IPL 2022 FINAL: ಟಾಸ್ ಗೆದ್ದ ರಾಜಸ್ತಾನ್ ರಾಯಲ್ಸ್ ಬ್ಯಾಟಿಂಗ್ ಆಯ್ಕೆ, ಪ್ಲೇಯಿಂಗ್ 11

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್ 15ನೇ ಸೀಸನ್‌ನ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಟಾಸ್ ಗೆದ್ದ ರಾಜಸ್ತಾನ್ ರಾಯಲ್ಸ್ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಪರಿಣಾಮ ಗುಜರಾತ್ ಟೈಟನ್ಸ್ ಬೌಲಿಂಗ್ ಮಾಡಲಿದೆ.
ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ತಾನ್ ರಾಯಲ್ಸ್ ತಂಡದಲ್ಲಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಯಾವುದೇ ಬದಲಾವಣೆ ಮಾಡದೆ, ಕಳೆದ ಆರ್‌ಸಿಬಿ ವಿರುದ್ಧ ಆಡಿದ ಹನ್ನೊಂದು ಆಟಗಾರರನ್ನೇ ಫೈನಲ್‌ನಲ್ಲಿ ಕಣಕ್ಕಿಳಿದಿದೆ.
ಇನ್ನು ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ತಂಡದಲ್ಲಿ ಕೇವಲ ಒಂದು ಬದಲಾವಣೆ ಮಾಡಲಾಗಿದ್ದು, ವೇಗಿ ಅಲ್ಜಾರಿ ಜೋಸೆಫ್ ಬದಲು ನ್ಯೂಜಿಲೆಂಡ್ ವೇಗಿ ಲ್ಯುಕಿ ಫರ್ಗುಸನ್‌ಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ನೀಡಲಾಗಿದೆ.
ಫೈನಲ್‌ನಲ್ಲಿ ಆಡುತ್ತಿರುವ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿದೆ.
ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11:
ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಆರ್. ಸಾಯಿ ಕಿಶೋರ್, ಲ್ಯುಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಶಮಿ
ರಾಜಸ್ತಾನ್ ರಾಯಲ್ಸ್ ಪ್ಲೇಯಿಂಗ್ 11:
ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್, ನಾಯಕ) ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಓಬೇದ್ ಮೆಕಾಯ್, ಯುಜವೇಂದ್ರ ಚಾಹಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications