RCB vs GT Preview: ಪ್ರಿವ್ಯೂ, ಪಿಚ್ ರಿಪೋರ್ಟ್, ಸಂಭಾವ್ಯ ತಂಡ, ಹವಾಮಾನ ವರದಿ

ಐಪಿಎಲ್‌ನಲ್ಲಿ ಶನಿವಾರ ಎರಡು ಪಂದ್ಯಗಳು ನಡೆಯಲಿದ್ದು ಮೊದಲ ಹಣಾಹಣಿಯಲ್ಲಿ ಆರ್‌ಸಿಬಿ ತಂಡಕ್ಕೆ ಗುಜರಾತ್ ಟೈಟನ್ಸ್ ತಂಡ ಸವಾಲೊಡ್ಡಲಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ಅದ್ಭುತ ಪ್ರದರ್ಶನದ ಮೂಲಕ ಮಿಂಚುತ್ತಿದ್ದು ಪ್ಲೇಆಫ್ ಹಂತದ ಟಿಕೆಟ್ ಪಡೆಯುವ ಹೊಸ್ತಿಲಲ್ಲಿದೆ. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಳೆದ ಎರಡು ಪಂದ್ಯಗಳಲ್ಲಿ ಹೀನಾಯ ಸೊಲು ಅನುಭವಿಸಿದ್ದು ಭಾರೀ ಹಿನ್ನಡೆ ಅನುಭವಿಸುತ್ತಿದೆ. ಆರ್‌ಸಿಬಿ ತಂಡಕ್ಕೆ ಮುಂದಿನ ಎಲ್ಲಾ ಪಂದ್ಯಗಳು ಕೂಡ ಬಹಳ ಮುಖ್ಯವಾಗಿದೆ.
ಗುಜರಾತ್ ಟೈಟನ್ಸ್ ತಂಡ ಸತತ ಗೆಲುವುಗಳೊಂದಿಗೆ ಮುನ್ನುಗ್ಗುತ್ತಿದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಆಡಿರುವ 8 ಪಂದ್ಯಗಳ ಪೈಕಿ 7ರಲ್ಲಿ ಗೆಲುವು ಸಾಧಿಸಿದ್ದು ಒಂದು ಪಂದ್ಯದಲ್ಲಿ ಮಾತ್ರವೇ ಸೋಲು ಅನುಭವಿಸಿದೆ. ಹೀಗಾಗಿ ಉಳಿದ ಎಲ್ಲಾ ತಂಡಗಳಿಗಿಂತಲೂ ಅಂತರವನ್ನು ಕಾಯ್ದುಕೊಂಡಿದೆ ಜಿಟಿ. ಗುಜರಾತ್ ಟೈಟನ್ಸ್ ಖಾತೆಯಲ್ಲೀಗ 14 ಅಂಕಗಳಿದ್ದು ಸುಸ್ಥಿತಿಯಲ್ಲಿದೆ. ಆದರೆ ಆರ್‌ಸಿಬಿ ಉತ್ತಮ ಪ್ರದರ್ಶನ ನೀಡಿದ ಬಳಿಕ ಭಾರೀ ವೈಫಲ್ಯ ಅನುಭವಿಸುತ್ತಿದ್ದು ಸತತ ಎರಡು ಪಂದ್ಯಗಳಲ್ಲಿ ಹೀನಾಯ ಸೋಲು ಅನುಭವಿಸಿದೆ. ಹೀಗಾಗಿ ಆಡಿರುವ 9 ಪಂದ್ಯಗಳಲ್ಲಿ ಆರ್‌ಸಿಬಿ 5 ಗೆಲುವು ಸಾಧಿಸಿದ್ದರೆ 4 ಸೋಲು ಕಂಡಿದೆ. ಹೀಗಾಗಿ 10 ಅಂಕಗಳು ಮಾತ್ರ ಆರ್‌ಸಿಬಿ ಖಾತೆಯಲ್ಲಿದೆ. ಶನಿವಾರದ ಪಂದ್ಯವೂ ಸೇರಿದಂತೆ ಆರ್‌ಸಿಬಿ ಇನ್ನು 5 ಪಂದ್ಯಗಳನ್ನು ಹೊಂದಿದ್ದು ಇದರಲ್ಲಿ ಕನಿಷ್ಠ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಪ್ಲೇಆಫ್‌ಗೇ ಅವಕಾಶ ದೊರೆಯಲಿದೆ

ಸ್ಕ್ವಾಡ್‌ಗಳು
ಆರ್‌ಸಿಬಿ: ಫಾಫ್ ಡು ಪ್ಲೆಸಿಸ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಜತ್ ಪಾಟಿದಾರ್, ಅನುಜ್ ರಾವತ್, ವಿರಾಟ್ ಕೊಹ್ಲಿ, ಶೆರ್ಫೇನ್ ರುದರ್‌ಫೋರ್ಡ್, ಚಾಮ ವಿ ಮಿಲಿಂದ್, ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಜೋಶ್ ಹೇಜಲ್‌ವುಡ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್
ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಬ್ಮನ್ ಗಿಲ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್, ರಹಮಾನುಲ್ಲಾ ಗುರ್ಬಾಜ್

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ
ಆರ್‌ಸಿಬಿ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 30 ರಂದು ಶನಿವಾರ ನಡೆಯಲಿದ್ದು ಮಧ್ಯಾಹ್ನ 3:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
ಬ್ರೆಬೋರ್ನ್ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಬ್ಯಾಟರ್ ಹಾಗೂ ಬೌಲರ್ ಇಬ್ಬರಿಗೂ ಸಮಾನಾಗಿ ಬೆಂಬಲ ನೀಡುವ ಪಿಚ್ ಆಗಿದೆ. ಪಂದ್ಯ ಮುಂದುವರಿಯುತ್ತಿದ್ದಂತೆ ಇಬ್ಬನಿ ಬೀಳುವ ಕಾರಣ ಎರಡನೇ ಸರದಿಯಲ್ಲಿ ಬೌಲಿಂಗ್ ತಡೆಸುವ ತಂಡಗಳು ಸವಾಲನ್ನು ಎದುರಿಸುತ್ತದೆ. ಈ ಅಂಗಳದಲ್ಲಿಮ ಮೊದಲ ಇನ್ನಿಂಗ್ಸ್‌ನ ಸರಾಸರಿ ಮೊತ್ತ 180 ಆಗಿದೆ

ಸಂಭಾವ್ಯ ಆಡುವ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಸುಯಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹರ್ಷಲ್ ಪಟೇಲ್, ವನಿಂದು ಹಸರಂಗ, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್
ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಯಶ್ ದಯಾಲ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications