ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2022 Final: ಬಲಿಷ್ಠ ಗುಜರಾತ್ ವಿರುದ್ಧ ಕಣಕ್ಕಿಳಿಯುವ ಈ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುತ್ತಾ?

IPL 2022 Final: Rajasthan Royals predicted playing 11 against Gujarat Titans

ಕಳೆದ ಮಾರ್ಚ್ ತಿಂಗಳ ಅಂತಿಮ ವಾರದಲ್ಲಿ ಆರಂಭವಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಹದಿನೈದನೇ ಆವೃತ್ತಿಗೆ ಇಂದು ನಡೆಯಲಿರುವ ಫೈನಲ್ ಪಂದ್ಯದ ಮೂಲಕ ತೆರೆ ಬೀಳಲಿದೆ.

ಮಹಿಳಾ ಟಿ20 ಚಾಲೆಂಜ್: ಮೂರನೇ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡ ಸೂಪರ್‌ನೋವಾಸ್ಮಹಿಳಾ ಟಿ20 ಚಾಲೆಂಜ್: ಮೂರನೇ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡ ಸೂಪರ್‌ನೋವಾಸ್

ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಬೃಹತ್ ಕಾಳಗದಲ್ಲಿ ರಾಜಸ್ತಾನ್ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಗುಜರಾತ್ ಟೈಟನ್ಸ್ ಮೊದಲನೇ ಕ್ವಾಲಿಫೈಯರ್ ಪಂದ್ಯದಲ್ಲಿ ಇದೇ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಫೈನಲ್ ಸುತ್ತಿಗೆ ಲಗ್ಗೆ ಇಟ್ಟಿದ್ದರೆ, ಆ ಪಂದ್ಯದಲ್ಲಿ ಗುಜರಾತ್ ವಿರುದ್ಧ ಸೋಲುಂಡಿದ್ದ ರಾಜಸ್ಥಾನ್ ರಾಯಲ್ಸ್ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿ ಫೈನಲ್ ಪಂದ್ಯಕ್ಕೆ ಎಂಟ್ರಿ ಕೊಟ್ಟಿದೆ.

ಜೂನ್ 1ರಂದು ದೀಪಕ್ ಚಹರ್ weds ಜಯಾ ಭಾರದ್ವಾಜ್; ಯಾವ ಯಾವ ಕ್ರಿಕೆಟಿಗರನ್ನು ಆಹ್ವಾನಿಸಲಾಗಿದೆ?ಜೂನ್ 1ರಂದು ದೀಪಕ್ ಚಹರ್ weds ಜಯಾ ಭಾರದ್ವಾಜ್; ಯಾವ ಯಾವ ಕ್ರಿಕೆಟಿಗರನ್ನು ಆಹ್ವಾನಿಸಲಾಗಿದೆ?

ಇನ್ನು ಟೂರ್ನಿಯಲ್ಲಿ ಇತ್ತಂಡಗಳು ಇದು ಮೂರನೇ ಬಾರಿಗೆ ಮುಖಾಮುಖಿಯಾಗಲಿರುವ ಪಂದ್ಯವಾಗಿದ್ದು, ಈ ಹಿಂದೆ ನಡೆದಿದ್ದ ಎರಡೂ ಪಂದ್ಯಗಳಲ್ಲಿಯೂ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗುಜರಾತ್ ಟೈಟನ್ಸ್ ಸೋಲುಣಿಸಿದೆ. ಹೀಗೆ ಇದುವರೆಗೂ ಗೆಲ್ಲಲಾಗದೆ ಇರುವ ತಂಡದ ವಿರುದ್ಧ ಫೈನಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಸಂಭಾವ್ಯ ಆಡುವ ಬಳಗ ಹೇಗಿರಲಿದೆ ಎಂಬುದರ ಕುರಿತಾದ ಮಾಹಿತಿ ಕೆಳಕಂಡಂತಿದೆ.

ಆರಂಭಿಕ ಆಟಗಾರರು

ಆರಂಭಿಕ ಆಟಗಾರರು

ಟೂರ್ನಿಯ ಮೊದಲಾರ್ಧದಲ್ಲಿ ಬೆಂಚ್ ಕಾಯುತ್ತಿದ್ದ ಯಶಸ್ವಿ ಜೈಸ್ವಾಲ್ ದ್ವಿತೀಯಾರ್ಧದಲ್ಲಿ 2 ಅರ್ಧ ಶತಕಗಳನ್ನು ಬಾರಿಸಿ ಕಮ್ ಬ್ಯಾಕ್ ಮಾಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ 13 ಎಸೆತಗಳಲ್ಲಿ 21 ರನ್ ಬಾರಿಸಿ ಜೋಸ್ ಬಟ್ಲರ್ ಜತೆ 61 ರನ್‌ಗಳ ಜತೆಯಾಟವಾಡಿದರು. ಮತ್ತೊಂದೆಡೆ ಟೂರ್ನಿಯಲ್ಲಿ ಇಲ್ಲಿಯವರೆಗೂ 16 ಪಂದ್ಯಗಳನ್ನಾಡಿ 824 ರನ್ ಕಲೆಹಾಕಿ ಅಬ್ಬರಿಸಿರುವ ಜೋಸ್ ಬಟ್ಲರ್ ಇದ್ದು, ಈ ಜೋಡಿ ಫೈನಲ್ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.

ಮಧ್ಯಮ ಕ್ರಮಾಂಕ

ಮಧ್ಯಮ ಕ್ರಮಾಂಕ

ತಂಡದ ಪರ ಮಧ್ಯಮ ಕ್ರಮಾಂಕದ ಆಟಗಾರರಾಗಿ ಸಂಜು ಸ್ಯಾಮ್ಸನ್, ದೇವದತ್ ಪಡಿಕ್ಕಲ್ ಮತ್ತು ಶಿಮ್ರಾನ್ ಹೆಟ್ಮೆಯರ್ ಕಣಕ್ಕಿಳಿಯಲಿದ್ದಾರೆ. ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ 21 ಎಸೆತಗಳನ್ನು ಎದುರಿಸಿದ್ದ ಸಂಜು ಸ್ಯಾಮ್ಸನ್ 23 ರನ್ ಬಾರಿಸಿದ್ದರು, ಸ್ಯಾಮ್ಸನ್ ಇನ್ನಿತರ ಪಂದ್ಯಗಳಲ್ಲಿ ಅಬ್ಬರಿಸಿದ್ದು ಕೂಡ ಇದೆ ಹಾಗೂ ದೇವದತ್ ಪಡಿಕ್ಕಲ್ ಪ್ರದರ್ಶನದಲ್ಲಿ ಏರಿಳಿತಗಳಿದ್ದರೆ, ಟೂರ್ನಿಯಲ್ಲಿ 14 ಪಂದ್ಯಗಳನ್ನಾಡಿ 303 ರನ್ ಕಲೆ ಹಾಕಿರುವ ಶಿಮ್ರಾನ್ ಹೆಟ್ಮಾಯೆರ್ ತಂಡದ ನಂಬುಗೆಯ ಆಟಗಾರ ಎನಿಸಿಕೊಂಡಿದ್ದಾರೆ.

ಆಲ್ ರೌಂಡರ್ಸ್

ಆಲ್ ರೌಂಡರ್ಸ್

ಈ ಪಂದ್ಯದಲ್ಲಿ ಆಲ್ ರೌಂಡರ್ ಆಟಗಾರ ರವಿಚಂದ್ರನ್ ಅಶ್ವಿನ್ ಮತ್ತು ರಿಯಾನ್ ಪರಾಗ್ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿವೆ. ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ 1 ವಿಕೆಟ್ ಕಬಳಿಸಿ 31 ರನ್ ನೀಡಿದ್ದ ರವಿಚಂದ್ರನ್ ಅಶ್ವಿನ್ ಟೂರ್ನಿಯಲ್ಲಿ ಒಟ್ಟು 12 ವಿಕೆಟ್ ಪಡೆದಿದ್ದಾರೆ. ಇನ್ನು ಅಶ್ವಿನ್ ಬ್ಯಾಟ್ ಹಿಡಿದು ರನ್ ಬಾರಿಸಿ ತಂಡಕ್ಕೆ ಆಸರೆಯಾಗಬಲ್ಲ ಆಟಗಾರ ಕೂಡ ಆಗಿದ್ದಾರೆ. ಮತ್ತೊಂದೆಡೆ ರಿಯಾನ್ ಪರಾಗ್ ಕಣಕ್ಕಿಳಿಯಲಿದ್ದು ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಅರ್ಧ ಶತಕವೊಂದನ್ನು ಬಾರಿಸಿದ್ದು ಬಿಟ್ಟರೆ ಹೆಚ್ಚೇನೂ ಉತ್ತಮ ಪ್ರದರ್ಶನವನ್ನು ನೀಡಿಲ್ಲ. ಅದರಲ್ಲಿಯೂ ಕಳೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಿಯಾನ್ ಪರಾಗ್ ಸ್ಫೋಟಕ ಆಟಗಾರ ರಜತ್ ಪಾಟಿದಾರ್ ಕ್ಯಾಚ್ ಬಿಟ್ಟು ಕಳಪೆ ಪ್ರದರ್ಶನ ನೀಡಿದ್ದರು.

RCB ಡ್ರೆಸ್ಸಿಂಗ್ ರೂಮ್ ನಲ್ಲಿ ಕೊನೇ ಕ್ಷಣ ಕಳೆದ ದಿನೇಶ್ ಕಾರ್ತಿಕ್‌ ಭಾವುಕರಾಗಿ ಹೇಳಿದ್ದೇನು? | OneIndia Kannada
ಬೌಲರ್‌ಗಳು

ಬೌಲರ್‌ಗಳು

ಇನ್ನು ಬೌಲರ್‌ಗಳ ವಿಚಾರಕ್ಕೆ ಬಂದರೆ ಟ್ರೆಂಟ್ ಬೌಲ್ಟ್ ಪ್ಲೇ ಆಫ್ ಸುತ್ತಿನಲ್ಲಿ ಕಣಕ್ಕಿಳಿದ 2 ಪಂದ್ಯಗಳಲ್ಲಿ ತಲಾ ಒಂದೊಂದು ವಿಕೆಟ್ ಮಾತ್ರ ಪಡೆದಿದ್ದಾರೆ. ಇನ್ನು ಕನ್ನಡಿಗ ಪ್ರಸಿದ್ಧ್ ಕೃಷ್ಣ ಕಳೆದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ 22 ರನ್ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದ್ದು ಈ ಪಂದ್ಯದಲ್ಲಿಯೂ ಉತ್ತಮ ಪ್ರದರ್ಶನ ನೀಡುವ ಹುಮ್ಮಸ್ಸಿನಲ್ಲಿದ್ದಾರೆ. ಯುಜುವೇಂದ್ರ ಚಹಾಲ್ ಕಳೆದ ಪಂದ್ಯದಲ್ಲಿ ವಿಕೆಟ್ ಪಡೆಯದೇ ಇರಬಹುದು, ಆದರೆ ಈ ಪಂದ್ಯದಲ್ಲಿ ಇನ್ನೊಂದು ವಿಕೆಟ್ ಪಡೆದರೆ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಲಿದ್ದು, ಪರ್ಪಲ್ ಕ್ಯಾಪ್ ಪಡೆದುಕೊಳ್ಳಲಿದ್ದಾರೆ. ಒಬೆದ್ ಮೆಕಾಯ್ ಕಳೆದ ಪಂದ್ಯದಲ್ಲಿ 23 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದ್ದು ಇಂದಿನ ಪಂದ್ಯದಲ್ಲಿಯೂ ಅದೇ ರೀತಿಯ ಪ್ರದರ್ಶನ ನೀಡುವ ನಿರೀಕ್ಷೆ ಇದೆ.

Story first published: Sunday, May 29, 2022, 15:56 [IST]
Other articles published on May 29, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X