For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022 ಫೈನಲ್: ಚೊಚ್ಚಲ ಟ್ರೋಫಿ ಗೆಲ್ಲಲು ಗುಜರಾತ್‌ಗೆ ಬೇಕು 131 ರನ್‌

IPL 2022 Final: Gujarat Titans Need 131 Runs To Win Against Rajasthan Royals

ಹದಿನೈದನೇ ಐಪಿಎಲ್ 2022ರ ಫೈನಲ್ ಇಂದು (ಭಾನುವಾರ ಮೇ 29) ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ. ಆರೆಂಜ್ ಕ್ಯಾಪ್ ವೀರ ಜೋಸ್ ಬಟ್ಲರ್ (39) ಮತ್ತು ಯಶಸ್ವಿ ಜೈಸ್ವಾಲ್ (22) ನೆರವಿನಿಂದ ರಾಜಸ್ಥಾನ ರಾಯಲ್ಸ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 130 ರನ್ ಗಳಿಸಿ, ಗುಜರಾತ್ ಟೈಟನ್ಸ್ ತಂಡಕ್ಕೆ 131 ರನ್‌ಗಳ ಸಾಧಾರಣ ಮೊತ್ತದ ಟಾರ್ಗೆಟ್ ನೀಡಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೊದಲು ಬ್ಯಾಟಿಂಗ ಆಯ್ದುಕೊಂಡಿದ್ದರು. ಹೀಗಾಗಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಮೊದಲು ಬೌಲಿಂಗ್ ಮಾಡಿತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕರಾಗಿ ಕಣಕ್ಕಿಳಿದ ಜೋಸ್ ಬಟ್ಲರ್ ಮತ್ತು ಯಶಸ್ವಿ ಜೈಸ್ವಾಲ್ ಫೈನಲ್ ಪಂದ್ಯದಲ್ಲಿ ಉತ್ತಮ ಆರಂಭ ಮಾಡಿದರು. ಆದರೆ ಇನ್ನಿಂಗ್ಸ್‌ನ ನಾಲ್ಕನೇ ಓವರ್‌ನ ಕಡೆಯ ಎಸೆತದಲ್ಲಿ ಸಿಕ್ಸರ್ ಬಾರಿಸಲು ಹೋಗಿ ಯಶಸ್ವಿ ಜೈಸ್ವಾಲ್ ಕ್ಯಾಚ್ ನೀಡಿ ಹೋದರು.

ನಂತರ ಬಂದ ಸಂಜು ಸ್ಯಾಮ್ಸನ್ ಅಬ್ಬರಿಸುವ ಮುನ್ಸೂಚನೆ ನೀಡಿದರೂ, 14 ರನ್ ಗಳಿಸಿ ಔಟಾದರು. ಇನ್ನು ಕನ್ನಡಿಗ ದೇವದತ್ ಪಡಿಕ್ಕಲ್ (2) ನಿರ್ಣಾಯಕ ನಿರಾಸೆ ಮೂಡಿಸಿದರು.

IPL 2022 Final: Gujarat Titans Need 131 Runs To Win Against Rajasthan Royals

ಉತ್ತಮವಾಗಿ ಆಡುತ್ತಿದ್ದ ಹೆಟ್ಮೆಯರ್ (11) ಅವರು ಹಾರ್ದಿಕ್ ಪಾಂಡ್ಯ ಬೌಲಿಂಗ್‌ನಲ್ಲಿ ಅವರಿಗೆ ಮರು ಕ್ಯಾಚ್ ನೀಡಿ ಪೆವಿಲಿಯನ್ ಕಡೆ ಮುಖ ಮಾಡಿದರು. ದೊಡ್ಡ ಹೊಡೆತ ಬಾರಿಸಲು ಹೋಗಿ ಆರ್ ಅಶ್ವಿನ್ (8) ಬೌಂಡರಿ ಲೈನ್‌ನಲ್ಲಿ ಕ್ಯಾಚ್ ನೀಡಿ ಔಟಾದರು.

ರಾಜಸ್ಥಾನ ರಾಯಲ್ಸ್ ಪರ ಜೋಸ್ ಬಟ್ಲರ್ ಮತ್ತು ಯಶಸ್ವಿ ಜೈಸ್ವಾಲ್ ಹೊರತುಪಡಿಸಿ ಯಾವೊಬ್ಬ ಬ್ಯಾಟ್ಸ್‌ಮನ್‌ಗಳು ಗುಜರಾತ್ ಬೌಲರ್‌ಗಳಿಗೆ ಬೌಲರ್‌ಗಳಿಗೆ ಪ್ರತಿರೋಧ ತೋರಲಿಲ್ಲ. ಟ್ರೆಂಟ್ ಬೌಲ್ಟ್ (11) ರನ್ ಗಳಿಸಿ ಔಟಾದರೆ, ಕೊನೆಯುಲ್ಲಿ ರಿಯಾನ್ ಪರಾಗ್ (15) ಮತ್ತು ಒಬೆದ್ ಮಕಾಯ್ (8) ತಂಡದ ಮೊತ್ತವನ್ನು ಹೆಚ್ಚಿಸಿದರು.

ಇನ್ನು ಬೌಲಿಂಗ್‌ನಲ್ಲಿ ಗುಜರಾತ್ ಟೈಟನ್ಸ್ ತಂಡದ ಪರ ನಾಯಕ ಹಾರ್ದಿಕ್ ಪಾಂಡ್ಯ 4 ಓವರ್‌ಗಳಲ್ಲಿ 17 ರನ್ ನೀಡಿ 3 ವಿಕೆಟ್ ಪಡೆದರೆ, ರವಿಶ್ರೀನಿವಾಸನ್ ಸಾಯಿ ಕಿಶೋರ್ 2 ಓವರ್‌ಗಳಲ್ಲಿ 20 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಮೊಹಮ್ಮದ್ ಶಮಿ, ಯಶ್ ದಯಾಳ್ ಮತ್ತು ರಶೀದ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದರು.

ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11:
ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭಮನ್‌ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಆರ್‌. ಸಾಯಿ ಕಿಶೋರ್, ಲ್ಯುಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಶಮಿ

IPL ಫೈನಲ್ ಪಂದ್ಯದಲ್ಲಿ Hardik Pandya ಗೆ ಶರಣಾದ Sanju Samson ಪಡೆ |#cricket | Oneindia Kannada

ರಾಜಸ್ತಾನ್‌ ರಾಯಲ್ಸ್ ಪ್ಲೇಯಿಂಗ್ 11:
ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್, ನಾಯಕ) ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಓಬೇದ್ ಮೆಕಾಯ್, ಯುಜವೇಂದ್ರ ಚಾಹಲ್

Story first published: Sunday, May 29, 2022, 23:31 [IST]
Other articles published on May 29, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+