ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

MI vs GT: ಫಾರ್ಮ್‌ಗೆ ಮರಳಿದ ರೋಹಿತ್, ಅಬ್ಬರಿಸಿದ ಡೇವಿಡ್: ಸವಾಲಿನ ಗುರಿ ನೀಡಿದ ಮುಂಬೈ

IPL 2022, GT vs MI: Mumbai Indians Sets Target Of 178 Runs To GT
Mumbai Indiansನ Sudharshan ಔಟ್ ಆದ ರೀತಿ ಇದು | Oneindia Kannada

ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸವಾಲಿನ ಗುರಿ ನಿಗದಿ ಪಡಿಸಿದೆ. ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ಮುಂಬೈ ಇಂಡಿಯನ್ಸ್ ಅದ್ಭುತ ಆರಂಭವನ್ನು ಪಡೆಯಿತು. ಆದರೆ ಮಧ್ಯಮ ಓವರ್‌ಗಳಲ್ಲಿ ಹಿನ್ನಡೆ ಅನುಭವಿಸಿದರೂ ಅಂತಿಮ ಹಂತದಲ್ಲಿ ಟಿಮ್ ಡೇವಿಡ್ ಅಬ್ಬರದ ಪ್ರದರ್ಶನ ನೀಡಿದ್ದು ಉತ್ತಮ ಮೊತ್ತದ ಗುರಿ ನೀಡಲು ಸಾಧ್ಯವಾಗಿದೆ.

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಅದ್ಭುತ ಆರಂಭ ಪಡೆಯಿತು. ಟೂರ್ನಿಯಲ್ಲಿ ವೈಫಲ್ಯ ಅನುಭವಿಸಿದ್ದ ನಾಯಕ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಫಾರ್ಮ್‌ಗೆ ಮರಳಿದರು. ಇಶಾನ್ ಕಿಶನ್ 29 ಎಸೆತಗಳಲ್ಲಿ 45 ರನ್‌ಗಳಿಸಿದರೆ ರೋಹಿತ್ ಶರ್ಮಾ 28 ಎಸೆತಗಳಲ್ಲಿ 43 ರನ್‌ಗಳ ಕೊಡುಗೆ ನೀಡಿದ್ದಾರೆ. ಕಿರಾನ್ ಪೊಲಾರ್ಡ್ ಈ ಪಂದ್ಯದಲ್ಲಿಯೂ ವೈಫಲ್ಯ ಅನುಭವಿಸಿದರೆ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ ಅವರಿಂದಲೂ ದೊಡ್ಡ ಕೊಡುಗೆ ಲಭ್ಯವಾಗಲಿಲ್ಲ.

ಆದರೆ ಅಂತಿಮ ಹಂತದಲ್ಲಿ ಟಿಮ್ ಡೇವಿಡ್ ಅವರ ಸ್ಪೋಟಕ ಬ್ಯಾಟಿಂಗ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಸರೆಯಾಯಿತು. 21 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 2 ಬೌಂಡರಿಗಳ ನೆರವಿನೊಂದಿಗೆ 44 ರನ್‌ಗಳನ್ನು ಗಳಿಸಿದರು ಟಿಮ್ ಡೇವಿಡ್. ಈ ಭರ್ಜರಿ ಪ್ರದರ್ಶನದ ನೆರವಿನಿಂದಾಗಿಉ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 177 ರನ್‌ಗಳನ್ನು ಗಳಿಸಿದೆ. ಗುಜರಾತ್ ಟೈಟನ್ಸ್ ತಂಡದ ಪರವಾಗಿ ರಶೀದ್ ಖಾನ್ 2 ವಿಕೆಟ್ ಕಿತ್ತು ಮಿಂಚಿದ್ದಾರೆ.

ಆಡುವ ಬಳಗ:
ಗುಜರಾತ್ ಟೈಟನ್ಸ್
ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಪ್ರದೀಪ್ ಸಾಂಗ್ವಾನ್, ಲಾಕಿ ಫರ್ಗುಸನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ
ಬೆಂಚ್: ಮ್ಯಾಥ್ಯೂ ವೇಡ್, ವರುಣ್ ಆರೋನ್, ವಿಜಯ್ ಶಂಕರ್, ಜಯಂತ್ ಯಾದವ್, ಗುರುಕೀರತ್ ಸಿಂಗ್ ಮಾನ್, ಅಭಿನವ್ ಮನೋಹರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ದರ್ಶನ್ ನಲ್ಕಂಡೆ, ರಹಮಾನುಲ್ಲಾ ಗುರ್ಬಾಜ್, ಡೊಮಿನಿಕ್ ಡ್ರೇಕ್ಸ್, ಯಶ್ ದಯಾಳ್, ನೂರ್ ಅಹ್ಮದ್

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಕೀರಾನ್ ಪೊಲಾರ್ಡ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಕುಮಾರ್ ಕಾರ್ತಿಕೇಯ, ಜಸ್ಪ್ರೀತ್ ಬುಮ್ರಾ, ರಿಲೆ ಮೆರೆಡಿತ್
ಬೆಂಚ್: ಜಯದೇವ್ ಉನದ್ಕತ್, ಫ್ಯಾಬಿಯನ್ ಅಲೆನ್, ಬೇಸಿಲ್ ಥಂಪಿ, ಅನ್ಮೋಲ್ಪ್ರೀತ್ ಸಿಂಗ್, ಡೆವಾಲ್ಡ್ ಬ್ರೆವಿಸ್, ರಾಹುಲ್ ಬುದ್ಧಿ, ಟ್ರಿಸ್ಟಾನ್ ಸ್ಟಬ್ಸ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಲ್, ಮಯಾಂಕ್ ಮಾರ್ಕಂಡೆ, ರಮಣದೀಪ್ ಸಿಂಗ್, ಸಂಜಯ್ ಯಾದವ್, ಹೃತಿಕ್ ಶೋಕೀನ್

Story first published: Friday, May 6, 2022, 21:37 [IST]
Other articles published on May 6, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X