ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2022 Final: ರಾಜಸ್ಥಾನ್ vs ಗುಜರಾತ್ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯ ಗೆದ್ದಿರುವ ಬಲಿಷ್ಠ ತಂಡ ಯಾವುದು?

IPL 2022 Final: Rajasthan Royals vs Gujarat Titans head to head details in Kannada

ಕಳೆದೆರೆಡು ತಿಂಗಳುಗಳಿಂದ ನಡೆಯುತ್ತಿರುವ ವಿಶ್ವದ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಲೀಗ್ ಎಂದೇ ಖ್ಯಾತಿಯನ್ನು ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನೈದನೇ ಆವೃತ್ತಿ ಮುಕ್ತಾಯದ ಸನಿಹಕ್ಕೆ ಬಂದಿದೆ. ಅಂತಿಮವಾಗಿ ಫೈನಲ್ ಹಂತಕ್ಕೇರಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ನಾಳೆ ( ಮೇ 29 ) ನಡೆಯಲಿರುವ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಯಾವ ತಂಡ ಚಾಂಪಿಯನ್ ಆಗಿ ಹೊರಹೊಮ್ಮಲಿದೆ ಎಂಬ ಕುತೂಹಲ ಮೂಡಿದೆ.

RCB vs RR: ಕ್ವಾಲಿಫೈಯರ್ ಪಂದ್ಯದಲ್ಲಿ ಆರ್‌ಸಿಬಿ ಹೀನಾಯ ಸೋಲಿಗೆ ಈ 6 ಆಟಗಾರರೇ ಕಾರಣ!RCB vs RR: ಕ್ವಾಲಿಫೈಯರ್ ಪಂದ್ಯದಲ್ಲಿ ಆರ್‌ಸಿಬಿ ಹೀನಾಯ ಸೋಲಿಗೆ ಈ 6 ಆಟಗಾರರೇ ಕಾರಣ!

ಇನ್ನು ಗುಜರಾತ್ ಟೈಟನ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಪದಾರ್ಪಣೆ ಮಾಡಿ ಲೀಗ್ ಹಂತದಲ್ಲಿ ಒಟ್ಟು 14 ಪಂದ್ಯಗಳಲ್ಲಿ ಕಣಕ್ಕಿಳಿದು 10 ಪಂದ್ಯಗಳಲ್ಲಿ ಜಯ ಸಾಧಿಸಿ, ಉಳಿದ 4 ಪಂದ್ಯಗಳಲ್ಲಿ ಸೋಲುಂಡು 20 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿತ್ತು. ಇತ್ತ ಟೂರ್ನಿಯಲ್ಲಿ ತಾನಾಡಿದ್ದ 14 ಪಂದ್ಯಗಳ ಪೈಕಿ 9 ಪಂದ್ಯಗಳಲ್ಲಿ ಜಯ ಸಾಧಿಸಿ 5 ಪಂದ್ಯಗಳಲ್ಲಿ ಸೋಲುಂಡು 18 ಅಂಕಗಳನ್ನು ಕಲೆಹಾಕಿದ ರಾಜಸ್ಥಾನ್ ರಾಯಲ್ಸ್ ಲೀಗ್ ಹಂತದ ಮುಕ್ತಾಯದ ವೇಳೆಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿತ್ತು.

ಕ್ವಾಲಿಫೈಯರ್‌ನಲ್ಲಿ ಸೋಲು: ಟ್ರೋಲ್ ಆದ RCB ಕಟ್ಟಾ ಅಭಿಮಾನಿಗಳುಕ್ವಾಲಿಫೈಯರ್‌ನಲ್ಲಿ ಸೋಲು: ಟ್ರೋಲ್ ಆದ RCB ಕಟ್ಟಾ ಅಭಿಮಾನಿಗಳು

ಹೀಗೆ ಎರಡೂ ತಂಡಗಳು ಸಹ ಈ ಬಾರಿಯ ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಬಲಿಷ್ಠ ತಂಡಗಳು ಎನಿಸಿಕೊಂಡಿದ್ದು, ಗುಜರಾತ್ ಟೈಟನ್ಸ್ ಟ್ರೋಫಿ ಎತ್ತಿ ಹಿಡಿಯುವ ಮೂಲಕ ತಾನು ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಪದಾರ್ಪಣೆ ಮಾಡಿದ ವರ್ಷದಲ್ಲಿಯೇ ಚಾಂಪಿಯನ್ ಆಗಿ ಹೊರಹೊಮ್ಮುವತ್ತ ಚಿತ್ತ ನೆಟ್ಟಿದ್ದರೆ, ಉದ್ಘಾಟನಾ ಐಪಿಎಲ್ ಆವೃತ್ತಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ರಾಜಸ್ಥಾನ್ ರಾಯಲ್ಸ್ 13 ವರ್ಷಗಳ ಬಳಿಕ ಮತ್ತೊಮ್ಮೆ ಟ್ರೋಫಿ ಎತ್ತಿಹಿಡಿಯುವತ್ತ ಕಣ್ಣಿಟ್ಟಿದೆ. ಇನ್ನು ಈ ಎರಡೂ ತಂಡಗಳ ನಡುವೆ ನಡೆದಿರುವ ಪಂದ್ಯಗಳ ಪೈಕಿ ಯಾವ ತಂಡ ಎಷ್ಟು ಪಂದ್ಯಗಳನ್ನು ಗೆದ್ದು ಬಲಿಷ್ಠವಾಗಿದೆ ಎಂಬುದರ ಕುರಿತಾದ ಮಾಹಿತಿ ಕೆಳಕಂಡಂತಿದೆ ಓದಿ.

ಮುಖಾಮುಖಿಯಲ್ಲಿ ಯಾರು ಬಲಿಷ್ಠರು?

ಮುಖಾಮುಖಿಯಲ್ಲಿ ಯಾರು ಬಲಿಷ್ಠರು?

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ಪದಾರ್ಪಣೆ ಮಾಡಿರುವ ಕಾರಣ ಇತ್ತಂಡಗಳ ನಡುವೆ ಕೇವಲ 2 ಮುಖಾಮುಖಿ ಪಂದ್ಯಗಳು ಮಾತ್ರ ನಡೆದಿವೆ. ಲೀಗ್ ಹಂತದಲ್ಲಿ 1 ಪಂದ್ಯದಲ್ಲಿ ಹಾಗೂ ಪ್ಲೇ ಆಫ್ ಸುತ್ತಿನ 1 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪೈಕಿ ಎರಡೂ ಪಂದ್ಯಗಳಲ್ಲಿಯೂ ಸಹ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮಣ್ಣುಮುಕ್ಕಿಸಿದೆ.

ಮೊದಲ ಪಂದ್ಯದ ಫಲಿತಾಂಶ

ಮೊದಲ ಪಂದ್ಯದ ಫಲಿತಾಂಶ

ಏಪ್ರಿಲ್ 14ರಂದು ನಡೆದಿದ್ದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 24ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 192 ರನ್ ಕಲೆ ಹಾಕಿತ್ತು. ನಂತರ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 155 ರನ್ ಕಲೆಹಾಕಿತು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ 37 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿತ್ತು.

ಕ್ವಾಲಿಫೈಯರ್ ಪಂದ್ಯದ ಫಲಿತಾಂಶ

ಕ್ವಾಲಿಫೈಯರ್ ಪಂದ್ಯದ ಫಲಿತಾಂಶ

ಲೀಗ್ ಹಂತದ ಪಂದ್ಯ ಹೊರತುಪಡಿಸಿ 1ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮತ್ತೆ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 188 ರನ್ ಕಲೆಹಾಕಿತು ಹಾಗೂ ನಂತರ ಕಣಕ್ಕಿಳಿದ ಗುಜರಾತ್ ಟೈಟನ್ಸ್ 19.3 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 191 ರನ್ ಚಚ್ಚಿ 7 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಇತ್ತಂಡಗಳ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ.

Story first published: Saturday, May 28, 2022, 18:54 [IST]
Other articles published on May 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X