For Quick Alerts
ALLOW NOTIFICATIONS  
For Daily Alerts
 

GT vs MI Preview : ಪ್ರಿವ್ಯೂ, ಪಿಚ್ ರಿಪೋರ್ಟ್, ಹವಾಮಾನ ವರದಿ, ಸಂಭಾವ್ಯ ತಂಡ

IPL 2022: GT vs MI Preview, Predicted Playing XI, Pitch Report and Weather Forecast

ಇಂಡಿಯನ್ ಪ್ರೀಮಿಯರ್ ಲೀಗ್‌ನ 15ನೇ ಆವೃತ್ತಿಯ 51ನೇ ಪಂದ್ಯ ಶುಕ್ರವಾರ ನಡೆಯಲಿದೆ. ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣೆಸಾಡಲಿದೆ. ಗುಜರಾತ್ ಟೈಟನ್ಸ್ ತಂಡ ಈ ಬಾರಿಯ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚುತ್ತಿದ್ದು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ತಂಡ ಸತತ ಸೋಲಿನೊಂದಿಗೆ ಭಾರೀ ಹಿನ್ನೆಡೆ ಅನುಭವಿಸಿದ್ದು ಟೂರ್ನಿಯಿಂದ ಈಗಾಗಲೇ ಹೊರಬಿದ್ದಿದೆ.

ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಈ ಬಾರಿಯ ಆವೃತ್ತಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡ ಹತ್ತು ಪಂದ್ಯಗಳನ್ನು ಆಡಿದ್ದು ಅವುಗಳಲ್ಲಿ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಆದರೆ ಮುಂಬೈ ಇಂಡಿಯನ್ಸ್ ತಂಡ 9 ಪಂದ್ಯಗಳನ್ನು ಆಡಿ ಕೇವಲ ಒಂದು ಗೆಲುವು ಮಾತ್ರವೇ ಸಾಧಿಸಿದೆ. ಆದರೆ ಗುಜರಾತ್ ಟೈಟನ್ಸ್ ಕೊನೆಯ ಪಂದ್ಯವನ್ನು ಪಂಜಾಬ್ ಕಿಂಗ್ಸ್ ವಿರುದ್ಧ ಆಡಿದ್ದು ಈ ಪಂದ್ಯದಲ್ಲಿ ಸೋಲಿನ ರುಚಿ ಅನುಭವಿಸಿದೆ. ಆದರೆ ಮುಂಬೈ ಇಂಡಿಯನ್ಸ್ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಅಂತಿಮ ಪಂದ್ಯವನ್ನು ಆಡಿದ್ದು ಈ ಪಂದ್ಯದಲ್ಲಿ ಈ ಟೂರ್ನಿಯ ಚೊಚ್ಚಲ ಗೆಲುವು ಸಾಧಿಸಿತು.

ಸ್ಕ್ವಾಡ್‌ಗಳು: ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಕೀರನ್ ಪೊಲಾರ್ಡ್, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ಇಶಾನ್ ಕಿಶನ್, ರಮಣ್‌ದೀಪ್ ಸಿಂಗ್, ರಾಹುಲ್ ಬುದ್ಧಿ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಲ್, ಫ್ಯಾಬಿಯನ್ ಅಲೆನ್, ಡೆವಾಲ್ಡ್ ಬ್ರೆವಿಸ್, ಬಾಸಿಲ್ ಥಂಪಿ, ಎಂ ಅಶ್ವಿನ್, ಜಯದೇವ್ ಉನದ್ಕತ್, ಮಯಾಂಕ್ ಮರ್ಕಂಡೆ, ತಿಲಕ್ ಮಾರ್ಕಂಡೆ , ಸಂಜಯ್ ಯಾದವ್, ರಿಲೆ ಮೆರೆಡಿತ್, ಮೊಹಮ್ಮದ್ ಅರ್ಷದ್ ಖಾನ್, ಅನ್ಮೋಲ್ಪ್ರೀತ್ ಸಿಂಗ್

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್, ರಹಮಾನುಲ್ಲಾ ಗುರ್ಬಾಜ್

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯ ಮೇ 6 ರಂದು ಶುಕ್ರವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ಬ್ರೆಬೋರ್ನ್ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಬ್ಯಾಟರ್ ಹಾಗೂ ಬೌಲರ್‌ ಇಬ್ಬರಿಗೂ ಸಮಾನಾಗಿ ಬೆಂಬಲ ನೀಡುವ ಪಿಚ್ ಆಗಿದೆ. ಪಂದ್ಯ ಮುಂದುವರಿಯುತ್ತಿದ್ದಂತೆ ಇಬ್ಬನಿ ಬೀಳುವ ಕಾರಣ ಎರಡನೇ ಸರದಿಯಲ್ಲಿ ಬೌಲಿಂಗ್ ತಡೆಸುವ ತಂಡಗಳು ಸವಾಲನ್ನು ಎದುರಿಸುತ್ತದೆ. ಈ ಅಂಗಳದಲ್ಲಿಮ ಮೊದಲ ಇನ್ನಿಂಗ್ಸ್‌ನ ಸರಾಸರಿ ಮೊತ್ತ 180 ಆಗಿದೆ.

CSK vs RCB: ಪಂದ್ಯದ ವೇಳೆ ಕೊಹ್ಲಿಗೆ ಚೆಂಡಿನಿಂದ ಹೊಡೆದು ಕ್ಷಮೆಯಾಚಿಸಿದ ಸಿಎಸ್‌ಕೆ ಯುವ ಆಟಗಾರ
ಸಂಭಾವ್ಯ ಆಡುವ ಬಳಗ: ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಪ್ರದೀಪ್ ಸಾಂಗ್ವಾನ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ

ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಡೇನಿಯಲ್ ಸಾಮ್ಸ್, ಹೃತಿಕ್ ಶೋಕೀನ್, ಜಸ್ಪ್ರೀತ್ ಬುಮ್ರಾ, ರಿಲೆ ಮೆರೆಡಿತ್, ಕುಮಾರ್ ಕಾರ್ತಿಕೇಯ

Story first published: Thursday, May 5, 2022, 20:23 [IST]
Other articles published on May 5, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+