ಐಪಿಎಲ್ 2022: ಫೈನಲ್ ಪಂದ್ಯದಲ್ಲಿ ಈ ತಂಡಕ್ಕೆ ಗೆಲ್ಲುವ ಅವಕಾಶ ಹೆಚ್ಚು: ಗ್ರೇಮ್ ಸ್ಮಿತ್

ಐಪಿಎಲ್ 2022ರ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಾನುವಾರ ರಾತ್ರಿ 8 ಗಂಟೆಗೆ ಗುಜರಾತ್ ಟೈಟನ್ಸ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಈ ಕುತೂಹಲಕಾರಿ ಪಂದ್ಯದ ಆರಂಭಕ್ಕೂ ಮುನ್ನ ಮಾಜಿ ಕ್ರಿಕೆಟಿಗ ಗ್ರೇಮ್ ಸ್ಮಿತ್ ಪ್ರತಿಕ್ರಿಯೆ ನೀಡಿದ್ದು ಈ ಒಂದು ತಂಡಕ್ಕೆ ಫೈನಲ್ ಪಂದ್ಯದಲ್ಲಿ ಗೆಲ್ಲುವ ಅವಕಾಶ ಹೆಚ್ಚಿದೆ ಎಂದಿದ್ದಾರೆ, ಇದಕ್ಕೆ ಅವರು ಕಾರಣವನ್ನು ಕೂಡ ನೀಡಿದ್ದಾರೆ.

ಗುಜರಾತ್ ಟೈಟನ್ಸ್ ಪ್ರಥಮ ಆವೃತ್ತಿಯಲ್ಲಿಯೇ ಅದ್ಭುತ ಪ್ರದರ್ಶನ ನೀಡಿ ಫೈನಲ್ ಹಂತಕ್ಕೆ ಪ್ರವೇಶ ಪಡೆದುಕೊಂಡಿದ್ದರೆ ಐಪಿಎಲ್ ಚೊಚ್ಚಲ ಆವೃತ್ತಿಯಲ್ಲಿ ಚಾಂಪಿಯನ್ ಎನಿಸಿಕೊಂಡಿರುವ ರಾಜಸ್ಥಾನ್ ರಾಯಲ್ಸ್ 13 ವರ್ಷಗಳ ಬಳಿಕ ಮತ್ತೊಮ್ಮೆ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಎರಡು ತಂಡಗಳು ಕೂಡ ಟೂರ್ನಿಯ ಬಲಿಷ್ಠ ತಂಡಗಳು ಎನಿಸಿಕೊಂಡಿದ್ದು ಆರಂಭಿಕ ಹಂತದಿಂದಲೇ ಟ್ರೋಫಿ ಗೆಲ್ಲುವ ನೆಚ್ಚಿನ ತಂಡಗಳಾಗಿ ಗುರುತಿಸಿಕೊಂಡಿತ್ತು.

ಆರ್‌ಸಿಬಿ ಟ್ರೋಫಿ ಆಸೆಗೆ ಕಲ್ಲು ಹಾಕಿದ ಬಟ್ಲರ್‌ಗೆ ಪ್ರಶಸ್ತಿಗಳ ಸುರಿಮಳೆ; ಒಂದೇ ಪಂದ್ಯದಲ್ಲಿ ಸಿಕ್ಕ ಹಣವೆಷ್ಟು?ಆರ್‌ಸಿಬಿ ಟ್ರೋಫಿ ಆಸೆಗೆ ಕಲ್ಲು ಹಾಕಿದ ಬಟ್ಲರ್‌ಗೆ ಪ್ರಶಸ್ತಿಗಳ ಸುರಿಮಳೆ; ಒಂದೇ ಪಂದ್ಯದಲ್ಲಿ ಸಿಕ್ಕ ಹಣವೆಷ್ಟು?

ಆರ್‌ಆರ್ ತಂಡಕ್ಕೆ ಗೆಲ್ಲುವ ಅವಕಾಶ ಹೆಚ್ಚು: ಈ ಸಂದರ್ಭದಲ್ಲಿ ಮಾಜಿ ಕ್ರಿಕೆಟಿಗ ಗ್ರೇಮ್ ಸ್ಮಿತ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಫೈನಲ್ ಪಂದ್ಯಲ್ಲಿ ಗೆಲ್ಲುವ ಅವಕಾಶ ಟೈಟನ್ಸ್ ತಂಡಕ್ಕೆ ಹೋಲಿಸಿದರೆ ಹೆಚ್ಚಾಹಿದೆ ಎಂದಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಅಹ್ಮದಾಬಾದ್ ಕ್ರೀಡಾಂಗಣದಲ್ಲಿ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಆರ್‌ಆರ್ ತಂಡ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಫೈನಲ್ ಪಂದ್ಯ ಕೂಡ ಇದೇ ಮೈದಾನದಲ್ಲಿ ನಡೆಯಲಿರುವ ಕಾರಣ ಪಿಚ್‌ಅನ್ನು ಆರ್‌ಆರ್ ಚೆನ್ನಾಗಿ ಅರ್ಥೈಸಿಕೊಂಡಿದೆ. ಹೀಗಾಗಿ ಮೇಲುಗೈ ಸಾಧಿಸುವ ಅವಕಾಶ ಹೆಚ್ಚಿದ ಎಂದಿದ್ದಾರೆ ಗ್ರೇಮ್ ಸ್ಮಿತ್.

ಮೊದಲ ಕ್ವಾಲಿಫೈಯರ್‌ನಲ್ಲಿ ಆರ್‌ಆರ್ ವಿರುದ್ಧ ಜಿಟಿಗೆ ಗೆಲುವು: ಇನ್ನು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಮಡಗಳು ಮುಖಾಮುಖಿಯಾಗಿದ್ದವು. ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಆರ್‌ಆರ್ ವಿರುದ್ಧ ಭರ್ಜರಿಯಾಗಿ ಗೆದ್ದು ಫೈನಲ್‌ಗೆ ಪ್ರವೇಶಿಸಿದ ಮೊದಲ ತಂಡ ಎನಿಸಿಕೊಂಡಿತ್ತು.

ಫೈನಲ್ ಪಂದ್ಯದಲ್ಲಿ ಭಾಗವಹಿಸುವ ಇತ್ತಂಡಗಳ ಸ್ಕ್ವಾಡ್ ಹೀಗಿದೆ
ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಬ್ಮನ್ ಗಿಲ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್, ರಹಮಾನುಲ್ಲಾ ಗುರ್ಬಾಜ್

IPL ಫೈನಲ್ ಪಂದ್ಯದಲ್ಲಿ Hardik Pandya ಗೆ ಶರಣಾದ Sanju Samson ಪಡೆ |#cricket | Oneindia Kannada

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್, ರಿಯಾನ್ ಪರಾಗ್, ಕೆಸಿ ಕಾರಿಯಪ್ಪ, ನವದೀಪ್ ಸೈನಿ, ಓಬೇದ್ ಮೆಕಾಯ್, ಅನುನಯ್ ಸಿಂಗ್, ಕುಲದೀಪ್ ಸೇನ್, ಕರುಣ್ ನಾಯರ್, ಧ್ರುವ್ ಜುರೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಶುಭಂ ಗರ್ವಾಲ್, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇರಿಲ್ ಮಿಚೆಲ್
ಡು ಪ್ಲೆಸಿಸ್

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Saturday, May 28, 2022, 22:22 [IST]
Other articles published on May 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X