GT vs PBKS: ಈ ಮೈಲಿಗಲ್ಲುಗಳ ಮೇಲೆ ಹಾರ್ದಿಕ್ ಪಾಂಡ್ಯ ಮತ್ತು ರಶೀದ್ ಖಾನ್ ಕಣ್ಣು

ನೂತನ ತಂಡ ಗುಜರಾತ್ ಟೈಟನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 16ನೇ ಪಂದ್ಯದಲ್ಲಿ ಏಪ್ರಿಲ್ 8ರಂದು ಸೆಣಸಾಟ ನಡೆಸುತ್ತಿದ್ದು, ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ಬ್ರಬೌರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನು ಈ ಬಾರಿಯ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 2 ಪಂದ್ಯಗಳನ್ನಾಡಿರುವ ಗುಜರಾತ್ ಟೈಟನ್ಸ್ ಎರಡೂ ಪಂದ್ಯಗಳಲ್ಲಿಯೂ ಸಹ ಗೆಲುವನ್ನು ಕಂಡಿದ್ದು ಸದ್ಯ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆರನೇ ಸ್ಥಾನ ಪಡೆದುಕೊಂಡು ಲೀಗ್ ಹಂತದಲ್ಲಿ ಹೊರಬಿದ್ದಿದ್ದ ಪಂಜಾಬ್ ಕಿಂಗ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 3 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಉಳಿದೊಂದು ಪಂದ್ಯದಲ್ಲಿ ಸೋಲುಂಡಿದೆ.
ಇನ್ನು ಬ್ರಬೌರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಈ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ತಂಡ ಈಗಾಗಲೇ ಆಡಿರುವ ಅನುಭವವನ್ನು ಹೊಂದಿದೆ. ಹೌದು, ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಇದೇ ಕ್ರೀಡಾಂಗಣದಲ್ಲಿ ಎದುರಿಸಿದ್ದ ಪಂಜಾಬ್ ಕಿಂಗ್ಸ್ 54 ರನ್‌ಗಳ ಬೃಹತ್ ಅಂತರದ ಜಯವನ್ನು ಸಾಧಿಸಿತ್ತು. ಅತ್ತ ಟೂರ್ನಿಯಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿಯೂ ಗೆದ್ದಿರುವ ಗುಜರಾತ್ ಟೈಟನ್ಸ್ ಈ ಬ್ರಬೌರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೇ ಮೊದಲ ಬಾರಿಗೆ ಕಣಕ್ಕಿಳಿಯುತ್ತಿದ್ದು, ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಗುಜರಾತ್ ಟೈಟನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಈ ಪಂದ್ಯದಲ್ಲಿ ಇತ್ತಂಡಗಳ ಕೆಲ ಆಟಗಾರರು ಕೆಲ ಮೈಲಿಗಲ್ಲನ್ನು ನೆಡಲಿದ್ದು, ಈ ಮೈಲಿಗಲ್ಲುಗಳ ಕುರಿತಾದ ವಿವರ ಈ ಕೆಳಕಂಡಂತಿದೆ..
* ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇದುವರೆಗೂ ಒಟ್ಟು 99 ಸಿಕ್ಸರ್ ಬಾರಿಸಿರುವ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಈ ಪಂದ್ಯದಲ್ಲಿ ಒಂದು ಸಿಕ್ಸರ್ ಬಾರಿಸಿದರೆ 100 ಐಪಿಎಲ್ ಸಿಕ್ಸರ್ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
* ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇದುವರೆಗೂ ಒಟ್ಟು 49 ವಿಕೆಟ್ ಪಡೆದಿರುವ ರಾಹುಲ್ ಚಹರ್ 50 ವಿಕೆಟ್ ಮೈಲಿಗಲ್ಲನ್ನು ಮುಟ್ಟಲು ಈ ಪಂದ್ಯದಲ್ಲಿ ಇನ್ನೂ ಒಂದು ವಿಕೆಟ್ ಪಡೆಯಬೇಕಾದ ಅಗತ್ಯವಿದೆ.
* 348 ಟಿ ಟ್ವೆಂಟಿ ಸಿಕ್ಸರ್‌ಗಳನ್ನು ಬಾರಿಸಿರುವ ಡೇವಿಡ್ ಮಿಲ್ಲರ್ ಈ ಪಂದ್ಯದಲ್ಲಿ 2 ಸಿಕ್ಸರ್ ಬಾರಿಸಿದರೆ 350 ಟಿ ಟ್ವೆಂಟಿ ಸಿಕ್ಸರ್ ಮೈಲಿಗಲ್ಲನ್ನು ಮುಟ್ಟಲಿದ್ದಾರೆ. ಡೇವಿಡ್ ಮಿಲ್ಲರ್ ಈ ಮೈಲಿಗಲ್ಲನ್ನು ಮುಟ್ಟಿದರೆ, ಎಬಿ ಡಿವಿಲಿಯರ್ಸ್ ನಂತರ ಈ ಸಾಧನೆ ಮಾಡಿದ ದಕ್ಷಿಣ ಆಫ್ರಿಕಾದ ಎರಡನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.
* ಐಪಿಎಲ್‌ನಲ್ಲಿ ಇದುವರೆಗೂ ಒಟ್ಟು 95 ವಿಕೆಟ್‌ಗಳನ್ನು ಪಡೆದಿರುವ ರಶೀದ್ ಖಾನ್ ಈ ಪಂದ್ಯದಲ್ಲಿ 5 ವಿಕೆಟ್ ಪಡೆದರೆ 100 ಐಪಿಎಲ್ ವಿಕೆಟ್ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
* ಐಪಿಎಲ್‌ನಲ್ಲಿ ಇದುವರೆಗೂ ಒಟ್ಟು 99 ಬೌಂಡರಿಗಳನ್ನು ಬಾರಿಸಿರುವ ಜಾನಿ ಬೈರ್‌ಸ್ಟೋ ಈ ಪಂದ್ಯದಲ್ಲಿ ಇನ್ನೊಂದು ಬೌಂಡರಿ ಬಾರಿಸಿದರೆ 100 ಐಪಿಎಲ್ ಬೌಂಡರಿಗಳನ್ನು ಬಾರಿಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

ಸಂಭಾವ್ಯ ಆಡುವ ಬಳಗಗಳು:
ಪಂಜಾಬ್ ಕಿಂಗ್ಸ್ ಸಂಭಾವ್ಯ ಆಡುವ ಬಳಗ: ಮಯಾಂಕ್ ಅಗರ್ವಾಲ್(ನಾಯಕ), ಶಿಖರ್ ಧವನ್, ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟೋನ್, ಶಾರುಖ್ ಖಾನ್, ಜಿತೇಶ್ ಶರ್ಮಾ( ವಿಕೆಟ್ ಕೀಪರ್ ), ಓಡಿಯನ್ ಸ್ಮಿತ್, ಅರ್ಷದೀಪ್ ಸಿಂಗ್, ಕಗಿಸೊ ರಬಾಡ, ರಾಹುಲ್ ಚಾಹರ್ ಮತ್ತು ವೈಭವ್ ಅರೋರಾ
ಗುಜರಾತ್ ಟೈಟನ್ಸ್ ಸಂಭಾವ್ಯ ಆಡುವ ಬಳಗ: ಶುಭಮನ್ ಗಿಲ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ವಿಜಯ್ ಶಂಕರ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ಲಾಕಿ ಫರ್ಗುಸನ್, ವರುಣ್ ಆರೋನ್, ಮೊಹಮ್ಮದ್ ಶಮಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications