ಐಪಿಎಲ್ 2022: ಗುಜರಾತ್ ಟೈಟನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಬೆಂಬಲಕ್ಕೆ ಸ್ವಾನ್, ಹೇಡನ್

ಈ ಬಾರಿಯ ಐಪಿಎಲ್‌ನಲ್ಲಿ ಮೊದಲ ಬಾರಿಗೆ ಕಣಕ್ಕಿಳಿದಿರುವ ಗುಜರಾತ್ ಟೈಟನ್ಸ್ ತಂಡ ಮೊದಲ ಮೂರು ಪಂದ್ಯಗಳಲ್ಲಿ ಗೆದ್ದು ಎಲ್ಲರ ಗಮನಸೆಳೆಯುವಲ್ಲಿ ಯಶಸ್ವಿಯಾಗಿತ್ತು. ತಂಡದ ನಾಯಕತ್ವ ವಹಿಸಿಕೊಳ್ಳುವ ಮೂಲಕ ಹಾರ್ದಿಕ್ ಪಾಂಡ್ಯ ಮೊಟ್ಟ ಮೊದಲ ಬಾರಿಗೆ ತಂಡವನ್ನು ಮುನ್ನಡೆಸುತ್ತಿದ್ದಾರೆ. ಮೊದಲ ಮೂರು ಪಂದ್ಯಗಳ ಗೆಲುವಿನಿಂದಾಗಿ ನಾಯಕತ್ವದಲ್ಲಿಯೂ ಗಮನ ಸೆಳೆದಿದ್ದ ಹಾರ್ದಿಕ್ ಪಾಂಡ್ಯ ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ತಾಳ್ಮೆ ಕಳೆದುಕೊಂಡು ಭಾರೀ ಟೀಕೆಗೆ ಗುರಿಯಾಗಿದ್ದರು.
ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಗುಜರಾತ್ ಟೈಟನ್ಸ್ ತಂಡ ಮೊದಲ ಸೋಲಿನ ರುಚಿನ ಅನುಭವಿಸಿತ್ತು. ಈ ಪಂದ್ಯದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಮೈದಾನದಲ್ಲಿ ತಾಳ್ಮೆ ಕಳೆದುಕೊಂಡ ಸಂದರ್ಭಗಳು ನಡೆದಿತ್ತು. ಅದರಲ್ಲೂ ಹಿರಿಯ ಆಟಗಾರ ಮೊಹಮ್ಮದ್ ಶಮಿ ಕ್ಯಾಚ್ ಹಿಡಿಯುವ ಅವಕಾಶವನ್ನು ಉಪಯೋಗಿಸಿಕೊಳ್ಳದಿದ್ದಾಗ ಹಾರ್ದಿಕ್ ಪಾಂಡ್ಯ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟು ಮಾತ್ರವಲ್ಲದೆ ನಿಂದನಾತ್ಮಕ ಪದವನ್ನು ಕೂಡ ಉಪಯೋಗಿಸಿದ್ದು ಕ್ಯಾಮರಾದಲ್ಲಿ ಕೂಡ ಸೆರೆಯಾಗಿತ್ತು.
ಹಾರ್ದಿಕ್ ಪಾಂಡ್ಯ ಅವರ ಈ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳನ್ನು ಕ್ರಿಕೆಟ್ ಅಭಿಮಾನಿಗಳು ಈ ವರ್ತನೆಗೆ ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದ್ದರು. ಆದರೆ ಈಗ ಕೆಲ ಮಾಜಿ ಕ್ರಿಕೆಟಿಗರು ಹಾರ್ದಿಕ್ ಪಾಂಡ್ಯಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್, ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಗ್ರೇಮ್ ಸ್ವಾನ್ ಅವರಿಂದ ಹಾರ್ದಿಕ್ ಪಾಂಡ್ಯಗೆ ಬೆಂಬಲ ದೊರೆತಿದೆ.
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟನ್ಸ್ ತಂಡ 163 ರನ್‌ಗಳ ಸವಾಲಿನ ಗುರಿಯನ್ನು ಎಸ್‌ಆರ್‌ಹೆಚ್ ತಂಡದ ಮುಂದಿಟ್ಟಿತ್ತು. ಇದನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹಯದರಾಬಾದ್ ತಂಡಕ್ಕೆ ಉತ್ತಮ ಆರಂಭ ದೊರೆತಿತ್ತು. ಮೊದಲ ವಿಕೆಟ್‌ಗೆ 64 ರನ್‌ಗಳ ಕೊಡುಗೆ ಬಂದಿತ್ತು. ಎಸ್‌ಆರ್‌ಹೆಚ್ ನಾಯಕ ಕೇನ್ ವಿಲಿಯಮ್ಸನ್ ಈ ಪಂದ್ಯದಲ್ಲಿ ಫಾರ್ಮ್‌ಗೆ ಮರಳಿದ್ದರು. 13ನೇ ಓವರ್‌ನಲ್ಲಿ 1 ವಿಕೆಟ್ ಕಳೆದುಕೊಂಡು 97 ರನ್‌ಗಳಿಸುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ಸುಲಭ ಗೆಲುವು ಸಾಧಿಸುವ ಹಾದಿಯಲ್ಲಿತ್ತು.

ವಿಕೆಟ್ ಪಡೆಯಲು ಸಾಧ್ಯವಾಗದ ಕಾರಣ ಜಿಟಿ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೇಸತ್ತು ಹೋಗಿದ್ದರು. ಆದರೆ ಈ ಹಂತದಲ್ಲಿ ವಿಕೆಟ್ ಪಡೆಯುವ ಉತ್ತಮ ಅವಕಾಶವನ್ನು ಹಾರ್ದಿಕ್ ಪಾಂಡ್ಯ ಸೃಷ್ಟಿಸಿದ್ದರು. ಎಸ್‌ಆರ್‌ಹೆಚ್ ದಾಂಡಿಗ ರಾಹುಲ್ ತ್ರಿಪಾಠಿಗೆ ಪುಲ್‌ಟಾಸ್ ಎಸೆತವನ್ನು ಎಸೆದಿದ್ದರು ಪಾಂಡ್ಯ. ಈ ಎಸೆತವನ್ನು ತ್ರಿಪಾಠಿ ಅಪ್ಪರ್ ಕಟ್ ಮಾಡಿದ್ದರು. ಇದು ಥರ್ಡ್‌ಮ್ಯಾನ್ ಸ್ಥಾನದಲ್ಲಿದ್ದ ಶಮಿ ಬಳಿಗೆ ಹಾರಿತ್ತು. ಆದರೆ ಈ ಚೆಂಡನ್ನು ಹಿಡಿಯುವಲ್ಲಿ ಶಮಿ ವಿಫಲವಾದರು.
ಹೀಗಾಗಿ ಗುಜರಾತ್ ಟೈಟನ್ಸ್ ತಂಡ ವಿಕೆಟ್ ಪಡೆಯುವ ಉತ್ತಮ ಅವಕಾಶವನ್ನು ಕಳೆದುಕೊಂಡಿತ್ತು. ಈ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತಮ್ಮ ತಾಳ್ಮೆಯನ್ನು ಕಳೆದುಕೊಂಡಿದ್ದರು. ಕ್ಯಾಚ್ ಪಡೆಯದ ಶಮಿ ವಿರುದ್ಧ ರೇಗಾಡಿದ ನಾಯಕ ಹಾರ್ದಿಕ್ ಪಾಂಡ್ಯ ನಿಂದನೆಯನ್ನೂ ಮಾಡಿದ್ದರು. ಇದು ಕ್ಯಾಮರಾದಲ್ಲಿಯೂ ಸ್ಪಷ್ಟವಾಗಿ ದಾಖಲಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications