
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಸಾಕಷ್ಟು ಯುವ ಪ್ರತಿಭೆಗಳು ಅದ್ಭುತ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಎಂಎಸ್ ಧೋನಿ, ರಾಬಿನ್ ಉತ್ತಪ್ಪ, ಅವರಂತಾ ಹಿರಿಯ ಆಟಗಾರರು ಕೂಡ ತಮ್ಮ ಹಳೆಯ ಚಾರ್ಮ್ ಪ್ರದರ್ಶಿಸುತ್ತಿದ್ದಾರೆ. ಆದರೆ ಭಾರತ ಕ್ರಿಕೆಟ್‌ನ ಇಬ್ಬರು ದಿಗ್ಗಜ ಕ್ರಿಕೆಟಿಗರಿಂದ ಅತ್ಯಂತ ನೀರಸ ಪ್ರದರ್ಶನ ಬರುತ್ತಿದೆ. ಟೀಮ್ ಇಂಡಿಯಾದ ಇಬ್ಬರು ಶ್ರೇಷ್ಠ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇಬ್ಬರು ಕಳಪೆ ಫಾರ್ಮ್‌ನಲ್ಲಿದ್ದು ರನ್‌ಗಳಿಸಲು ಪರದಾಡುತ್ತಿದ್ದಾರೆ. ಆದರೆ ಭಾರತೀಯ ಕ್ರಿಕೆಟ್‌ನ ಮಾಜಿ ನಾಯಕ ದಿಗ್ಗಜ ಆಟಗಾರ ಸುನಿಲ್ ಗವಾಸ್ಕರ್ ಟೀಮ್ ಇಂಡಿಯಾದ ಅನುಭವಿ ಆಟಗಾರರನ್ನು ಬೆಂಬಲಿಸಿ ಮಾತನಾಡಿದ್ದಾರೆ.
ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ಮಾತನಾಡಿರುವ ಸುನಿಲ್ ಗವಾಸ್ಕರ್ ಈ ಇಬ್ಬರು ಶ್ರೇಷ್ಠ ಆಟಗಾರರು ಕೂಡ ಒಂದು ಉತ್ತಮ ಇನ್ನಿಂಗ್ಸ್‌ನ ಹಿಂದಿದ್ದಾರೆ. ಒಂದು ಒಳ್ಳೆಯ ಇನ್ನಿಂಗ್ಸ್ ಅವರಿಬ್ಬರ ಫಾರ್ಮ್‌ಅನ್ನು ಮರಳಿ ತರಲಿದೆ ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಸ್ತುಕ ಕಾಲದ ಇಬ್ಬರು ಶ್ರೇಷ್ಠ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಐಪಿಎಲ್ 2022ರ ಆವೃತ್ತಿಯಲ್ಲಿ ಸತತವಾಗಿ ವೈಫಲ್ಯತೆಯನ್ನು ಅನುಭವಿಸುತ್ತಿದ್ದಾರೆ. ಬ್ಯಾಟ್ ಮೂಲಕ ತಂಡಕ್ಕೆ ಉತ್ತಮ ಕೊಡುಗೆ ನೀಡಲು ಇಬ್ಬರಿಂದಲೂ ಈ ಟೂರ್ನಿಯಲ್ಲಿ ಈವರೆಗೆ ಸಾಧ್ಯವಾಗಿಲ್ಲ. ಕನಿಷ್ಟ ಒಂದು ಅರ್ಧ ಶತಕವೂ ಈ ಇಬ್ಬರಿಂದಲೂ ದಾಖಲಾಗಿಲ್ಲ ಎಂಬುದು ಅಭಿಮಾನಿಗಳಿಗೆ ಬೇಸರ ಮೂಡಿಸುತ್ತದೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್‌ಗಳಿಸಿರುವ ಆಟಗಾರ ಎನಿಸಿರುವ ವಿರಾಟ್ ಕೊಹ್ಲಿ ಆಡಿರುವ 6 ಪಂದ್ಯಗಳ ಪೈಕಿ ವಿರಾಟ್ ಕೊಹ್ಲಿ 48 ಹೈಯೆಸ್ಟ್ ರನ್‌ಗಳಿಸಿದ್ದು 119 ರನ್‌ಗಳಿಸಿದ್ದಾರೆ. ರೋಹಿತ್ ಶರ್ಮಾ 7 ಪಂದ್ಯಗಳಲ್ಲಿ ಇಷ್ಟೇ ಪಂದ್ಯಗಳಲ್ಲಿ 114 ರನ್‌ಗಳಿಸಿದ್ದಾರೆ.

ಆದರೆ ರೋಹಿತ್ ಶರ್ಮಾ ಫಾರ್ಮ್‌ಗೆ ಮರಳಿದರೆ ಮುಂಬೈ ತಂಡ ಸೋಲಿನ ಸರಪಳಿಯಿಂದ ಹೊರಗೆ ಬರಲಿದೆ ಎಂದಿದ್ದಾರೆ ಗವಾಸ್ಕರ್. ಈ ಬಾರಿಯ ಟೂರ್ನಿಯಲ್ಲಿ ಆಡಿದ 7 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಸತತವಾಗಿ ಸೋಲು ಕಂಡಿದೆ. ಈ ಹೀನಾಯ ಪ್ರದರ್ಶನದ ಕಾರಣದಿಂದಾಗಿ ಮುಂಬೈ ಇಂಡಿಯನ್ಸ ತಂಡ ಅಂಕಪಟ್ಟಿಯಲ್ಲಿ 10ನೇ ಸ್ಥಾನಕ್ಕೇರಿದೆ. ಮುಂಬೈ ಇಂಡಿಯನ್ಸ್ ತಂಡ ಈ ಬಾರಿಯ ಪ್ಲೇಆಓಫ್‌ಗೆ ಅವಕಾಶ ಪಡೆಯಲು ಸಾಧ್ಯವಿಲ್ಲ ಎಂದಿದ್ದಾರೆ ಸುನಿಲ್ ಗವಾಸ್ಕರ್.