ಧೋನಿ ನಾಯಕತ್ವದಲ್ಲಿ ಕಮ್‌ಬ್ಯಾಕ್ ಮಾಡಿರುವ ಸಿಎಸ್‌ಕೆಗೆ ಪ್ಲೇಆಫ್ ಪ್ರವೇಶಿಸಲು ಇರುವುದು ಇದೊಂದೇ ಮಾರ್ಗ!

ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಸಾಲು ಸಾಲು ಕಳಪೆ ಪ್ರದರ್ಶನ ನೀಡುವುದರ ಮೂಲಕ ಹಿನ್ನಡೆ ಅನುಭವಿಸಿದೆ. ಹೌದು, ಕಳೆದ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಗೆದ್ದು ನಾಲ್ಕನೇ ಬಾರಿಗೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ನೆಲಕಚ್ಚಿದೆ. ಇನ್ನು ಈ ಬಾರಿಯ ಟೂರ್ನಿ ಆರಂಭವಾಗಲು ಇನ್ನೂ ಎರಡು ದಿನಗಳು ಬಾಕಿ ಇರುವಾಗ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ತಂಡದ ಸಹ ಆಟಗಾರ ರವೀಂದ್ರ ಜಡೇಜಾಗೆ ಹಸ್ತಾಂತಿಸಿದ್ದರು.
ಹೀಗೆ ಎಂಎಸ್ ಧೋನಿ ನಾಯಕತ್ವವಿಲ್ಲದೇ ರವೀಂದ್ರ ಜಡೇಜಾ ನಾಯಕತ್ವದಲ್ಲಿ ಈ ಬಾರಿ ಕಣಕ್ಕಿಳಿದ ಚೆನ್ನೈ ಸೂಪರ್ ಕಿಂಗ್ಸ್ ಮೊದಲ ನಾಲ್ಕು ಪಂದ್ಯಗಳಲ್ಲಿ ಸೋತು ನಂತರದ 2 ಪಂದ್ಯಗಳಲ್ಲಿ ಜಯ ಸಾಧಿಸಿತು. ರವೀಂದ್ರ ಜಡೇಜಾ ನಾಯಕತ್ವದಲ್ಲಿ ಒಟ್ಟು 8 ಪಂದ್ಯಗಳನ್ನಾಡಿದ ಚೆನ್ನೈ ಸೂಪರ್ ಕಿಂಗ್ಸ್ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಗೆದ್ದು ಉಳಿದ ಎಲ್ಲಾ ಪಂದ್ಯಗಳಲ್ಲಿಯೂ ಸೋತಿತ್ತು. ಹೀಗೆ ಸಾಲು ಸಾಲು ಪಂದ್ಯಗಳಲ್ಲಿ ಸೋಲು ಕಂಡ ರವೀಂದ್ರ ಜಡೇಜಾ ಟೂರ್ನಿ ಮಧ್ಯೆಯೇ ನಾಯಕತ್ವವನ್ನು ಮತ್ತೆ ಎಂಎಸ್ ಧೋನಿಗೆ ಹಸ್ತಾಂತರಿಸಿದ್ದು, ತನ್ನ ವೈಯಕ್ತಿಕ ಆಟದತ್ತ ಹೆಚ್ಚು ಗಮನ ಹರಿಸುವ ಸಲುವಾಗಿ ಈ ನಿರ್ಧಾರ ಕೈಗೊಂಡರು ಎನ್ನಲಾಗಿದೆ.
ಅದರಂತೆ ಮರಳಿ ನಾಯಕತ್ವ ವಹಿಸಿಕೊಂಡ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮೊದಲ ಪಂದ್ಯದಲ್ಲಿಯೇ ಗೆಲುವು ತಂದಿಟ್ಟಿದ್ದಾರೆ. ಹೌದು, ನಿನ್ನೆ ( ಮೇ 1 ) ನಡೆದ ಪಂದ್ಯದಲ್ಲಿ ಈ ಬಾರಿ ಎಂಎಸ್ ಧೋನಿ ನಾಯಕತ್ವದಲ್ಲಿ ಪ್ರಥಮ ಬಾರಿಗೆ ಕಣಕ್ಕಿಳಿದ ಚೆನ್ನೈ ಸೂಪರ್ ಕಿಂಗ್ಸ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 13 ರನ್‌ಗಳ ಜಯ ಸಾಧಿಸಿ ಟೂರ್ನಿಯಲ್ಲಿ ಮೂರನೇ ಗೆಲುವನ್ನು ಕಂಡಿದೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿಯ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 9 ಪಂದ್ಯಗಳನ್ನಾಡಿದ್ದು, 3 ಪಂದ್ಯಗಳಲ್ಲಿ ಗೆದ್ದು ಉಳಿದ 6 ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಹೀಗೆ ಎಂಎಸ್ ಧೋನಿ ನಾಯಕತ್ವ ವಹಿಸಿಕೊಂಡ ನಂತರದ ಮೊದಲ ಪಂದ್ಯದಲ್ಲೇ ಗೆಲುವನ್ನು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ ಆಫ್ ಪ್ರವೇಶಿಸಲು ಉಳಿದ ಪಂದ್ಯಗಳಲ್ಲಿ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಉಳಿದ ಪಂದ್ಯಗಳಲ್ಕಿ ಎಷ್ಟು ಗೆಲುವು ಬೇಕು?
ಮೊದಲೇ ತಿಳಿಸಿದಂತೆ 9 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 6 ಅಂಕಗಳನ್ನು ಪಡೆದುಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ಇನ್ನೂ 5 ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದು, ಈ ಪಂದ್ಯಗಳ ಪೈಕಿ ಎಲ್ಲಾ ಪಂದ್ಯಗಳಲ್ಲಿಯೂ ಗೆಲ್ಲಲೇಬೇಕಿದೆ. ಹೌದು, ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ತಂಡವೊಂದು ಪ್ಲೇ ಆಫ್ ಪ್ರವೇಶಿಸಲು 16 ಅಂಕಗಳನ್ನು ಗಳಿಸಬೇಕಾಗಿದ್ದು, ಸದ್ಯ 6 ಅಂಕಗಳನ್ನು ಪಡೆದುಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ 16 ಅಂಕಗಳನ್ನು ಪಡೆದುಕೊಳ್ಳಬೇಕೆಂದರೆ ಉಳಿದ 5 ಪಂದ್ಯಗಳಲ್ಲಿಯೂ ಗೆಲ್ಲಲೇಬೇಕು.

ಎಲ್ಲಾ ಪಂದ್ಯಗಳನ್ನು ಗೆದ್ದರೂ ಇದೆ ಅಡೆತಡೆ
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಉಳಿದ ಎಲ್ಲಾ ಪಂದ್ಯಗಳಲ್ಲಿ ಗೆದ್ದು 16 ಅಂಕಗಳನ್ನು ಪಡೆದುಕೊಂಡರೂ ಪ್ಲೇ ಆಫ್ ಪ್ರವೇಶಿಸುವುದು ಅನುಮಾನ ಎನ್ನಬಹುದು. ಹೌದು, ಈ ಬಾರಿ ಪ್ಲೇ ಆಫ್ ಪ್ರವೇಶಿಸಲು ಪೈಪೋಟಿ ಹೆಚ್ಚಾಗಿದ್ದು, ತಂಡವೊಂದು 16 ಅಂಕಗಳನ್ನು ಗಳಿಸಿಯೂ ನೆಟ್ ರನ್ ರೇಟ್ ಅಭಾವದಿಂದ ಪ್ಲೇಆಫ್ ಕೈತಪ್ಪಿಸಿಕೊಳ್ಳುವ ಸಾಧ್ಯತೆಗಳಿವೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಕೇವಲ ಗೆಲುವು ಸಾಧಿಸುವುದಕ್ಕಿಂತ ಬೃಹತ್ ಅಂತರದ ಗೆಲುವು ಸಾಧಿಸಿ ಸದ್ಯ ಮೈನಸ್‌ನಲ್ಲಿರುವ ನೆಟ್ ರನ್ ರೇಟ್‌ನ್ನು ಜಾಸ್ತಿ ಮಾಡಿಕೊಳ್ಳಬೇಕಾದ ಅಗತ್ಯವಿದೆ. ಆದ್ದರಿಂದ ಚೆನ್ನೈ ಸೂಪರ್ ಕಿಂಗ್ಸ್ ಟಾಪ್ 4 ಸ್ಥಾನಕ್ಕೆ ಪೈಪೋಟಿ ನೀಡುವ ತಂಡಗಳಿಗಿಂತ ಹೆಚ್ಷಿನ ನೆಟ್ ರನ್ ರೇಟ್ ಹೊಂದಬೇಕಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಯಶಸ್ವಿಯಾಗಿ ಪ್ಲೇಆಫ್ ಪ್ರವೇಶಿಸಲು ಉಳಿದಿರುವ ಒಂದೇ ಒಂದು ಮಾರ್ಗವೆಂದರೆ ಉಳಿದ 5 ಪಂದ್ಯಗಳಲ್ಲಿಯೂ ಬೃಹತ್ ಅಂತರದ ಜಯ ಸಾಧಿಸಿ ಹೆಚ್ಚಿನ ನೆಟ್ ರನ್ ರೇಟ್‌ನ್ನು ಹೊಂದಬೇಕಿದೆ.

ಸಿಎಸ್‌ಕೆ ಮುಂದಿನ ಪಂದ್ಯಗಳು
ಚೆನ್ನೈ ಸೂಪರ್ ಕಿಂಗ್ಸ್ ಮುಂದಿನ ಪಂದ್ಯಗಳ ವಿವರ ಈ ಕೆಳಕಂಡಂತಿದೆ.
* ಮೇ 4: ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
* ಮೇ 8: ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್
* ಮೇ 12: ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್
* ಮೇ 15: ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟನ್ಸ್
* ಮೇ 20: ಚೆನ್ನೈ ಸೂಪರ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications