For Quick Alerts
ALLOW NOTIFICATIONS  
For Daily Alerts
 

MI vs GT: ಡೇನಿಯಲ್ ಸ್ಯಾಮ್ಸ್ ಮ್ಯಾಜಿಕ್: ಅಂತಿಮ ಓವರ್‌ನಲ್ಲಿ ಮುಂಬೈಗೆ ರೋಚಕ ಗೆಲುವು

IPL 2022, GT vs MI Match Highlights: MI Won by 5 Runs against MI

ಐಪಿಎಲ್ 15ನೇ ಆವೃತ್ತಿಯಲ್ಲಿ ಮತ್ತೊಂದು ಪಂದ್ಯ ರೋಚಕವಾಗಿ ಅಂತ್ಯ ಕಂಡಿದೆ. ಗುಜರಾತ್ ಟೈಟನ್ಸ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅಂತಿಮ ಹಂತದಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ ತಂಡ ರೋಚಕ ಗೆಲುವು ಸಾಧಿಸಿದೆ. ಅದರಲ್ಲೂ ಅಂತಿಮ ಓವರ್‌ನಲ್ಲಿ ಡೇನಿಯಲ್ ಸ್ಯಾಮ್ಸ್ ಕೇವಲ 3 ರನ್‌ಗಳನ್ನು ನೀಡಿ ಗುಜರಾತ್ ಟೈಟನ್ಸ್ ತಂಡದಿಂದ ಗೆಲುವನ್ನು ಕಸಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡ ನೀಡಿದ 178 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಗುಜರಾತ್ ಟೈಟನ್ಸ ಆರಂಭದಿಂದಲೂ ಮೇಲುಗೈ ಸಾಧಿಸುತ್ತಲೇ ಸಾಗಿತ್ತು. ಆರಂಭಿಕರಿಂದ ಶತಕದ ಜೊತೆಯಾಟ ಬಂದಿತ್ತು. ಆದರೆ ಅಂತಿಮ ಹಂತದಲ್ಲಿ ಮುಂಬೈ ಇಂಡಿಯನ್ಸ್ ಬೌಲರ್‌ಗಳು ನಿರೀಕ್ಷಿಸಿದರ ರೀತಿಯಲ್ಲಿ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾದರು. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡ ಈ ಪಂದ್ಯದಲ್ಲಿ 5 ರನ್‌ಗಳ ಅಂತರದ ರೋಚಕ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಅದ್ಭುತ ಆರಂಭ ಪಡೆಯಿತು. ಟೂರ್ನಿಯಲ್ಲಿ ವೈಫಲ್ಯ ಅನುಭವಿಸಿದ್ದ ನಾಯಕ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಫಾರ್ಮ್‌ಗೆ ಮರಳಿದರು. ಇಶಾನ್ ಕಿಶನ್ 29 ಎಸೆತಗಳಲ್ಲಿ 45 ರನ್‌ಗಳಿಸಿದರೆ ರೋಹಿತ್ ಶರ್ಮಾ 28 ಎಸೆತಗಳಲ್ಲಿ 43 ರನ್‌ಗಳ ಕೊಡುಗೆ ನೀಡಿದ್ದಾರೆ. ಕಿರಾನ್ ಪೊಲಾರ್ಡ್ ಈ ಪಂದ್ಯದಲ್ಲಿಯೂ ವೈಫಲ್ಯ ಅನುಭವಿಸಿದರೆ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ ಅವರಿಂದಲೂ ದೊಡ್ಡ ಕೊಡುಗೆ ಲಭ್ಯವಾಗಲಿಲ್ಲ.

ಆದರೆ ಅಂತಿಮ ಹಂತದಲ್ಲಿ ಟಿಮ್ ಡೇವಿಡ್ ಅವರ ಸ್ಪೋಟಕ ಬ್ಯಾಟಿಂಗ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಸರೆಯಾಯಿತು. 21 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 2 ಬೌಂಡರಿಗಳ ನೆರವಿನೊಂದಿಗೆ 44 ರನ್‌ಗಳನ್ನು ಗಳಿಸಿದರು ಟಿಮ್ ಡೇವಿಡ್. ಈ ಭರ್ಜರಿ ಪ್ರದರ್ಶನದ ನೆರವಿನಿಂದಾಗಿಉ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 177 ರನ್‌ಗಳನ್ನು ಗಳಿಸಿದೆ. ಗುಜರಾತ್ ಟೈಟನ್ಸ್ ತಂಡದ ಪರವಾಗಿ ರಶೀದ್ ಖಾನ್ 2 ವಿಕೆಟ್ ಕಿತ್ತು ಮಿಂಚಿದ್ದಾರೆ.

ಆಡುವ ಬಳಗ: ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಪ್ರದೀಪ್ ಸಾಂಗ್ವಾನ್, ಲಾಕಿ ಫರ್ಗುಸನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ
ಬೆಂಚ್: ಮ್ಯಾಥ್ಯೂ ವೇಡ್, ವರುಣ್ ಆರೋನ್, ವಿಜಯ್ ಶಂಕರ್, ಜಯಂತ್ ಯಾದವ್, ಗುರುಕೀರತ್ ಸಿಂಗ್ ಮಾನ್, ಅಭಿನವ್ ಮನೋಹರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ದರ್ಶನ್ ನಲ್ಕಂಡೆ, ರಹಮಾನುಲ್ಲಾ ಗುರ್ಬಾಜ್, ಡೊಮಿನಿಕ್ ಡ್ರೇಕ್ಸ್, ಯಶ್ ದಯಾಳ್, ನೂರ್ ಅಹ್ಮದ್

Mumbai Indiansನ Sudharshan ಔಟ್ ಆದ ರೀತಿ ಇದು | Oneindia Kannada

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಕೀರಾನ್ ಪೊಲಾರ್ಡ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಕುಮಾರ್ ಕಾರ್ತಿಕೇಯ, ಜಸ್ಪ್ರೀತ್ ಬುಮ್ರಾ, ರಿಲೆ ಮೆರೆಡಿತ್
ಬೆಂಚ್: ಜಯದೇವ್ ಉನದ್ಕತ್, ಫ್ಯಾಬಿಯನ್ ಅಲೆನ್, ಬೇಸಿಲ್ ಥಂಪಿ, ಅನ್ಮೋಲ್ಪ್ರೀತ್ ಸಿಂಗ್, ಡೆವಾಲ್ಡ್ ಬ್ರೆವಿಸ್, ರಾಹುಲ್ ಬುದ್ಧಿ, ಟ್ರಿಸ್ಟಾನ್ ಸ್ಟಬ್ಸ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಲ್, ಮಯಾಂಕ್ ಮಾರ್ಕಂಡೆ, ರಮಣದೀಪ್ ಸಿಂಗ್, ಸಂಜಯ್ ಯಾದವ್, ಹೃತಿಕ್ ಶೋಕೀನ್

Story first published: Friday, May 6, 2022, 23:32 [IST]
Other articles published on May 6, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+