ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2022: ಗಾಯಕ್ಕೊಳಗಾದ ಹರ್ಷಲ್ ಲಕ್ನೋ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಆಡ್ತಾರಾ, ಇಲ್ವಾ?

IPL 2022: Harshal Patel is fit and likely to participate in the eliminator match agians LSG

ಸದ್ಯ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳಿಗೆ ಕಳೆದ ಭಾನುವಾರ ನಡೆದ ಸನ್ ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ಮೂಲಕ ತೆರೆಬಿದ್ದಿದ್ದು, ಇಂದಿನಿಂದ ( ಮೇ 24 ) ಪ್ಲೇಆಫ್ ಸುತ್ತು ಆರಂಭಗೊಳ್ಳುತ್ತಿದೆ. ಇನ್ನು ಈ ಬಾರಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್, ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಮತ್ತು ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಪ್ಲೇಆಫ್ ಸುತ್ತಿಗೆ ಲಗ್ಗೆ ಇಟ್ಟಿವೆ.

IPL 2022: ತಂಡಗಳ ಪರ ಅತಿಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿ ಔಟ್; ಆರ್‌ಸಿಬಿ ಪರ ಯಾರು?IPL 2022: ತಂಡಗಳ ಪರ ಅತಿಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿ ಔಟ್; ಆರ್‌ಸಿಬಿ ಪರ ಯಾರು?

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿಯೂ ಯಶಸ್ವಿಯಾಗಿ ಪ್ಲೇಆಫ್ ಪ್ರವೇಶಿಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಇದು ಎಂಟನೇ ಬಾರಿಗೆ ಪ್ಲೇಆಫ್ ಸುತ್ತಿಗೆ ಲಗ್ಗೆ ಇಟ್ಟಿದ್ದು, ಟ್ರೋಫಿ ಎತ್ತಿಹಿಡಿಯುವತ್ತ ಚಿತ್ತ ನೆಟ್ಟಿದೆ. ಲೀಗ್ ಹಂತದಲ್ಲಿ ಅಂತಿಮವಾಗಿ ಪ್ಲೇಆಫ್ ಪ್ರವೇಶಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು. ಆದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುಂಬೈ ಇಂಡಿಯನ್ಸ್ ಸೋಲಿಸಿದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಪ್ರವೇಶ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

GT vs RR ಕ್ವಾಲಿಫೈಯರ್ 1: ಪಂದ್ಯದಲ್ಲಿ ಗೆಲ್ಲಲು ನಿಮ್ಮ ಡ್ರೀಮ್ ಟೀಮ್ ಹೀಗಿರಲಿ; ಈತನಿಗೆ ನಾಯಕತ್ವ ನೀಡಿGT vs RR ಕ್ವಾಲಿಫೈಯರ್ 1: ಪಂದ್ಯದಲ್ಲಿ ಗೆಲ್ಲಲು ನಿಮ್ಮ ಡ್ರೀಮ್ ಟೀಮ್ ಹೀಗಿರಲಿ; ಈತನಿಗೆ ನಾಯಕತ್ವ ನೀಡಿ

ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಬುಧವಾರ ಕಣಕ್ಕಿಳಿಯಲಿದೆ. ಇನ್ನು ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕ್ವಾಲಿಫೈಯರ್ 2 ಪಂದ್ಯಕ್ಕೆ ಅರ್ಹತೆ ಪಡೆದುಕೊಳ್ಳಲಿದ್ದು, ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಉತ್ತಮ ಆಟಗಾರರೊಂದಿಗೆ ಕಣಕ್ಕಿಳಿಯಬೇಕಾದ ಅಗತ್ಯತೆಯಿದೆ. ಆದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಬೌಲರ್ ಹರ್ಷಲ್ ಪಟೇಲ್ ಕಳೆದ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ತಮ್ಮ ಬಲಗೈಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಹರ್ಷಲ್ ಪಟೇಲ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯುತ್ತಾರಾ ಅಥವಾ ಇಲ್ಲವಾ ಎಂಬ ಆತಂಕ ಮತ್ತು ಪ್ರಶ್ನೆ ಆರ್‌ಸಿಬಿ ಅಭಿಮಾನಿಗಳಲ್ಲಿ ಎದುರಾಗಿತ್ತು. ಈ ಪ್ರಶ್ನೆ ಕುರಿತಾದ ಉತ್ತರ ಈ ಕೆಳಕಂಡಂತಿದೆ..

ಚೇತರಿಸಿಕೊಂಡ ಹರ್ಷಲ್

ಚೇತರಿಸಿಕೊಂಡ ಹರ್ಷಲ್

ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಚಿತ್ತ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯವನ್ನು ಗೆಲ್ಲುವತ್ತ ಇದೆ. ಹೀಗಾಗಿ ಈಗಾಗಲೇ ಮೈದಾನಕ್ಕಿಳಿದು ಅಭ್ಯಾಸವನ್ನು ಆರಂಭಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆವರಿಳಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಹರ್ಷಲ್ ಪಟೇಲ್ ಕೂಡ ಕಣಕ್ಕಿಳಿದಿರುವುದು ಆರ್‌ಸಿಬಿಇ ಅಭಿಮಾನಿಗಳ ಪಾಲಿಗೆ ನೆಮ್ಮದಿಯ ಸುದ್ದಿಯಾಗಿದೆ. ಹೌದು, ಇತ್ತೀಚೆಗಷ್ಟೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ತಂಡದ ಆಟಗಾರರು ಅಭ್ಯಾಸ ನಡೆಸುತ್ತಿರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿತ್ತು. ಇದರಲ್ಲಿ ಹರ್ಷಲ್ ಪಟೇಲ್ ಕೂಡ ಕಾಣಿಸಿಕೊಂಡಿದ್ದು, ಫುಲ್ ಫಿಟ್ ಆಗಿ ಕಣಕ್ಕಿಳಿದಿದ್ದಾರೆ. ಹೀಗಾಗಿ ಹರ್ಷಲ್ ಪಟೇಲ್ ಕಣಕ್ಕಿಳಿಯುವುದು ಖಚಿತ ಎಂದೇ ಹೇಳಬಹುದು.

ಹರ್ಷಲ್ ಕೈಗೆ ಒಲಿಗೆ ಹಾಕಲಾಗಿತ್ತು

ಹರ್ಷಲ್ ಕೈಗೆ ಒಲಿಗೆ ಹಾಕಲಾಗಿತ್ತು

ಇನ್ನು ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಕ್ಯಾಚ್ ಹಿಡಿಯಲು ಪ್ರಯತ್ನಿಸಿದ್ದ ಹರ್ಷಲ್ ಪಟೇಲ್ ಬಲಗೈಗೆ ಚೆಂಡು ಜೋರಾಗಿ ಬಡಿದಿದ್ದ ಕಾರಣ ತೀವ್ರ ಗಾಯ ಉಂಟಾಗಿತ್ತು. ಪಂದ್ಯ ಮುಕ್ತಾಯವಾದ ನಂತರ ಸ್ವತಃ ಮಾತನಾಡಿದ್ದ ಹರ್ಷಲ್ ಪಟೇಲ್ ಕೈಗೆ ಹೊಲಿಗೆ ಹಾಕಿದ್ದಾರೆ ಆದಷ್ಟು ಬೇಗ ಚೇತರಿಸಕೊಳ್ಳಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

IPL ಪ್ಲೇಆಫ್ ಇತಿಹಾಸ ನೋಡಿದ್ರೆ RCB ಈ ಸಲ ಕಪ್‌ ಗೆಲ್ಲೋದು ಡೌಟೇ!!! | #cricket | #IPL2022 | Oneindia Kannda
ಟೂರ್ನಿಯಲ್ಲಿ ಹರ್ಷಲ್ ಪಟೇಲ್ ಪ್ರದರ್ಶನ

ಟೂರ್ನಿಯಲ್ಲಿ ಹರ್ಷಲ್ ಪಟೇಲ್ ಪ್ರದರ್ಶನ

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಒಟ್ಟು 13 ಪಂದ್ಯಗಳನ್ನಾಡಿರುವ ಹರ್ಷಲ್ ಪಟೇಲ್ 18 ವಿಕೆಟ್‌ಗಳನ್ನು ಕಲೆಹಾಕಿದ್ದಾರೆ. ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ 15 ಪಂದ್ಯಗಳನ್ನಾಡಿ 32 ವಿಕೆಟ್ ಕಬಳಿಸಿ ಸಾರ್ವಕಾಲಿಕ ದಾಖಲೆ ಬರೆದಿದ್ದ ಹರ್ಷಲ್ ಪಟೇಲ್ ಈ ಬಾರಿಯ ಸಹೋದರಿಯ ನಿಧನದಿಂದ ಮಾನಸಿಕ ಒತ್ತಡಕ್ಕೆ ಸಿಲುಕಿದ್ದಾರೆ.

Story first published: Tuesday, May 24, 2022, 19:12 [IST]
Other articles published on May 24, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X