾರ ಜೋಸ್ ಬಟ್ಲರ್ ಮತ್ತೊಮ್ಮೆ ಸಿಡಿದರೆ ತಂಡಕ್ಕೆ ಅದೊಂದು ದೊಡ್ಡ ಧನಾತ್ಮಕ ಅಂಶವಾಗಲಿದ್ದು, ಇದೊಂದು ದೊಡ್ಡ ಹಣಾಹಣಿಯಾಗಲಿದೆ ಎಂದು ಹೇಳಿಕೆ ನೀಡಿದ್ದಾರೆ.

ಸಂಭಾವ್ಯ ಆಡುವ ಬಳಗಗಳು
ಈ ಮಹಾ ಕಾಳಗದಲ್ಲಿ ಕಣಕ್ಕಿಳಿಯಬಹುದಾದ ಎರಡೂ ತಂಡಗಳ ಆಟಗಾರರ ಸಂಭಾವ್ಯ ಪಟ್ಟಿ ಈ ಕೆಳಕಂಡಂತಿದೆ.
ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಯಶ್ ದಯಾಲ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ರವಿಚಂದ್ರನ್ ಅಶ್ವಿನ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಓಬೇದ್ ಮೆಕಾಯ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications