ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2022 ಕ್ವಾಲಿಫೈಯರ್ 1: ಗುಜರಾತ್ ಟೈಟನ್ಸ್‌ಗೆ ಬೃಹತ್ ಗುರಿ ನೀಡಿದ ರಾಜಸ್ಥಾನ

IPL 2022: Gujarat Titans need 189 runs to win against Rajasthan Royals

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ಲೀಗ್ ಹಂತದ ಪಂದ್ಯಗಳು ಮುಗಿದಿದ್ದು, ಇಂದಿನಿಂದ (ಮೇ 24, ಮಂಗಳವಾರ) ಪ್ಲೇಆಫ್‌ಗಳು ಆರಂಭವಾಗಿವೆ. ಅಗ್ರ ಕ್ರಮಾಂಕದ ಗುಜರಾತ್ ಟೈಟನ್ಸ್ ತಂಡ ಎರಡನೇ ಸ್ಥಾನದ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಸೆಣಸಾಡುತ್ತಿವೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಹೀಗಾಗಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ಮೊದಲು ಬ್ಯಾಟಿಂಗ್ ಮಾಡಿತು.

IPL 2022 ಕ್ವಾಲಿಫೈಯರ್ 1: GT vs RR ಟಾಸ್ ವರದಿ, ಆಡುವ 11ರ ಬಳಗ

ಅದರಂತೆ ಮೊದಲು ಇನ್ನಿಂಗ್ಸ್ ಆರಂಭಿಸಿದ ರಾಜಸ್ಥಾನ ರಾಯಲ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್‌ ಕಲೆಹಾಕಿ ಎದುರಾಳಿ ಗುಜರಾತ್ ಟೈಟನ್ಸ್ ತಂಡಕ್ಕೆ 189 ರನ್‌ಗಳ ಗುರಿ ನೀಡಿದೆ.

ರಾಜಸ್ಥಾನ ರಾಯಲ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಜೋಸ್ ಬಟ್ಲರ್ ಮತ್ತು ಯಶಸ್ವಿ ಜೈಸ್ವಾಲ್ ಪವರ್ ಪ್ಲೇ ಓವರ್‌ಗಳಲ್ಲಿ ಅಬ್ಬರಿಸಿದರು. ಇದೇ ವೇಳೆ ಯಶಸ್ವಿ ಜೈಸ್ವಾಲ್ 3 ರನ್ ಗಳಿಸಿ ಯಶ್ ದಯಾಳ್‌ಗೆ ವಿಕೆಟ್ ಒಪ್ಪಿಸಿದರು.

IPL 2022: Gujarat Titans need 189 runs to win against Rajasthan Royals

ನಂತರ ಬಂದ ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಗುಜರಾತ್ ಟೈಟನ್ಸ್ ಬೌಲರ್‌ಗಳ ಬೆವರಿಳಿಸಿದರು. 26 ಎಸೆತಗಳಲ್ಲಿ 47 ರನ್ ಗಳಿಸಿ ಸಾಯಿ ಕಿಶೋರ್ ಬೌಲಿಂಗ್‌ನಲ್ಲಿ ಬೌಂಡರಿ ಲೈನ್ ಬಳಿ ಕ್ಯಾಚ್ ನೀಡಿದರು.

ಆರಂಭಿಕ ಜೋಸ್ ಬಟ್ಲರ್ ಜೊತೆಗೂಡಿದ ಕನ್ನಡಿಗ ದೇವದತ್ ಪಡಿಕ್ಕಲ್ 20 ಎಸೆತಗಳಲ್ಲಿ 28 ರನ್ ಬಾಚಿದರು. ಇನ್ನು ಅಬ್ಬರಿಸುವ ಮುನ್ಸೂಚನೆ ನೀಡಿದ್ದ ಪಡಿಕ್ಕಲ್ ಹಾರ್ದಿಕ್ ಪಾಂಡ್ಯ ಬೌಲಿಂಗ್‌ನಲ್ಲಿ ಬೌಲ್ಡ್ ಆದರು.

ತದನಂತರ ಶಿಮ್ರೋನ್ ಹೆಟ್ಮೆಯರ್ ಕ್ರೀಸ್‌ಗೆ ಆಗಮಿಸಿ ಆರಂಭದಲ್ಲಿ ರನ್ ಗಳಿಸಲು ಪರದಾಡುತ್ತಿರುವಾಗಲೇ 4 ರನ್ ಗಳಿಸಿ ಔಟಾದರು. ಆರಂಭಿಕರಾಗಿ ಕಣಕ್ಕಿಳಿದಿದ್ದ ಜೋಸ್ ಬಟ್ಲರ್ 56 ಎಸೆತೆಗಳಲ್ಲಿ 89 ರನ್ ಬಾರಿಸಿ ಅಬ್ಬರಿಸಿ ಕೊನೆಯಲ್ಲಿ ರನೌಟ್ ಆದರು.

ಇನ್ನು ಗುಜರಾತ್ ಟೈಟನ್ಸ್ ಪರ ರಶೀದ್ ಖಾನ್ ಹೊರತುಪಡಿಸಿ ಉಳಿದ ಬೌಲರ್‌ಗಳು ದುಬಾರಿಯಾದರು. ರಶೀದ್ ಖಾನ್ 4 ಓವರ್‌ಗಳಲ್ಲಿ ಕೇವಲ 15 ರನ್ ನೀಡಿದರು. ಇನ್ನುಳಿದಂತೆ ಮೊಹಮ್ಮದ್ ಶಮಿ 4 ಓವರ್‌ಗಳಲ್ಲಿ 43 ನೀಡಿ ಒಂದು ವಿಕೆಟ್ ಪಡೆದರು. ಸಾಯಿ ಕಿಶೋರ್ 4 ಓವರ್‌ಗಳಲ್ಲಿ 43 ನೀಡಿ ಒಂದು ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ ಎರಡು ಓವರ್‌ಗಳಲ್ಲಿ 14 ರನ್ ನೀಡಿ ಒಂದು ವಿಕೆಟ್ ಪಡೆದರು.

Story first published: Tuesday, May 24, 2022, 21:26 [IST]
Other articles published on May 24, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X