Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CSK ಬಹು ಕೋಟಿಯ ಪ್ಲೇಯರ್ 'ದೀಪಕ್ ಚಹಾರ್' ಏಪ್ರಿಲ್ 25ಕ್ಕೆ ತಂಡಕ್ಕೆ ಸೇರ್ಪಡೆ

Deepak chahar
IPL ಇತಿಹಾಸದಲ್ಲೇ CSK ಗೆ ಭಾರಿ ಮುಖಭಂಗ: ಕನ್ನಡಿಗನ ಮುಂದೆ ಮಂಡಿಯೂರಿದ ಚೆನ್ನೈ | Oneindia Kannada

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇದುವರೆಗೆ ಆಡಿದ ಮೂರು ಪಂದ್ಯಗಳಲ್ಲಿ ಸೋತಿದೆ. ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯದಿಂದ ಪಂಜಾಬ್ ಕಿಂಗ್ಸ್ ನೀಡಿದ್ದ 181ರನ್‌ಗಳ ಗುರಿ ಮುಟ್ಟಲು ಸಾಧ್ಯವಾಗಲಿಲ್ಲ. ಟಾಪ್ ಆರ್ಡರ್‌ ವೈಫಲ್ಯ ತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಇನ್ನು ಲಕ್ನೋ ವಿರುದ್ಧದ ಪಂದ್ಯದಲ್ಲಂತೂ 210ರನ್ ಕಲೆಹಾಕಿದ್ರೂ, ಚೆನ್ನೈ ಬೌಲರ್‌ಗಳು ಡಿಫೆಂಡ್ ಮಾಡಿಕೊಳ್ಳಲಿಲ್ಲ. ಹೀಗಿರುವಾಗ ಒಂದು ದಿನ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಅಂದರೆ ತಂಡದ ಸ್ಟಾರ್ ಬೌಲರ್ ದೀಪಕ್ ಚಾಹರ್ ಗಾಯದಿಂದ ಚೇತರಿಸಿಕೊಂಡಿದ್ದು, ಶೀಘ್ರದಲ್ಲೇ ಸಿಎಸ್‌ಕೆ ಪಾಳೆಯವನ್ನು ಪ್ರವೇಶಿಸಲಿದ್ದಾರೆ.

ಏಪ್ರಿಲ್ 25 ರಂದು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ದೀಪಕ್ ಚಾಹರ್ ಲಭ್ಯವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಸಿಎಸ್‌ಕೆ ಮ್ಯಾನೇಜ್ ಮೆಂಟ್ ಕೂಡ ಆ ದಿಸೆಯಲ್ಲಿ ಸೂಚನೆ ನೀಡಿದೆ. ಮತ್ತೊಂದೆಡೆ, ದೀಪಕ್ ಚಹಾರ್ ಈಗಾಗಲೇ ಅಭ್ಯಾಸವನ್ನು ಪ್ರಾರಂಭಿಸಿದ್ದಾರೆ.

CSK

ಕಳೆದ ಋತುವಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದೀಪಕ್ ಚಾಹರ್ ಅವರನ್ನು ತಂಡವು ಈ ಬಾರಿ ಮೆಗಾ ಹರಾಜಿನಲ್ಲಿ 14 ಕೋಟಿ ರೂ.ಗೆ ಖರೀದಿಸಿತು. ಆದರೆ ದುರದೃಷ್ಟವಶಾತ್ ಚಾಹರ್ ಪಂದ್ಯಾವಳಿಯ ಆರಂಭಕ್ಕೂ ಮುನ್ನ ಗಾಯಗೊಂಡಿದ್ದರು. ಇದರಿಂದ ದೀಪಕ್ ಚಹಾ ಯಾವಾಗ ಚೇತರಿಸಿಕೊಳ್ಳುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಮಂಡಿರಜ್ಜು ಗಾಯದಿಂದಾಗಿ ಅವರು ಶ್ರೀಲಂಕಾ ವಿರುದ್ಧದ ಸರಣಿಯನ್ನು ಕಳೆದುಕೊಂಡಿದ್ದರು. ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಮತ್ತು ಅಂತಿಮ ಟಿ20 ಪಂದ್ಯದ ವೇಳೆ ಚಹಾರ್ ಗಾಯಗೊಂಡಿದ್ದರು.

ಅಮೋಘ ಬೌಲಿಂಗ್ ಮಾಡುತ್ತಿದ್ದ ಚಹಾರ್ ಮೊದಲೆರಡು ವಿಕೆಟ್ ಕಬಳಿಸುವ ಮೂಲಕ ತಂಡಕ್ಕೆ ಉತ್ತಮ ಆರಂಭ ನೀಡಿದರು. ಏತನ್ಮಧ್ಯೆ, ಬೌಲಿಂಗ್ ರನ್ನಿಂಗ್ ಸಮಯದಲ್ಲಿ ಸ್ನಾಯು ಸೆಳೆತಕ್ಕೆ ಒಳಗಾದರು. ಆಗ ಕೂಡಲೇ ಚಹಾರ್ ನೋವಿನಿಂದ ನೆಲದ ಮೇಲೆ ಕುಳಿತಿದ್ದರು. ಫಿಸಿಯೋ ಅವರನ್ನು ಮೈದಾನದಿಂದ ಹೊರಗೆ ಕರೆದುಕೊಂಡು ಹೋಗಿದ್ದರು.

ಕಳೆದ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್‌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 180 ರನ್ ಕಲೆಹಾಕಿದ್ದು, ಸಿಎಸ್‌ಕೆಗೆ 181ರನ್ ಟಾರ್ಗೆಟ್ ನೀಡಿತು. ಆದ್ರೆ ಈ ಗುರಿ ಬೆನ್ನತ್ತಲಾಗದೇ ಚೆನ್ನೈ ಸೂಪರ್ ಕಿಂಗ್ಸ್‌ 54ರನ್‌ಗಳ ಸೋಲಿನ ಮೂಲಕ ಪ್ರಸ್ತುತ ಆವೃತ್ತಿಯಲ್ಲಿ ಸತತ ಮೂರು ಪಂದ್ಯಗಳನ್ನ ಸೋತಿದೆ.

ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 11: ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಶಿವಂ ದುಬೆ, ಅಂಬಟಿ ರಾಯುಡು, ರವೀಂದ್ರ ಜಡೇಜಾ (ನಾಯಕ), ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್), ಡ್ವೇನ್ ಪ್ರಿಟೋರಿಯಸ್, ಡ್ವೇನ್ ಬ್ರಾವೋ, ತುಷಾರ್ ಪಾಂಡೆಕರ್, ತುಷಾರ್ ಪಾಂಡೆ.

Story first published: Monday, April 4, 2022, 7:47 [IST]
Other articles published on Apr 4, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+