SRH vs GT: ಗುಜರಾತ್ ಪರ ಅಬ್ಬರಿಸಿದ ಕನ್ನಡಿಗ ಅಭಿನವ್, ಪಾಂಡ್ಯ 50; ಹೈದರಾಬಾದ್‌ಗೆ ಗೆಲ್ಲಲು 163 ರನ್ ಗುರಿ

ಸದ್ಯ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 21ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಟವನ್ನು ನಡೆಸುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಗುಜರಾತ್ ಟೈಟನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 162 ರನ್ ಕಲೆಹಾಕಿದ್ದು ಎದುರಾಳಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಗೆಲ್ಲಲು 163 ರನ್‌ಗಳ ಪೈಪೋಟಿಯುತ ಗುರಿಯನ್ನು ನೀಡಿದೆ.
IPL 2022: ಧೋನಿ, ಜಡೇಜಾ ಅಲ್ಲ, ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ ಸೋಲುತ್ತಿರುವುದು ಈತನಿಂದ!
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಮ್ಯಾಥ್ಯೂ ವೇಡ್ ಮತ್ತು ಶುಬ್ ಮನ್ ಗಿಲ್ ಉತ್ತಮ ಆರಂಭ ಕಟ್ಟಿ ಕೊಡುವಲ್ಲಿ ವಿಫಲರಾದರು. ಮ್ಯಾಥ್ಯೂ ವೇಡ್ 19 ರನ್ ಕಲೆಹಾಕಿದರೆ, ಶುಬ್ ಮನ್ ಗಿಲ್ 7 ರನ್ ಗಳಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ 11 ರನ್, ಡೇವಿಡ್ ಮಿಲ್ಲರ್ 12 ರನ್, ಅಭಿನವ್ ಮನೋಹರ್ 35 ರನ್, ರಾಹುಲ್ ತೆವಾಟಿಯಾ 6 ಮತ್ತು ರಶೀದ್ ಖಾನ್ ಶೂನ್ಯ ರನ್ ಕಲೆಹಾಕಿದರೆ, ಹಾರ್ದಿಕ್ ಪಾಂಡ್ಯ ಅರ್ಧಶತಕ ಗಳಿಸುವುದರ ಮೂಲಕ ನಾಯಕನ ಜವಾಬ್ದಾರಿಯುತ ಆಟವನ್ನು ಆಡಿದರು.
42 ಎಸೆತಗಳನ್ನು ಎದುರಿಸಿ 50 ರನ್ ಬಾರಿಸಿ ಅಜೇಯರಾಗಿ ಉಳಿದ ಹಾರ್ದಿಕ್ ಪಾಂಡ್ಯ 4 ಬೌಂಡರಿ ಮತ್ತು 1 ಸಿಕ್ಸರ್ ಸಿಡಿಸಿದ್ದಾರೆ. ಇನ್ನು ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕನ್ನಡಿಗ ಅಭಿನವ್ ಮನೋಹರ್ 21 ಎಸೆತಗಳಲ್ಲಿ 35 ರನ್ ಕಲೆ ಹಾಕುವುದರ ಮೂಲಕ ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆದಿದ್ದಾರೆ. ಅಭಿನವ್ ಮನೋಹರ್ 5 ಬೌಂಡರಿ ಮತ್ತು 1 ಸಿಕ್ಸರ್ ಸಿಡಿಸಿದ್ದಾರೆ.
ಇನ್ನು ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಭುವನೇಶ್ವರ್ ಕುಮಾರ್ ಮತ್ತು ಟಿ ನಟರಾಜನ್ ತಲಾ 2 ವಿಕೆಟ್ ಕಬಳಿಸಿದರೆ, ಮಾರ್ಕೊ ಜನ್ಸೆನ್ ಮತ್ತು ಉಮ್ರಾನ್ ಮಲಿಕ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications