ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022, ಫೈನಲ್: ರಾಜಸ್ಥಾನ್ vs ಗುಜರಾತ್: ಪ್ರಿವ್ಯೂ, ಸಂಭಾವ್ಯ ತಂಡ, ಹವಾಮಾನ ವರದಿ

IPL 2022 Final: Gujarat Titans vs Rajasthan Royals probable playing XI, weather report and pitch report

ಐಪಿಎಲ್ 15ನೇ ಆವೃತ್ತಿಯ ಫೈನಲ್ ಪಂದ್ಯ ಭಾನುವಾರ ನಡೆಯಲಿದ್ದು ಲೀಗ್ ಹಂತದ ಎರಡು ಅಗ್ರ ತಂಡಗಳಾದ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಫೈನಲ್ ಹಂತಕ್ಕೆ ಪ್ರವೇಶ ಪಡೆದುಕೊಂಡಿದೆ. ಈ ಎರಡು ತಂಡಗಳು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟ್ರೋಫಿಗಾಗಿ ಈ ಆವೃತ್ತಿಯ ಅಂತಿಮ ಸೆಣೆಸಾಟವನ್ನು ನಡೆಸಲಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ಹಾಗೂ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡಗಳ ಆಟಗಾರರು ಈ ಮಹತ್ವದ ಸೆಣೆಸಾಟಕ್ಕೆ ಸಂಪೂರ್ಣ ಸಜ್ಜಾಗಿದ್ದಾರೆ.

ಗುಜರಾತ್ ಟೈಟನ್ಸ್ ತಂಡ ಈ ಬಾರಿಯ ಆವೃತ್ತಿಯಲ್ಲಿ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಕಣಕ್ಕಿಳಿಯುತ್ತಿದೆ. ಚೊಚ್ಚಲ ಆವೃತ್ತಿಯಲ್ಲಿಯೇ ಅದ್ಭುತ ಪ್ರದರ್ಶಣ ನೀಡಿರುವ ಜಿಟಿ ತಂಡ ಲೀಗ್ ಹಂತದಲ್ಲಿಯೂ ಅದ್ಭುತ ಪ್ರದರ್ಶನ ನೀಡಿ ಮಿಂಚುಹರಿಸಿತ್ತು. ಇದೀಗ ತನ್ನ ಪ್ರಥಮ ಆವೃತ್ತಿಯಲ್ಲಿ ಟ್ರೋಫಿ ಎತ್ತಿ ಹಿಡಿಯುವ ಅದ್ಭುತ ಅವಕಾಶವನ್ನು ಹೊಂದಿದೆ. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್ ಇತಿಹಾಸದ ಚೊಚ್ಚಲ ಆವೃತ್ತಿಯ ಚಾಂಪಿಯನ್ ಎನಿಸಿಕೊಂಡ ತಂಡವಾಗಿದೆ. ಆದರೆ ಅದಾದ ಬಳಿಕ ಇದೇ ಮೊದಲ ಬಾರಿಗೆ ಫೈನಲ್ ಹಂತಕ್ಕೆ ಅವಕಾಶವನ್ನು ಪಡೆದಿದೆ. ಈಗ ಮತ್ತೊಮ್ಮೆ 14 ವರ್ಷಗಳ ಹಿಂದಿನ ಆವೃತ್ತಿಯಲ್ಲಿ ಮಾಡಿದ ಸಾಧನೆಯನ್ನು ಪುನರಾವರ್ತಿಸುವ ವಿಶ್ವಾಸದಲ್ಲಿದೆ.

ಆರ್‌ಸಿಬಿ ಟ್ರೋಫಿ ಆಸೆಗೆ ಕಲ್ಲು ಹಾಕಿದ ಬಟ್ಲರ್‌ಗೆ ಪ್ರಶಸ್ತಿಗಳ ಸುರಿಮಳೆ; ಒಂದೇ ಪಂದ್ಯದಲ್ಲಿ ಸಿಕ್ಕ ಹಣವೆಷ್ಟು?ಆರ್‌ಸಿಬಿ ಟ್ರೋಫಿ ಆಸೆಗೆ ಕಲ್ಲು ಹಾಕಿದ ಬಟ್ಲರ್‌ಗೆ ಪ್ರಶಸ್ತಿಗಳ ಸುರಿಮಳೆ; ಒಂದೇ ಪಂದ್ಯದಲ್ಲಿ ಸಿಕ್ಕ ಹಣವೆಷ್ಟು?

ಸ್ಕ್ವಾಡ್‌ಗಳು ಹೀಗಿದೆ

ಸ್ಕ್ವಾಡ್‌ಗಳು ಹೀಗಿದೆ

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಬ್ಮನ್ ಗಿಲ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್, ರಹಮಾನುಲ್ಲಾ ಗುರ್ಬಾಜ್

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್, ರಿಯಾನ್ ಪರಾಗ್, ಕೆಸಿ ಕಾರಿಯಪ್ಪ, ನವದೀಪ್ ಸೈನಿ, ಓಬೇದ್ ಮೆಕಾಯ್, ಅನುನಯ್ ಸಿಂಗ್, ಕುಲದೀಪ್ ಸೇನ್, ಕರುಣ್ ನಾಯರ್, ಧ್ರುವ್ ಜುರೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಶುಭಂ ಗರ್ವಾಲ್, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇರಿಲ್ ಮಿಚೆಲ್

ಪಂದ್ಯದ ದಿನಾಂಕ ಹಾಗೂ ಸಮಯ

ಪಂದ್ಯದ ದಿನಾಂಕ ಹಾಗೂ ಸಮಯ

ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಫೈನಲ್ ಪಂದ್ಯ ಮೇ 29 ಭಾನುವಾರದಂದು ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದ್ದು ಸಂಜೆ 8 ಗಂಟೆಗೆ ಪಂದ್ಯ ಆರಂಭವಾಗಲಿದೆ. ಪಂದ್ಯದ ಆರಂಭಕ್ಕೂ ಮುನ್ನ ಸಮಾರೋಪ ಸಮಾರಂಭ ನಡೆಯಲಿದ್ದು ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ದೊಡ್ಡ ಬೌಂಡರಿಗಳನ್ನು ಹೊಂದಿದ್ದರೂ ಅಹಮದಾಬಾದ್ ಪಿಚ್ ಉತ್ತಮ ಮೊತ್ತದ ಸ್ಕೋರ್‌ಗೆ ಅವಕಾಶ ನೀಡುವ ಪಿಚ್ ಆಗಿದೆ. ಪಿಚ್ ಹಾಗೂ ಔಟ್ ಫೀಲ್ಡ್ ವೇಗವಾಗಿರುವ ಕಾರಣ ಇದರ ಲಾಭನವನ್ನು ಬ್ಯಾಟರ್‌ಗಳು ಪಡೆಯಬಹುದು. ಆದರೆ ಹೊಸ ಚೆಂಡಿನಲ್ಲಿ ಬೌಲರ್‌ಗಳು ಬ್ಯಾಟರ್‌ಗಳಿಗೆ ಕಾಡಬಹುದು. ಇನ್ನು ಭಾನುವಾರದ ಈ ಪಂದ್ಯಕ್ಕೆ ಮಳೆಯ ಯಾವುದೇ ಆತಂಕವಿಲ್ಲ. ಪಂದ್ತ ರಾತ್ರಿ ನಡೆಯುತ್ತಿದ್ದರೂ ಇಬ್ಬನಿಯ ಪ್ರಭಾವ ಇರುವುದಿಲ್ಲ.

ಸಂಭಾವ್ಯ ಆಡುವ ಬಳಗ

ಸಂಭಾವ್ಯ ಆಡುವ ಬಳಗ

ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಸಾಯಿ ಕಿಶೋರ್, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಶಮಿ

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಒಬೆದ್ ಮೆಕಾಯ್

Story first published: Saturday, May 28, 2022, 15:19 [IST]
Other articles published on May 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X