ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2022: ಪ್ಲೇ ಆಫ್ ಪ್ರವೇಶಿಸಿರುವ 4 ತಂಡಗಳ ಪೈಕಿ ಈ ತಂಡವೇ ಚಾಂಪಿಯನ್ ಆಗಬೇಕು ಎಂದ ರೈನಾ

IPL 2022: I really want RCB to win trophy this year for Virat Kohli says Suresh Raina

ಕಳೆದ ಮಾರ್ಚ್ ತಿಂಗಳ ಅಂತ್ಯದಲ್ಲಿ ಆರಂಭಗೊಂಡ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಇದೀಗ ಮುಕ್ತಾಯದ ಸನಿಹಕ್ಕೆ ಬಂದಿದೆ. ಈ ಬಾರಿ 2 ನೂತನ ತಂಡಗಳ ಆಗಮನದಿಂದ ಲೀಗ್ ಹಂತದಲ್ಲಿ ಹತ್ತು ತಂಡಗಳ ನಡುವೆ ಸೆಣಸಾಟ ನಡೆಯಿತು. ಈ ಪೈಕಿ ಹೊಸದಾಗಿ ಸೇರ್ಪಡೆಗೊಂಡಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಸೇರಿದಂತೆ ಒಟ್ಟು 4 ತಂಡಗಳು ಪ್ಲೇ ಆಫ್ ಸುತ್ತಿಗೆ ಅರ್ಹತೆ ಪಡೆದುಕೊಂಡಿವೆ.

IPL 2022: ತಂಡಗಳ ಪರ ಅತಿಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿ ಔಟ್; ಆರ್‌ಸಿಬಿ ಪರ ಯಾರು?IPL 2022: ತಂಡಗಳ ಪರ ಅತಿಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿ ಔಟ್; ಆರ್‌ಸಿಬಿ ಪರ ಯಾರು?

ಹೌದು, ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್, ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಮತ್ತು ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಯಶಸ್ವಿಯಾಗಿ ಪ್ಲೇ ಆಫ್ ಸುತ್ತಿಗೆ ಲಗ್ಗೆ ಇಟ್ಟಿವೆ. ಈ ಮೂಲಕ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಈ 4 ತಂಡಗಳ ಪೈಕಿ ಯಾವುದೇ ತಂಡ ಗೆದ್ದರೂ 5 ವರ್ಷಗಳ ಬಳಿಕ ನೂತನ ಐಪಿಎಲ್ ಚಾಂಪಿಯನ್ ಹೊರಬರಲಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ಹೊರತುಪಡಿಸಿ ಉಳಿದ ಯಾವುದೇ ತಂಡಗಳು ಗೆದ್ದರೂ ಐಪಿಎಲ್ ಇತಿಹಾಸದಲ್ಲಿಯೇ ನೂತನ ಚಾಂಪಿಯನ್ ಹುಟ್ಟಲಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ಗೆ ಪ್ರಕಟವಾದ ತಂಡದಲ್ಲಿ ಈ ಮೂವರಿಗೆ ಅವಕಾಶ ನೀಡಿದ್ದೇ ಆ‍ಶ್ಚರ್ಯ!ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ಗೆ ಪ್ರಕಟವಾದ ತಂಡದಲ್ಲಿ ಈ ಮೂವರಿಗೆ ಅವಕಾಶ ನೀಡಿದ್ದೇ ಆ‍ಶ್ಚರ್ಯ!

ಹೀಗಾಗಿ ಈ ಬಾರಿಯ ಐಪಿಎಲ್ ಟೂರ್ನಿಯ ಪ್ಲೇ ಆಫ್ ಸುತ್ತು ಭಾರಿ ನಿರೀಕ್ಷೆ ಹಾಗೂ ಕುತೂಹಲಗಳನ್ನು ಹುಟ್ಟು ಹಾಕಿದ್ದು, ಕ್ರಿಕೆಟ್ ಅಭಿಮಾನಿಗಳ ಗಮನವನ್ನು ತನ್ನತ್ತ ಸೆಳೆದುಕೊಂಡಿದೆ. ಇನ್ನು ಪ್ಲೇ ಆಫ್ ಪ್ರವೇಶಿಸಿರುವ ತಂಡಗಳ ಪೈಕಿ ಯಾವ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಬೇಕು ಎಂಬುದರ ಕುರಿತು ಹಲವಾರು ಕ್ರಿಕೆಟ್ ಅಭಿಮಾನಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದರೆ, ಕೆಲ ಮಾಜಿ ಕ್ರಿಕೆಟಿಗರು ಕೂಡ ಈ ಬಾರಿ ಯಾವ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಬೇಕು ಎಂಬುದನ್ನು ತಿಳಿಸಿದ್ದಾರೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಕೂಡ ಯಾವ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಬೇಕು ಎಂಬುದನ್ನು ಈ ಕೆಳಕಂಡಂತೆ ತಿಳಿಸಿದ್ದಾರೆ.

ಈ ತಂಡವೇ ಚಾಂಪಿಯನ್ ಆಗಿ ಹೊರ ಹೊಮ್ಮಲಿ ಎಂದು ಕಾರಣ ತಿಳಿಸಿದ ರೈನಾ

ಈ ತಂಡವೇ ಚಾಂಪಿಯನ್ ಆಗಿ ಹೊರ ಹೊಮ್ಮಲಿ ಎಂದು ಕಾರಣ ತಿಳಿಸಿದ ರೈನಾ

ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಚಾಂಪಿಯನ್ ಆಗಿ ಹೊರಹೊಮ್ಮಬೇಕು ಎಂದು ಸುರೇಶ್ ರೈನಾ ಆಶಿಸಿದ್ದಾರೆ. ಇದಕ್ಕೆ ಮುಖ್ಯ ಕಾರಣ ವಿರಾಟ್ ಕೊಹ್ಲಿ ಎಂದು ಕೂಡ ಸುರೇಶ್ ರೈನಾ ಹೇಳಿದ್ದಾರೆ. ಕಳೆದ 14 ವರ್ಷಗಳಿಂದ ಐಪಿಎಲ್ ಟೂರ್ನಿಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ವಿರಾಟ್ ಕೊಹ್ಲಿ ಇರುವ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಬೇಕು, ಹೀಗಾಗಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟ್ರೋಫಿ ಗೆಲ್ಲಲಿ ಎಂದು ಸುರೇಶ್ ರೈನಾ ಇಚ್ಛೆ ವ್ಯಕ್ತಪಡಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಟ್ರೋಫಿ ಗೆಲ್ಲಲು ಇನ್ನೂ 3 ಪಂದ್ಯ ಗೆಲ್ಲಬೇಕು!

ರಾಯಲ್ ಚಾಲೆಂಜರ್ಸ್ ಬೆಂಗಳೂರು ಟ್ರೋಫಿ ಗೆಲ್ಲಲು ಇನ್ನೂ 3 ಪಂದ್ಯ ಗೆಲ್ಲಬೇಕು!

ಇನ್ನು ಪ್ಲೇ ಆಫ್ ಸುತ್ತಿಗೆ ನಾಲ್ಕನೇ ತಂಡವಾಗಿ ಪ್ರವೇಶ ಪಡೆದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲಿಗೆ ಬುಧವಾರ ನಡೆಯಲಿರುವ ಎಲಿಮಿನೇಟರ್ ಸುತ್ತಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಾಟ ನಡೆಸಲಿದೆ. ಈ ಪಂದ್ಯದಲ್ಲಿ ಗೆದ್ದರೆ ಶುಕ್ರವಾರ ನಡೆಯುವ ಕ್ವಾಲಿಫೈಯರ್ 2 ಪಂದ್ಯದಲ್ಲಿ ಕ್ವಾಲಿಫೈಯರ್ 1 ಪಂದ್ಯದಲ್ಲಿ ಸೋತು ಬಂದ ತಂಡದ ಜೊತೆ ಫಾಫ್ ಡು ಪ್ಲೆಸಿಸ್ ಬಳಗ ಸೆಣಸಾಡಲಿದೆ ಹಾಗೂ ಈ ಪಂದ್ಯದಲ್ಲಿ ಗೆದ್ದರೆ ಫೈನಲ್ ಪಂದ್ಯಕ್ಕೆ ಅರ್ಹತೆ ಪಡೆದುಕೊಳ್ಳಲಿದೆ. ಈ ಮೂಲಕ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗಿ ಹೊರಹೊಮ್ಮಿ ಇತಿಹಾಸ ಬರೆಯಲಿದೆ.

ಪ್ಲೇ ಆಫ್ ಪಂದ್ಯದಲ್ಲಿ ಹೊಸ ರೂಲ್ಸ್ | Oneindia Kannada
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕನಸಿಗೆ ಪೆಟ್ಟು ನೀಡುತ್ತಾ ಮಳೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕನಸಿಗೆ ಪೆಟ್ಟು ನೀಡುತ್ತಾ ಮಳೆ?

ಇನ್ನು ಚಾಂಪಿಯನ್ ಆಗಬೇಕೆನ್ನುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಸೆಗೆ ಈ ಬಾರಿ ಮಳೆ ಕಂಟಕವಾಗುವ ಸಾಧ್ಯತೆಗಳಿವೆ. ಹೌದು, ಕೋಲ್ಕತ್ತಾದಲ್ಲಿ ಮಳೆ ಅವಾಂತರವನ್ನು ಉಂಟುಮಾಡಿದೆ, ಇಲ್ಲಿಯೇ ನಡೆಯಲಿರುವ ಪ್ಲೇ ಆಫ್ ಪಂದ್ಯಗಳ ಮೇಲೆ ವರುಣನ ವಕ್ರದೃಷ್ಟಿ ಬಿದ್ದಂತಿದೆ. ಇನ್ನು ಪ್ಲೇ ಆಫ್ ಸುತ್ತಿನ ಪಂದ್ಯಗಳ ವೇಳೆ ಮಳೆ ಬಂದು ವಿಳಂಬವಾದರೆ ಸೂಪರ್ ಓವರ್ ಮೂಲಕ ಫಲಿತಾಂಶ ಹೊರ ತರುವ ಯತ್ನ ನಡೆಯಲಿದೆ. ಒಂದುವೇಳೆ ಸೂಪರ್ ಓವರ್ ಕೂಡ ನಡೆಸಲು ಆಗದೇ ಇದ್ದರೆ ಲೀಗ್ ಹಂತದಲ್ಲಿ ಹೆಚ್ಚು ಅಂಕ ಗಳಿಸಿದ ತಂಡ ಮುಂದಿನ ಪಂದ್ಯಕ್ಕೆ ಅರ್ಹತೆ ಪಡೆದುಕೊಳ್ಳಲಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಪ್ಲೇ ಆಫ್ ಪ್ರವೇಶಿಸಿರುವ ಎಲ್ಲಾ ತಂಡಗಳಿಗಿಂತ ಕಡಿಮೆ ಅಂಕ ಪಡೆದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಈ ನಿಯಮ ಹಿನ್ನಡೆಯುಂಟುಮಾಡುವ ದೊಡ್ಡ ತಲೆನೋವು ಎದುರಾಗಿದೆ.

Story first published: Tuesday, May 24, 2022, 19:13 [IST]
Other articles published on May 24, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X