Hardik Pandya : ಗುಜರಾತ್ ನಾಯಕ ರಶೀದ್ ಖಾನ್; ಚೆನ್ನೈ ವಿರುದ್ಧ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯದಿರಲು ಕಾರಣವೇನು?

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನೂತನ ತಂಡಗಳಾಗಿ ಕಣಕ್ಕಿಳಿದಿರುವ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಸಾಲು ಸಾಲು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಜಯ ಸಾಧಿಸಿ ಒಳ್ಳೆಯ ಆರಂಭವನ್ನು ಪಡೆದುಕೊಂಡಿವೆ.
ಅದರಲ್ಲಿಯೂ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಟೂರ್ನಿಯಲ್ಲಿನ ತನ್ನ ಮೊದಲ 5 ಪಂದ್ಯಗಳ ಪೈಕಿ 4 ಪಂದ್ಯಗಳಲ್ಲಿ ಗೆದ್ದು, 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಸದ್ಯ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ. ಈ ಮೂಲಕ ಹಾರ್ದಿಕ್ ಪಾಂಡ್ಯ ತಾನು ಗುಜರಾತ್ ಟೈಟನ್ಸ್ ತಂಡದ ನಾಯಕನಾಗಿ ಆಯ್ಕೆಯಾದ ಸಂದರ್ಭದಲ್ಲಿ ತನ್ನ ವಿರುದ್ಧ ಟೀಕೆಗಳನ್ನು ಮಾಡಿದ್ದವರಿಗೆ ಹಾಗೂ ತನ್ನನ್ನು ಅನುಮಾನಿಸಿದವರಿಗೆ ಇದೀಗ ಸಾಲು ಸಾಲು ಪಂದ್ಯಗಳಲ್ಲಿ ನಾಯಕತ್ವವನ್ನು ಯಶಸ್ವಿಯಾಗಿ ನಿರ್ವಹಿಸುವುದರ ಮೂಲಕ ತಿರುಗೇಟು ನೀಡಿದ್ದಾರೆ.
ಅಷ್ಟೇ ಅಲ್ಲದೇ ಬ್ಯಾಟಿಂಗ್ ಜತೆಗೆ ಬೌಲಿಂಗ್ ಕೂಡಾ ಮಾಡಿ ಮಿಂಚಿರುವ ಹಾರ್ದಿಕ್ ಪಾಂಡ್ಯ ತನ್ನ ಬೌಲಿಂಗ್ ಸಾಮರ್ಥ್ಯವನ್ನು ಅನುಮಾನಿಸಿದ್ದವರಿಗೆ ಕೂಡ ಉತ್ತರವನ್ನು ನೀಡಿದ್ದಾರೆ. ಹೀಗೆ ಟೂರ್ನಿಯಲ್ಲಿ ಓರ್ವ ಆಟಗಾರನಾಗಿ ಹಾಗೂ ನಾಯಕನಾಗಿಯೂ ಯಶಸ್ವಿಯಾಗಿದ್ದ ಹಾರ್ದಿಕ್ ಪಾಂಡ್ಯ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯದೇ ಆಶ್ಚರ್ಯವನ್ನು ಮೂಡಿಸಿದ್ದಾರೆ. ಹಾಗೂ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ತಂಡದ ಪ್ರಮುಖ ಆಟಗಾರ ರಶೀದ್ ಖಾನ್ ತಂಡದ ನಾಯಕತ್ವವನ್ನು ನಿರ್ವಹಿಸಿದ್ದಾರೆ. ಹೀಗೆ ಹಾರ್ದಿಕ್ ಪಾಂಡ್ಯ ಅಲಭ್ಯರಾಗಿ ರಶೀದ್ ಖಾನ್ ಗುಜರಾತ್ ಟೈಟನ್ಸ್ ನಾಯಕತ್ವವನ್ನು ವಹಿಸಲು ಕಾರಣವೇನು ಎಂಬುದರ ಕುರಿತಾದ ವಿವರ ಈ ಕೆಳಕಂಡಂತಿದೆ.

ವಿಶ್ರಾಂತಿ ಪಡೆಯುತ್ತಿರುವ ಹಾರ್ದಿಕ್ ಪಾಂಡ್ಯ
ಇನ್ನು ಹಾರ್ದಿಕ್ ಪಾಂಡ್ಯಾ ಬದಲಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ನಾಯಕನಾಗಿ ಕಣಕ್ಕಿಳಿದ ರಶೀದ್ ಖಾನ್ ಟಾಸ್ ವೇಳೆ ಮಾತನಾಡಿ ಹಾರ್ದಿಕ್ ಪಾಂಡ್ಯ ತೊಡೆಸಂದು ನೋವಿನಿಂದ ಬಳಲುತ್ತಿದ್ದು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ ಹೀಗಾಗಿ ಈ ಪಂದ್ಯದಲ್ಲಿ ಕಣಕ್ಕಿಳಿಯಲಿಲ್ಲ ಎಂದು ಹೇಳಿಕೆಯನ್ನು ನೀಡಿದರು.

ಈ ಬಾರಿಯ ಟೂರ್ನಿಯಲ್ಲಿ ಪಾಂಡ್ಯ ಪ್ರದರ್ಶನ
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಿರುವ ಹಾರ್ದಿಕ್ ಪಾಂಡ್ಯ 228 ರನ್ ಕಲೆಹಾಕಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 52 ಎಸೆತಗಳಲ್ಲಿ ಅಜೇಯ 87 ರನ್ ಬಾರಿಸಿದ ಹಾರ್ದಿಕ್ ಪಾಂಡ್ಯ ಆ ಪಂದ್ಯದಲ್ಲಿ 8 ಬೌಂಡರಿ ಮತ್ತು 4 ಸಿಕ್ಸರ್ ಚಚ್ಚಿ ತನ್ನ ಫಾರ್ಮ್ ಕುರಿತು ಮಾತನಾಡುತ್ತಿದ್ದವರಿಗೆ ಉತ್ತರ ನೀಡಿದರು. ಇನ್ನು ತಾವಾಡಿರುವ 5 ಪಂದ್ಯಗಳ ಪೈಕಿ ಹಾರ್ದಿಕ್ ಪಾಂಡ್ಯ 18.3 ಓವರ್ ಬೌಲಿಂಗ್ ಕೂಡ ಮಾಡಿದ್ದು 4 ವಿಕೆಟ್ ಪಡೆದಿದ್ದಾರೆ.

ಹಾರ್ದಿಕ್ ಪಾಂಡ್ಯ ಒಟ್ಟಾರೆ ಐಪಿಎಲ್ ಅಂಕಿ ಅಂಶ
ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಹಾರ್ದಿಕ್ ಪಾಂಡ್ಯ ಒಟ್ಟು 97 ಪಂದ್ಯಗಳನ್ನಾಡಿದ್ದು, 1704 ರನ್ ಕಲೆಹಾಕಿದ್ದಾರೆ ಹಾಗೂ ಹಾರ್ದಿಕ್ ಪಾಂಡ್ಯ ಐಪಿಎಲ್ ಇತಿಹಾಸದಲ್ಲಿ ಗರಿಷ್ಠ 91* ರನ್ ಗಳಿಸಿದ್ದಾರೆ. ಇನ್ನು ಈ ಪಂದ್ಯಗಳ ಪೈಕಿ 46 ವಿಕೆಟ್‍ಗಳನ್ನೂ ಸಹ ಹಾರ್ದಿಕ್ ಪಾಂಡ್ಯ ಪಡೆದಿದ್ದಾರೆ. 2015ರ ಇಂಡಿಯನ್ ಪ್ರಿಮಿಯರ್ ಲೀಗ್ ಆವೃತ್ತಿಯಿಂದ ಕಳೆದ ಬಾರಿಯ ಆವೃತ್ತಿಯವರೆಗೂ ಮುಂಬೈ ಇಂಡಿಯನ್ಸ್ ತಂಡದ ಪರವೇ ಕಣಕ್ಕಿಳಿಯುತ್ತಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿ 15 ಕೋಟಿಗೆ ಗುಜರಾತ್ ಟೈಟನ್ಸ್ ತಂಡ ಸೇರಿದ್ದು ನಾಯಕತ್ವದ ಸ್ಥಾನ ಪಡೆದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications