GT vs PBKS: ಈ ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಬೇಕೆಂದರೆ ಈ ಆಟಗಾರರನ್ನು ಆಯ್ಕೆ ಮಾಡಿ

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 16ನೇ ಪಂದ್ಯದಲ್ಲಿ ನೂತನ ತಂಡವಾದ ಗುಜರಾತ್ ಟೈಟಾನ್ಸ್ ತಂಡವು ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.
ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ಬ್ರಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಂಜೆ 7.30ಕ್ಕೆ ಶುರುವಾಗಲಿದೆ. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನೂತನ ತಂಡವಾಗಿ ಕಣಕ್ಕಿಳಿದಿರುವ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಇಲ್ಲಿಯವರೆಗೂ ಆಡಿರುವ ಎರಡೂ ಪಂದ್ಯಗಳಲ್ಲಿಯೂ ಕೂಡ ಗೆಲುವು ಸಾಧಿಸಿದೆ. ಅತ್ತ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 3 ಪಂದ್ಯಗಳನ್ನಾಡಿರುವ ಮಯಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಉಳಿದೊಂದು ಪಂದ್ಯದಲ್ಲಿ ಸೋಲನ್ನು ಅನುಭವಿಸಿದೆ.
ಇನ್ನು ಇತ್ತಂಡಗಳ ನಡುವಿನ ಈ ಪಂದ್ಯ ನಡೆಯಲಿರುವ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ತಂಡ ಈಗಾಗಲೇ ಪಂದ್ಯವನ್ನು ಆಡಿರುವ ಅನುಭವವನ್ನು ಹೊಂದಿದ್ದು, ಗುಜರಾತ್ ಟೈಟನ್ಸ್ ಇದೇ ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಕಣಕ್ಕಿಳಿಯುತ್ತಿದೆ. ಈ ಕ್ರೀಡಾಂಗಣದಲ್ಲಿ ತನ್ನ ಕೊನೆಯ ಪಂದ್ಯದಲ್ಲಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿದ್ದ ಪಂಜಾಬ್ ಕಿಂಗ್ಸ್ 54 ರನ್‌ಗಳ ಬೃಹತ್ ಜಯವನ್ನು ಸಾಧಿಸಿದ್ದು ಹೆಚ್ಚಿನ ವಿಶ್ವಾಸದೊಂದಿಗೆ ಕಣಕ್ಕಿಳಿಯಲಿದೆ. ನೂತನ ನಾಯಕರುಗಳಾದ ಹಾರ್ದಿಕ್ ಪಾಂಡ್ಯ ಮತ್ತು ಮಯಾಂಕ್ ಅಗರ್ವಾಲ್ ನಡುವಿನ ಹಣಾಹಣಿಯಲ್ಲಿ ಯಾರ ನಾಯಕತ್ವ ಗೆಲ್ಲಲಿದೆ ಎಂಬ ಚರ್ಚೆ ಒಂದೆಡೆ ಏರ್ಪಟ್ಟಿದ್ದರೆ, ಮತ್ತೊಂದೆಡೆ ಈ ಪಂದ್ಯಕ್ಕಾಗಿ ಕ್ರಿಕೆಟ್ ಪ್ರೇಮಿಗಳು ತಮ್ಮ ತಮ್ಮ ಡ್ರೀಮ್ ತಂಡಗಳನ್ನು ರಚಿಸುತ್ತಿದ್ದಾರೆ. ಹೀಗೆ ಈ ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸುತ್ತಿರುವ ಕ್ರಿಕೆಟ್ ಪ್ರೇಮಿಗಳು ಈ ಕೆಳಕಂಡಂತೆ ತಂಡಗಳನ್ನು ರಚಿಸಿದರೆ ಗೆಲ್ಲುವ ಸಾಧ್ಯತೆಗಳು ಹೆಚ್ಚಿರಲಿವೆ.

ನಾಯಕ ಮತ್ತು ಉಪನಾಯಕ
ಗುಜರಾತ್ ಟೈಟನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯಕ್ಕೆ ನೀವು ಆಯ್ಕೆ ಮಾಡಲಿರುವ ಡ್ರೀಮ್ ಟೀಮ್‌ನಲ್ಲಿ ಶುಬ್ ಮನ್ ಗಿಲ್ ಅಥವಾ ಲಿಯಾಮ್ ಲಿವಿಂಗ್ ಸ್ಟನ್ ಅವರನ್ನು ನಾಯಕ ಸ್ಥಾನಕ್ಕೆ ಆಯ್ಕೆ ಮಾಡಿ ಹಾಗೂ ಉಪನಾಯಕನ ಸ್ಥಾನಕ್ಕೆ ಲಾಕಿ ಫರ್ಗ್ಯುಸನ್ ಅಥವಾ ಮಯಾಂಕ್ ಅಗರ್ವಾಲ್ ಅವರನ್ನು ಆಯ್ಕೆ ಮಾಡಿ.

ಡ್ರೀಮ್ ಟೀಮ್ಸ್
ಗುಜರಾತ್ ಟೈಟನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯಕ್ಕಾಗಿ ನೀವು ರಚಿಸಲಿರುವ ಡ್ರೀಮ್ ಟೀಮ್ಸ್ ಹೀಗಿದ್ದರೆ ಉತ್ತಮ
ತಂಡ 1: ಜಾನಿ ಬೈರ್‌ಸ್ಟೋವ್, ಜಿತೇಶ್ ಶರ್ಮಾ, ಶಿಖರ್ ಧವನ್, ಮಯಾಂಕ್ ಅಗರ್ವಾಲ್, ಶುಭಮನ್ ಗಿಲ್ (ನಾಯಕ), ಅಭಿನವ್ ಮನೋಹರ್, ಲಿಯಾಮ್ ಲಿವಿಂಗ್‌ಸ್ಟೋನ್, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ, ಕಗಿಸೊ ರಬಾಡ, ಲಾಕಿ ಫರ್ಗುಸನ್ (ಉಪನಾಯಕ)
ತಂಡ 2: ಜಾನಿ ಬೈರ್ಸ್ಟೋವ್, ಮಯಾಂಕ್ ಅಗರ್ವಾಲ್ (ಉಪನಾಯಕ), ಶಾರುಖ್ ಖಾನ್, ಶುಭಮನ್ ಗಿಲ್, ಅಭಿನವ್ ಮನೋಹರ್, ಲಿಯಾಮ್ ಲಿವಿಂಗ್ಸ್ಟೋನ್ (ನಾಯಕ), ಹಾರ್ದಿಕ್ ಪಾಂಡ್ಯ, ಓಡಿಯನ್ ಸ್ಮಿತ್, ರಶೀದ್ ಖಾನ್, ರಾಹುಲ್ ಚಾಹರ್, ವೈಭವ್ ಅರೋರಾ


ಈ ಆಟಗಾರನನ್ನು ತಂಡದಿಂದ ಹೊರಗಿಡಿ
ಇನ್ನು ಗುಜರಾತ್ ಟೈಟನ್ಸ್ ಪರ 2 ಪಂದ್ಯಗಳಲ್ಲಿಯೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿರುವ ವಿಜಯ್ ಶಂಕರ್ ಕೇವಲ ಒಂದೇ ಒಂದು ಬೌಂಡರಿ ಬಾರಿಸುವಲ್ಲಿ ಮಾತ್ರ ಯಶಸ್ವಿಯಾಗಿದ್ದು, ಬ್ಯಾಟಿಂಗ್ ಮೇಲಿನ ಹಿಡಿತವನ್ನು ಸಂಪೂರ್ಣವಾಗಿ ಕಳೆದುಕೊಂಡಂತಿದೆ. ಹೀಗೆ ಕಳಪೆಯಾಗಿರುವ ವಿಜಯ್ ಶಂಕರ್ ಅವರನ್ನು ನಿಮ್ಮ ಡ್ರೀಮ್ ತಂಡದಿಂದ ಹೊರಗಿಡುವುದು ಉತ್ತಮ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications