KKR vs DC: ಕೊಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್

ಐಪಿಎಲ್ 15ನೇ ಆವೃತ್ತಿಯ 19ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಗೆಲುವು ಸಾಧಿಸಿದೆ. ರಿಷಬ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನೀಡಿದ 215 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 171 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು ಶರಣಾಯಿತು. ಈ ಮೂಲಕ ಡೆಲ್ಲಿ 44 ರನ್‌ಗಳ ಅಂತರದ ಗೆಲುವು ಸಾಧಿಸಿದೆ.
ಬೃಹತ್ ಮೊತ್ತವನ್ನು ಬೆನ್ನಟ್ಟಿದ ಕೆಕೆಆರ್ ತಂಡಕ್ಕೆ ಸ್ಪೋಟಕ ಆರಂಭ ನೀಡುವ ಪ್ರಯತ್ನವನ್ನು ವೆಂಕಟೇಶ್ ಐಯ್ಯರ್ ನಡೆಸಿದರಾದರೂ ಅವರ ಆಟ 18 ರನ್‌ಗಳಿಗೆ ಸೀಮಿವಾಯಿತು. 8 ಎಸೆತ ಎದುರಿಸಿದ ಅವರು 1 ಬೌಂಡಿ ಹಾಗೂ 2 ಸಿಕ್ಸರ್ ಬಾರಿಸಿದರು. ಅಜಿಂಕ್ಯಾ ರಹಾನೆ ಈ ಪಂದ್ಯದಲ್ಲಿಯೂ ಉತ್ತಮ ಪ್ರದರ್ಶನ ನೀಡಲು ವಿಫಲವಾದರು. ನಾಯಕ ಶ್ರೇಯಸ್ ಐಯ್ಯರ್ ಹಾಗೂ ನಿತೀಶ್ ರಾಣಾ ತಂಡದ ಮೊತ್ತವನ್ನು ಹೆಚ್ಚಿಸುವ ಪ್ರಯತ್ನ ನಡೆಸಿ ಒಂದು ಹಂತಕ್ಕೆ ಯಶಸ್ಸು ಸಾಧಿಸಿದರು. ಈ ಜೋಡಿ ಬೇರ್ಪಟ್ಟ ನಂತರ ಮತ್ತೆ ತಂಡ ಹಿನ್ನಡೆ ಅನುಭವಿಸಿತು.
ಶ್ರೇಯಸ್ ಐಯ್ಯರ್ 33 ಎಸೆತಗಳನ್ನು ಎದುರಿಸಿ 54 ರನ್‌ಗಳಿಸಿ ನಾಯಕನ ಆಟವಾಡಿದರು. ಆದರೆ ಇದು ತಂಡದ ಗೆಲುವಿಗೆ ಸಾಕಾಗಲಿಲ್ಲ. ನಿತೀಶ್ ರಾಣಾ 30 ರನ್‌ಗಳ ಕೊಡುಗೆ ನೀಡಿದರು. ಆಂಡ್ರೆ ರಸ್ಸೆಲ್ 24 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರು. ಕಳೆದ ಪಂದ್ಯದಲ್ಲಿ ಅಬ್ಬರದ ಪ್ರದರ್ಶನ ನಿಡಿದ್ದ ಪ್ಯಾಟ್ ಕಮ್ಮಿನ್ಸ್ ಕೇವಲ 4 ರನ್‌ಗೆ ಆಟವನ್ನು ಮುಗಿಸಿದರು. ಸುನಿಲ್ ನರೈನ್ ಅವರಿಂದಲೂ ಹೆಚ್ಚಿನ ಕೊಡುಗೆ ಬರಲಿಲ್ಲ. ಅಂತಿಮವಾಗಿ ಕೆಕೆಆರ್ 19.4 ಓವರ್‌ಗಳಲ್ಲಿ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿತು.
ಇನ್ನು ಇದಕ್ಕೂ ಮುನ್ನ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬೃಹತ್ ಮೊತ್ತದ ಗುರಿ ನೀಡಿತು. ಆರಂಭಿಕ ಆಟಗಾರರಾದ ಪೃಥ್ವಿ ಶಾ ಹಾಗೂ ಡೇವಿಡ್ ವಾರ್ನರ್ ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಹಾಗೂ ಅಂತಿಮ ಹಂತದಲ್ಲಿ ಅಕ್ಷರ್ ಪಟೇಲ್ ಹಾಗೂ ಶಾರ್ದೂಲ್ ಠಾಕೂರ್ ಅವರ ಆರ್ಭಟದ ಪ್ರದರ್ಶನದ ಕಾರಣದಿಂದಾಗಿ ನಿಗದಿತ 20 ಓವರ್‌ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 215 ರನ್‌ಗಳಿಸಲು ಸಾಧ್ಯವಾಯಿತು
ಈ ಪಂದ್ಯದಲ್ಲಿ ಕೂಡ ಪೃಥ್ವಿ ಶಾ ಸ್ಪೋಟಕ ಆರಂಭವನ್ನು ಒದಗಿಸಿದರು. ಕೇವಲ 29 ಎಸೆತ ಎದುರಿಸಿದ ಶಾ 51 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಇನ್ನು ಮೊದಲ ಪಂದ್ಯದಲ್ಲಿ ವಿಫಲವಾಗಿದ್ದ ಡೇವಿಡ್ ವಾರ್ನರ್ ಈ ಪಂದ್ಯದಲ್ಲಿ ಮತ್ತೆ ಫಾರ್ಮ್‌ಗೆ ಮರಳಿದ್ದಾರೆ. ವಾರ್ನರ್ ಅವರಿಂದ 61 ರನ್‌ಗಳ ಕೊಡುಗೆ ದೊರೆತಿದೆ. ರಿಷಬ್ ಪಂತ್ 27 ರನ್‌ಗಳಿಸಿ ಔಟಾದರೆ ಅಕ್ಷರ್ ಪಟೇಲ್ 14 ಎಸೆತಗಳಲ್ಲಿ 22 ರನ್ ಬಾರಿಸಿದರೆ ಶಾರ್ದೂಲ್ ಠಾಕೂರ್ 11 ಎಸೆತದಲ್ಲಿ 19 ರನ್‌ಗಳ ಕೊಡುಗೆ ನೀಡಿದ್ದಾರೆ.
ಕೊಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಆಂಡ್ರೆ ರಸೆಲ್, ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ರಸಿಖ್ ಸಲಾಂ, ವರುಣ್ ಚಕ್ರವರ್ತಿ
ಬೆಂಚ್: ಟಿಮ್ ಸೌಥಿ, ಆರನ್ ಫಿಂಚ್, ಮೊಹಮ್ಮದ್ ನಬಿ, ಶೆಲ್ಡನ್ ಜಾಕ್ಸನ್, ಚಮಿಕಾ ಕರುಣರತ್ನೆ, ಬಾಬಾ ಇಂದ್ರಜಿತ್, ರಿಂಕು ಸಿಂಗ್, ಅನುಕುಲ್ ರಾಯ್, ಶಿವಂ ಮಾವಿ, ಪ್ರಥಮ್ ಸಿಂಗ್, ಅಭಿಜೀತ್ ತೋಮರ್, ಅಮನ್ ಹಕೀಮ್ ಖಾನ್, ಅಶೋಕ್ ಶರ್ಮಾ, ರಮೇಶ್ ಕುಮಾರ್
ಡೆಲ್ಲಿ ಕ್ಯಾಪಿಟಲ್ಸ್: ಸ್ಕ್ವಾಡ್ ಆಡುವ ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್, ಸರ್ಫರಾಜ್ ಖಾನ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್
ಬೆಂಚ್: ಅನ್ರಿಚ್ ನೋರ್ಕಿಯಾ, ಮನ್‌ದೀಪ್ ಸಿಂಗ್, ಶ್ರೀಕರ್ ಭರತ್, ಟಿಮ್ ಸೀಫರ್ಟ್, ಅಶ್ವಿನ್ ಹೆಬ್ಬಾರ್, ಪ್ರವೀಣ್ ದುಬೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್, ಲುಂಗಿ ಎನ್‌ಗಿಡಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications