
ಇದೇ ಮಾರ್ಚ್ 26ರಿಂದ ಆರಂಭವಾಗಲಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ದಿನಗಣನೆ ಆರಂಭವಾಗಿದ್ದು, ಇತ್ತೀಚಿಗಷ್ಟೆ ಕೆಲ ತಂಡಗಳು ತಮ್ಮ ನೂತನ ಜೆರ್ಸಿಗಳನ್ನು ಬಿಡುಗಡೆ ಮಾಡುವುದರ ಮೂಲಕ ಸದ್ದು ಮಾಡುತ್ತಿವೆ. ಹೌದು, ಕಳೆದ ಶನಿವಾರವಷ್ಟೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬೆಂಗಳೂರಿನ ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಆರ್‌ಸಿಬಿ ಅನ್‌ಬಾಕ್ಸ್ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸುವುದರ ಮೂಲಕ ತನ್ನ ತಂಡದ ನೂತನ ನಾಯಕ ಘೋಷಿಸಿತ್ತು ಹಾಗೂ ತನ್ನ ನೂತನ ಜೆರ್ಸಿಯನ್ನು ಬಿಡುಗಡೆಗೊಳಿಸಿತ್ತು. ಇದಾದ ಬೆನ್ನಲ್ಲೇ ಇದೀಗ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನೂತನ ತಂಡವಾಗಿ ಕಣಕ್ಕಿಳಿಯಲಿರುವ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ತನ್ನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಈ ಜೆರ್ಸಿ ನೀಲಿ ಬಣ್ಣದಿಂದ ಕೂಡಿದ್ದು ತಿಳಿನೀಲಿ ಬಣ್ಣದ ಪಟ್ಟಿಗಳನ್ನೊಂದಿದೆ.
ಇನ್ನು ಗುಜರಾತ್ ಟೈಟಾನ್ಸ್ ತನ್ನ ಜೆರ್ಸಿಯನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ( ಮಾರ್ಚ್ 13 ) ಅನಾವರಣಗೊಳಿಸಿದ್ದು, ಈ ವಿಶೇಷ ಕಾರ್ಯಕ್ರಮದಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಬಿಸಿಸಿಐನ ಕಾರ್ಯದರ್ಶಿ ಜಯ್ ಶಾ ಸೇರಿದಂತೆ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯ ಕೆಲ ಸದಸ್ಯರೂ ಸಹ ಭಾಗವಹಿಸಿದ್ದರು. ಇನ್ನು ಗುಜರಾತ್ ಟೈಟಾನ್ಸ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮತ್ತೊಂದು ನೂತನ ತಂಡವಾದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ತನ್ನ ಮೊದಲ ಪಂದ್ಯದಲ್ಲಿ ಸೆಣಸಾಡಲಿದ್ದು ಈ ಪಂದ್ಯ ಮಾರ್ಚ್ 28ರಂದು ಸಂಜೆ 7:30ಕ್ಕೆ ಆರಂಭವಾಗಲಿದೆ.
ಗುಜರಾತ್ ಟೈಟಾನ್ಸ್ ಲೀಗ್ ಹಂತದ ಸಂಪೂರ್ಣ ಮುಖಾಮುಖಿ ವಿವರ:
28 ಮಾರ್ಚ್ 2022 - 7.30 pm - ಗುಜರಾತ್ ಟೈಟಾನ್ಸ್ vs ಲಕ್ನೋ ಸೂಪರ್ ಜೈಂಟ್ಸ್
2 ಏಪ್ರಿಲ್ 2022 - 7.30 pm - ಗುಜರಾತ್ ಟೈಟಾನ್ಸ್ vs ಡೆಲ್ಲಿ ಕ್ಯಾಪಿಟಲ್ಸ್
8 ಏಪ್ರಿಲ್ 2022 -7.30 pm - ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್
11 ಏಪ್ರಿಲ್ 2022 - 7.30 pm- 7.30 pm- ಸನ್ ರೈಸರ್ಸ್ ಹೈದರಾಬಾದ್ vs ಗುಜರಾತ್ ಟೈಟಾನ್ಸ್
14 ಏಪ್ರಿಲ್ 2022- 7.30 pm- ರಾಜಸ್ಥಾನ ರಾಯಲ್ಸ್ vs ಗುಜರಾತ್ ಟೈಟಾನ್ಸ್
17 ಏಪ್ರಿಲ್ 2022- 7.30 pm- ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್
23 ಏಪ್ರಿಲ್ 2022- 3.30 pm- ಕೋಲ್ಕತಾ ನೈಟ್ ರೈಡರ್ಸ್ vs ಗುಜರಾತ್ ಟೈಟಾನ್ಸ್
27 ಏಪ್ರಿಲ್ 2022- 7.30 pm- ಗುಜರಾತ್ ಟೈಟಾನ್ಸ್ vs ಸನ್ ರೈಸರ್ಸ್ ಹೈದರಾಬಾದ್
30 ಏಪ್ರಿಲ್ 2022- 3.30 pm- ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
3 ಮೇ 2022- 7.30 pm- ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್
6 ಮೇ 2022- 7.30 pm- ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್
10 ಮೇ 2022- 7.30- ಲಕ್ನೋ ಸೂಪರ್ ಜೈಂಟ್ಸ್ vs ಗುಜರಾತ್ ಟೈಟಾನ್ಸ್
15 ಮೇ 2022- ಮಧ್ಯಾಹ್ನ 3.30- ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್
19 ಮೇ 2022- 7.30pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್
ಗುಜರಾತ್ ಟೈಟಾನ್ಸ್ ಸ್ಕ್ವಾಡ್:
ಹಾರ್ದಿಕ್ ಪಾಂಡ್ಯ, ರಶೀದ್ ಖಾನ್, ಶುಭಮನ್ ಗಿಲ್, ಮೊಹಮ್ಮದ್ ಶಮಿ, ರಹಮಾನುಲ್ಲಾ ಗುರ್ಬಾಜ್, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಸಾಯಿ ಕಿಶೋರ್, ವಿಜಯ್ ಶಂಕರ್, ಜಯಂತ್ ಯಾದವ್, ಡೊಮಿನಿಕ್ ಡ್ರೇಕ್ಸ್, ದರ್ಶನ್ ನಲ್ಕಂಡೆ, ಪ್ರದೀಪ್ ನಲ್ಕಂಡೆ, ಯಶ್ವಾನ್ ದಯಾಳ್ , ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್.