ಐಪಿಎಲ್: ಧೋನಿ ನಾಯಕತ್ವದಲ್ಲಿ ಹಲವು ವರ್ಷ ಆಡಿದ್ದು ನನ್ನ ಅದೃಷ್ಟ ಎಂದ ಆರ್‌ಸಿಬಿ ಸ್ಟಾರ್ ಆಟಗಾರ

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಟೂರ್ನಿಯ ಚೊಚ್ಚಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮಾರ್ಚ್ 26ರ ಶನಿವಾರದಂದು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಲಿವೆ. ಇನ್ನು ಈ ಬಾರಿಯ ಟೂರ್ನಿ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಎಂಎಸ್ ಧೋನಿ ತಂಡದ ನಾಯಕತ್ವವನ್ನು ತ್ಯಜಿಸಿದ್ದಾರೆ ಎಂಬ ದೊಡ್ಡ ಘೋಷಣೆಯನ್ನು ಹೊರಡಿಸುವ ಮೂಲಕ ರವೀಂದ್ರ ಜಡೇಜಾ ತಂಡದ ನೂತನ ನಾಯಕ ಎಂಬುದನ್ನೂ ಕೂಡ ತಿಳಿಸಿತು. ಹೀಗೆ ಎಂಎಸ್ ಧೋನಿ ಐಪಿಎಲ್‌ನಲ್ಲಿನ ತನ್ನ ನಾಯಕನ ಪಯಣಕ್ಕೆ ಗುಡ್‌ಬೈ ಹೇಳಿದ್ದು, ಈಗಾಗಲೇ ಎಂಎಸ್ ಧೋನಿ ಕುರಿತು ಹಲವಾರು ಸ್ಟಾರ್ ಕ್ರಿಕೆಟಿಗರು ಮಾತನಾಡಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಈ ಸಾಲಿಗೆ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ಕೂಡ ಸೇರಿಕೊಂಡಿದ್ದು, ಎಂಎಸ್ ಧೋನಿ ನಾಯಕತ್ವದ ಕುರಿತು ಈ ಕೆಳಕಂಡಂತೆ ಮಾತನಾಡಿದ್ದಾರೆ.

ಎಂಎಸ್ ಧೋನಿ ನಾಯಕತ್ವದಲ್ಲಿ ಆಡಿದ್ದು ನನ್ನ ಭಾಗ್ಯ
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಏಳು ಕೋಟಿ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದ್ದ ಫಾಫ್ ಡು ಪ್ಲೆಸಿಸ್ ತಂಡದ ನಾಯಕನಾಗಿ ಕೂಡ ಆಯ್ಕೆಯಾಗಿದ್ದಾರೆ. ಹೀಗೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಲಿರುವ ಫಾಫ್ ಡು ಪ್ಲೆಸಿಸ್ ಕಳೆದ ಆವೃತ್ತಿಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಕಣಕ್ಕಿಳಿದು ಎಂ ಎಸ್ ಧೋನಿ ನಾಯಕತ್ವದಡಿಯಲ್ಲಿ ಆಡಿದ್ದರು. ಹೀಗೆ ಐಪಿಎಲ್‌ನಲ್ಲಿ ಎಂಎಸ್ ಧೋನಿ ನಾಯಕತ್ವದಡಿಯಲ್ಲಿ ಕಣಕ್ಕಿಳಿದಿರುವುದನ್ನು ನೆನಪಿಸಿಕೊಂಡಿರುವ ಫಾಫ್ ಡು ಪ್ಲೆಸಿಸ್ ಧೋನಿ ನಾಯಕತ್ವದಲ್ಲಿ ಹಲವು ವರ್ಷಗಳ ಕಾಲ ಆಡಿರುವುದು ನನ್ನ ಭಾಗ್ಯ ಎಂದಿದ್ದಾರೆ. ಧೋನಿ ನಾಯಕತ್ವವನ್ನು ಹತ್ತಿರದಿಂದ ಕಂಡಿದ್ದು, ಅವರ ಮೆದುಳು ಒತ್ತಡದ ಸಮಯದಲ್ಲಿ ಹೇಗೆ ಕೆಲಸ ಮಾಡುತ್ತದೆ, ಅವರು ಕೆಲಸಗಳನ್ನು ಹೇಗೆ ನಿರ್ವಹಿಸುತ್ತಾರೆ ಎಂಬುದನ್ನು ನೋಡಿದ್ದು ನನ್ನ ಅದೃಷ್ಟ ಎಂದು ಫಾಫ್ ಡು ಪ್ಲೆಸಿಸ್ ಧೋನಿ ನಾಯಕತ್ವವನ್ನು ಮೆಚ್ವಿಕೊಂಡಿದ್ದಾರೆ.

ಗ್ರೇಮ್ ಸ್ಮಿತ್ ಹಾಗೂ ಫ್ಲೆಮಿಂಗ್ ಬಗ್ಗೆ ಕೂಡ ಫಾಫ್ ಮಾತು
ಎಂಎಸ್ ಧೋನಿ ನಾಯಕತ್ವದಲ್ಲಿ ಆಡಿದ್ದು ನನ್ನ ಅದೃಷ್ಟ ಎಂದಿರುವ ಫಾಫ್ ಡು ಪ್ಲೆಸಿಸ್ ದಕ್ಷಿಣ ಆಫ್ರಿಕಾದ ಲೆಜೆಂಡರಿ ನಾಯಕ ಗ್ರೇಮ್ ಸ್ಮಿತ್ ಬಗ್ಗೆ ಕೂಡ ಮಾತನಾಡಿ ನಾಯಕನಾಗಿ ಅವರು ಬಲಿಷ್ಟ ಗುಣಗಳನ್ನು ಹೊಂದಿದ್ದರು ಎಂದಿದ್ದಾರೆ. ಇದರ ಜೊತೆಗೆ ತಾನು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವಾಗ ತಂಡದ ಕೋಚ್ ಆಗಿದ್ದ ಸ್ಟೀಫನ್ ಫ್ಲೆಮಿಂಗ್ ಕುರಿತು ಕೂಡ ಉಲ್ಲೇಖಿಸಿರುವ ಫಾಫ್ ಡು ಪ್ಲೆಸಿಸ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ನಾಯಕನಾಗಿದ್ದರು ಹಾಗೂ ಸದ್ಯ ಓರ್ವ ಯಶಸ್ವಿ ಕೋಚ್ ಆಗಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಆರ್‌ಸಿಬಿ ಸಂಪೂರ್ಣ ತಂಡ
ನೂತನ ನಾಯಕ ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಕಣಕ್ಕಿಳಿಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್ ( ನಾಯಕ ), ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಜೋಶ್ ಹೇಜಲ್‌ವುಡ್, ಶಹಬಾಜ್ ಅಹ್ಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಶೆರ್ಫಾನ್ ರುದರ್‌ಫೋರ್ಡ್, ಜೇಸನ್ ಬೆಹ್ರೆಂಡ್, ಜೇಸನ್ ಬೆಹ್ರಾಯ್ ಮಿಲಿಂದ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಲುವ್ನಿತ್ ಸಿಸೋಡಿಯಾ, ಸಿದ್ಧಾರ್ಥ್ ಕೌಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications