
ಈ ತಂಡದ ಪರ ಕಣಕ್ಕಿಳಿಯಲು ಒಲವಿದೆ ಎಂದ ಅಂಬಾಟಿ ರಾಯುಡು
ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ ಐಪಿಎಲ್ ಮೆಗಾ ಹರಾಜು ಕುರಿತು ಮಾತನಾಡಿರುವ ಅಂಬಾಟಿ ರಾಯುಡು ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಕಳೆದ ಆವೃತ್ತಿಯಲ್ಲಿ ತಾನು ಪ್ರತಿನಿಧಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವೇ ಮತ್ತೊಮ್ಮೆ ಆಡಬೇಕು ಎಂದು ಅಂಬಾಟಿ ರಾಯುಡು ಹೇಳಿಕೊಂಡಿದ್ದಾರೆ.

ಫ್ರಾಂಚೈಸಿ ಜತೆ ಸಂಪರ್ಕವಿಲ್ಲ ಆದರೆ ಮೆಗಾ ಹರಾಜಿನಲ್ಲಿ ನನ್ನನ್ನು ಖರೀದಿಸುವ ಭರವಸೆ ಇದೆ: ರಾಯುಡು
ಇನ್ನು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡಬೇಕು ಎಂದಿರುವ ಅಂಬಾಟಿ ರಾಯುಡು ಮೆಗಾ ಹರಾಜಿನ ಕುರಿತಾಗಿ ಇದುವರೆಗೂ ಕೂಡ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ತನ್ನ ಜೊತೆ ಯಾವುದೇ ರೀತಿಯ ಸಂಪರ್ಕವನ್ನು ಬೆಳೆಸಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹಾಗೂ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ ಮೆಗಾ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ತನ್ನನ್ನು ಖರೀದಿಸಲಿದೆ ಎನ್ನುವ ಭರವಸೆ ನನಗಿದೆ ಎಂದು ಅಂಬಾಟಿ ರಾಯುಡು ಹೇಳಿಕೊಂಡಿದ್ದಾರೆ.

2019ರಲ್ಲಿ ನನ್ನ ಬೆಂಬಲಕ್ಕೆ ನಿಂತದ್ದು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ
ಇನ್ನು 2019ರ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಿದಾಗ ಅಂಬಾಟಿ ರಾಯುಡು ಅವರಿಗೆ ಸ್ಥಾನವನ್ನು ಬಿಸಿಸಿಐ ನೀಡಿರಲಿಲ್ಲ. ಆ ಸಂದರ್ಭದಲ್ಲಿ ತೀವ್ರ ಬೇಸರಕ್ಕೆ ಒಳಗಾಗಿದ್ದ ತನ್ನ ಬೆಂಬಲಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ನಿಲ್ಲುವುದರ ಮೂಲಕ ದೊಡ್ಡ ಮಟ್ಟದಲ್ಲಿ ಸಹಾಯ ಮಾಡಿತು ಎಂದು ಅಂಬಾಟಿ ರಾಯುಡು ಹೇಳಿಕೊಂಡಿದ್ದಾರೆ.


Click it and Unblock the Notifications












