PBKS vs GT Preview: ಪಿಚ್ ವರದಿ, ಸಂಭಾವ್ಯ ಆಡುವ ಬಳಗ ಮತ್ತು ನೇರಪ್ರಸಾರದ ಮಾಹಿತಿ

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 16ನೇ ಪಂದ್ಯ ಏಪ್ರಿಲ್ 8ರ ಶುಕ್ರವಾರದಂದು ಮುಂಬೈನ ಬ್ರಬೌರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ನೂತನ ತಂಡ ಗುಜರಾತ್ ಟೈಟನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 2 ಪಂದ್ಯಗಳನ್ನಾಡಿ ಎರಡರಲ್ಲಿಯೂ ಜಯ ಸಾಧಿಸಿರುವ ಗುಜರಾತ್ ಟೈಟನ್ಸ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ ಹಾಗೂ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 3 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಗೆದ್ದಿರುವ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ಹೌದು, ಟೂರ್ನಿಯಲ್ಲಿ ತನ್ನ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಿ ಜಯ ಸಾಧಿಸಿದ ಗುಜರಾತ್ ಟೈಟನ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ದ್ವಿತೀಯ ಪಂದ್ಯದಲ್ಲಿಯೂ ಸಹ ಗೆದ್ದು ಬೀಗಿದೆ. ಇನ್ನು ಟೂರ್ನಿಯಲ್ಲಿನ ತನ್ನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೆಣಸಾಡಿ ಜಯ ಸಾಧಿಸಿದ್ದ ಪಂಜಾಬ್ ಕಿಂಗ್ಸ್ ನಂತರ ದ್ವಿತೀಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋಲನ್ನು ಅನುಭವಿಸಿತು ಹಾಗೂ ಮೂರನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಪಂಜಾಬ್ ಕಿಂಗ್ಸ್ ಸೋಲುಣಿಸಿದೆ. ಹೀಗೆ ಟೂರ್ನಿಯಲ್ಲಿ ತಾನಾಡಿರುವ ಎರಡೂ ಪಂದ್ಯಗಳಲ್ಲಿಯೂ ಗೆಲುವು ಸಾಧಿಸಿರುವ ಗುಜರಾತ್ ಟೈಟನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿಯೂ ಸಹ ಗೆದ್ದು ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸುತ್ತಾ ಅಥವಾ ಪಂಜಾಬ್ ಕಿಂಗ್ಸ್ ಗುಜರಾತ್ ಟೈಟನ್ಸ್ ತಂಡಕ್ಕೆ ಮೊದಲ ಸೋಲನ್ನು ಉಣಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ಇತ್ತಂಡಗಳ ನಡುವಿನ ಈ ಪಂದ್ಯದ ಕುರಿತ ಪಿಚ್ ವರದಿ, ಸಂಭಾವ್ಯ ಆಡುವ ಬಳಗ ಮತ್ತು ನೇರಪ್ರಸಾರದ ಮಾಹಿತಿ ಈ ಕೆಳಕಂಡಂತಿದೆ..
ಪಿಚ್ ವರದಿ: ಪಂಜಾಬ್ ಕಿಂಗ್ಸ್ ತನ್ನ ಹಿಂದಿನ ಪಂದ್ಯದಲ್ಲಿ ಇದೇ ಮೈದಾನದಲ್ಲಿ ಆಡಿರುವ ಅನುಭವ ಹೊಂದಿರುವ ಗುಜರಾತ್ ಟೈಟಾನ್ಸ್‌ಗಿಂತ ಸ್ವಲ್ಪ ಪ್ರಯೋಜನವನ್ನು ಹೊಂದಿದೆ. ಇನ್ನು ಮುಂಬೈನ ಬ್ರಬೌರ್ನ್ ಕ್ರೀಡಾಂಗಣದ ಪಿಚ್ ಇದುವರೆಗೆ ಬ್ಯಾಟಿಂಗ್‌ಗೆ ಉತ್ತಮವಾಗಿದೆ. ಆದಾಗ್ಯೂ, ಟಾಸ್ ಗೆದ್ದ ನಾಯಕ ಇಲ್ಲಿ ಮೊದಲು ಬೌಲಿಂಗ್ ಆಯ್ಕೆ ಮಾಡುತ್ತಾನೆ ಏಕೆಂದರೆ, ಈ ಪಿಚ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿ ದೊಡ್ಡ ಮೊತ್ತ ಕಲೆಹಾಕುವುದಕ್ಕಿಂತ ಮೊದಲು ಬೌಲಿಂಗ್ ಮಾಡಿ ನಂತರ ಎದುರಾಳಿ ತಂಡ ನೀಡುವ ಗುರಿಯನ್ನು ಬೆನ್ನಟ್ಟುವುದು ಸುಲಭವಾಗಿದೆ.
ಸಂಭಾವ್ಯ ಆಡುವ ಬಳಗಗಳು:
ಪಂಜಾಬ್ ಕಿಂಗ್ಸ್ ಸಂಭಾವ್ಯ ಆಡುವ ಬಳಗ: ಮಯಾಂಕ್ ಅಗರ್ವಾಲ್(ನಾಯಕ), ಶಿಖರ್ ಧವನ್, ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟೋನ್, ಶಾರುಖ್ ಖಾನ್, ಜಿತೇಶ್ ಶರ್ಮಾ( ವಿಕೆಟ್ ಕೀಪರ್ ), ಓಡಿಯನ್ ಸ್ಮಿತ್, ಅರ್ಷದೀಪ್ ಸಿಂಗ್, ಕಗಿಸೊ ರಬಾಡ, ರಾಹುಲ್ ಚಾಹರ್ ಮತ್ತು ವೈಭವ್ ಅರೋರಾ
ಗುಜರಾತ್ ಟೈಟನ್ಸ್ ಸಂಭಾವ್ಯ ಆಡುವ ಬಳಗ: ಶುಭಮನ್ ಗಿಲ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ವಿಜಯ್ ಶಂಕರ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ಲಾಕಿ ಫರ್ಗುಸನ್, ವರುಣ್ ಆರೋನ್, ಮೊಹಮ್ಮದ್ ಶಮಿ
ನೇರಪ್ರಸಾರದ ಮಾಹಿತಿ: ಗುಜರಾತ್ ಟೈಟನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಟಿವಿ ಚಾನೆಲ್‌ಗಳಲ್ಲಿ ವೀಕ್ಷಿಸಬಹುದಾಗಿದೆ. ಇನ್ನು ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಸಹ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications