IPL 2022, GT vs PBKS Highlights: ಲಾಸ್ಟ್ ಬಾಲ್ ಥ್ರಿಲ್ಲರ್! ಪಂಜಾಬ್ ಕಿಂಗ್ಸ್ ವಿರುದ್ಧ ಗುಜರಾತ್‌ಗೆ ರೋಚಕ ಗೆಲುವು

ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣ ಶುಕ್ರವಾರ ಅತ್ಯಂತ ರೋಮಾಂಚನಕಾರಿ ಪಂದ್ಯಕ್ಕೆ ಸಾಕ್ಷಿಯಾಗಿದೆ. ಬೃಹತ್ ಮೊತ್ತದ ಈ ಪಂದ್ಯದಲ್ಲಿ ಎರಡು ತಂಡಗಳು ಕೂಡ ಅಮೋಘ ಪ್ರದರ್ಶನ ನೀಡಿದ್ದು ಅಂತಿಮ ಎರಡು ಎಸೆತಗಳಲ್ಲಿ ಗುಜರಾತ್ ಟೈಟನ್ಸ್ ಪರವಾಗಿ ಆಲ್‌ರೌಂಡರ್ ರಾಹುಲ್ ತೆವಾಟಿಯಾ ಶತಕ ಸಿಡಿಸುವ ಮೂಲಕ ತಂಡಕ್ಕೆ ರೋಚಕ ಗೆಲುವು ತಂದಿತ್ತಿದ್ದಾರೆ. ಈ ಮೂಲಕ ಗುಜರಾತ್ ಟೈಟನ್ಸ್ ಈ ಟೂರ್ನಿಯಲ್ಲಿ ಅಜೇಯವಾಗುಳಿದಿದೆ.
ಪಂಜಾಬ್ ಕಿಂಗ್ಸ್ ತಂಡ ನಿಡಿದ 190 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡದ ಪರವಾಗಿ ಶುಬ್ಮನ್ ಗಿಲ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ ಪಂದ್ಯವನ್ನು ಗೆಲುವಿನ ಸನಿಹದವರೆಗೆ ತಲುಪಿದ್ದರು ಶುಬ್ಮನ್ ಗಿಲ್. ಆದರೆ ಅಂತಿಮ ಹಂತದಲ್ಲಿ ಪಂಜಾಬ್ ಬೌಲರ್‌ಗಳು ಮೇಲುಗೈ ಸಾಧಿಸುವ ಮೂಲಕ ಗುಜರಾತ್ ಟೈಟನ್ಸ್ ಸೋಲುವ ಭೀತಿಗೆ ಒಳಗಾಯಿತು. ಅಂತಿಮ ಓವರ್‌ನಲ್ಲಿ 19 ರನ್‌ಗಳಿಸುವ ಸವಾಲು ಟೈಟನ್ಸ್ ಮುಂದಿತ್ತು.
ಈ ಅಂತಿಮ ಓವರ್‌ನ ಮೊದಲ ನಾಲ್ಕು ಎಸೆತಗಳಲ್ಲಿ ಗುಜರಾತ್ ಗಳಿಸಿದ್ದು ಕೇವಲ 5 ರನ್ ಮಾತ್ರ. ಈ ಅವಧಿಯಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ವಿಕೆಟ್ ಕೂಡ ಕಳೆದುಕೊಂಡಿತ್ತು ಟೈಟನ್ಸ್. ಈ ಸಂದರ್ಭದಲ್ಲಿ ಕ್ರೀಸ್‌ಗೆ ಇಳಿದ ರಾಹುಲ್ ತೆವಾಟಿಯಾ ಅಂತಿಮ ಎರಡು ಎಸೆತಗಳಲ್ಲಿ ಎರಡು ಭರ್ಜರಿ ಸಿಡಿಸಿ ತಂಡವನ್ನು ರೋಚಕವಾಗಿ ಗೆಲ್ಲಿಸಿದರು. ಈ ಮೂಲಕ ಗುಜರಾತ್ ಟೈಟನ್ಸ್ ತಂಡ ಈ ಪಂದ್ಯದಲ್ಲಿ ಭರ್ಜರಿ 6 ವಿಕೆಟ್‌ಗಳ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿತು. ನಾಯಕ ಮಯಾಂಕ್ ಅಗರ್ವಾಲ್ ಹಾಗೂ ಜಾನಿ ಬೈರ್‌ಸ್ಟೋವ್ ವಿಕೆಟ್‌ಅನ್ನು ಶೀಘ್ರವಾಗಿ ಕಳೆದುಕೊಂಡರೂ ಧವನ್ 35 ರನ್‌ಗಳ ಉತ್ತಮ ಕೊಡುಗೆ ನೀಡಿದರು. ಆದರೆ ಮತ್ತೊಂದು ತುದಿಯಲ್ಲಿದ್ದ ಲಿಯಾಮ್ ಲಿವಿಂಗ್ಸ್‌ಸ್ಟನ್ ಮತ್ತೊಂದು ಭರ್ಜರಿ ಇನ್ನಿಂಗ್ಸ್ ನೀಡಿದರು. ಸ್ಪೋಟಕ ಅರ್ಧ ಶತಕ ಸಿಡಿಸಿದ ಲಿವಿಂಗ್‌ಸ್ಟನ್ ಕೇವಲ 27 ಎಸೆತ ಎದುರಿಸಿದ್ದು 64 ರನ್‌ಗಳ ಕೊಡುಗೆ ನೀಡಿದ್ದಾರೆ. ಈ ಭರ್ಜರಿ ಬ್ಯಾಟಿಂಗ್‌ನಿಂದಾಗಿ ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ 9 ವಿಕೆಟ್ ಕಳೆದುಕೊಂಡು 189 ರನ್‌ಗಳನ್ನು ಗಳಿಸಲು ಸಾಧ್ಯವಾಯಿತು.
ಜಿಟಿ ತಂಡದ ಪರವಾಗಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ರಶೀದ್ ಖಾನ್ 4 ಓವರ್‌ಗಳಲ್ಲಿ ಕೇವಲ 22 ರನ್ ನೀಡಿ 3 ವಿಕೆಟ್ ಕಿತ್ತರು. ಚೊಚ್ಚಲ ಪಂದ್ಯವನ್ನಾಡಿದ ದರ್ಶನ್ ನಲ್ಕಂಡೆ ಕೂಡ 2 ವಿಕೆಟ್ ಪಡೆದು ಮಿಂಚಿದರು.
ಶತಕದಂಚಿನಲ್ಲಿ ಎಡವಿದ ಶುಬ್ಮನ್ ಗಿಲ್: ಇನ್ನು ಪಂಜಾಬ್ ಕಿಂಗ್ಸ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟಿದ ಟೈಟನ್ಸ್ ಆರಂಭಿಕ ಆಟಗಾರ ಮ್ಯಾಥ್ಯೂ ವೇಡ್ ವಿಕೆಟ್‌ಅನ್ನು ಶೀಘ್ರವಾಗಿ ಕಳೆದುಕೊಂಡಿತ್ತು. ಆದರೆ ಮಯಾಂಕ್ ಅಗರ್ವಾಲ್ ತಂಡಕ್ಕೆ ಭದ್ರ ಅಡಿಪಾಯವನ್ನು ಒದಗಿಸಿದರು. ಅದ್ಭುತ ಪ್ರದರ್ಶನ ನೀಡಿದ ಗಿಲ್ 59 ಎಸೆತಗಳನ್ನು ಎದುರಿಸಿ 96 ರನ್‌ಗಳಿಸಿ ಶತಕದ ಅಂಚಿನಲ್ಲಿ ಎಡವಿದರು. 19ನೇ ಓವರ್‌ನ 5ನೇ ಎಸೆತದಲ್ಲಿ ಗಿಲ್ ವಿಕೆಟ್ ಕಳೆದುಕೊಂಡರು. ಅಂತಿಮ ಹಂತದಲ್ಲಿ ರಾಹುಲ್ ತೆವಾಟಿಯಾ ಗುಜರಾತ್ ಟೈಟನ್ಸ್ ತಂಡದ ಗೆಲುವನ್ನು ಸಾರಿದರು.
ಗುಜರಾತ್ ಟೈಟನ್ಸ್: ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ, ದರ್ಶನ್ ನಲ್ಕಂಡೆ
ಬೆಂಚ್: ವಿಜಯ್ ಶಂಕರ್, ವರುಣ್ ಆರೋನ್, ವೃದ್ಧಿಮಾನ್ ಸಹಾ, ಪ್ರದೀಪ್ ಸಾಂಗ್ವಾನ್, ಜಯಂತ್ ಯಾದವ್, ಗುರುಕೀರತ್ ಸಿಂಗ್ ಮಾನ್, ಅಲ್ಜಾರಿ ಜೋಸೆಫ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ರಹಮಾನುಲ್ಲಾ ಗುರ್ಬಾಜ್, ಡೊಮಿನಿಕ್ ಡ್ರೇಕ್ಸ್, ಯಶ್ ದಯಾಳ್, ನೂರ್ ಅಹ್ಮದ್
ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಲಿಯಾಮ್ ಲಿವಿಂಗ್ಸ್ಟೋನ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ, ಶಾರುಖ್ ಖಾನ್, ಓಡಿಯನ್ ಸ್ಮಿತ್, ಕಗಿಸೊ ರಬಾಡ, ರಾಹುಲ್ ಚಾಹರ್, ವೈಭವ್ ಅರೋರಾ, ಅರ್ಶ್‌ದೀಪ್ ಸಿಂಗ್
ಬೆಂಚ್: ಭಾನುಕಾ ರಾಜಪಕ್ಸೆ, ಬೆನ್ನಿ ಹೋವೆಲ್, ಸಂದೀಪ್ ಶರ್ಮಾ, ರಿಷಿ ಧವನ್, ಬಲ್ತೇಜ್ ಸಿಂಗ್, ರಿಟಿಕ್ ಚಟರ್ಜಿ, ಪ್ರೇರಕ್ ಮಂಕಡ್, ಇಶಾನ್ ಪೊರೆಲ್, ಅಥರ್ವ ಟೈಡೆ, ಪ್ರಭ್‌ಸಿಮ್ರಾನ್ ಸಿಂಗ್, ಹರ್‌ಪ್ರೀತ್ ಬ್ರಾರ್, ಅನ್ಶ್ ಪಟೇಲ್, ರಾಜ್ ಬಾವಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications