KKR vs DC: ಕೊಲ್ಕತ್ತಾಗೆ ಬೃಹತ್ ಗುರಿ ನಿಗದಿಪಡಿಸಿದ ಡೆಲ್ಲಿ ಕ್ಯಾಪಿಟಲ್ಸ್

ಐಪಿಎಲ್‌ನಲ್ಲಿ ನಡೆಯುತ್ತಿರುವ 19ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬೃಹತ್ ಮೊತ್ತದ ಗುರಿ ನೀಡಿದೆ. ಆರಂಭಿಕ ಆಟಗಾರರಾದ ಪೃಥ್ವಿ ಶಾ ಹಾಗೂ ಡೇವಿಡ್ ವಾರ್ನರ್ ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಹಾಗೂ ಅಂತಿಮ ಹಂತದಲ್ಲಿ ಅಕ್ಷರ್ ಪಟೇಲ್ ಹಾಗೂ ಶಾರ್ದೂಲ್ ಠಾಕೂರ್ ಅವರ ಆರ್ಭಟದ ಪ್ರದರ್ಶನದ ಕಾರಣದಿಂದಾಗಿ ನಿಗದಿತ 20 ಓವರ್‌ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 215 ರನ್‌ಗಳಿಸಿದೆ.
ಈ ಪಂದ್ಯದಲ್ಲಿ ಕೂಡ ಪೃಥ್ವಿ ಶಾ ಸ್ಪೋಟಕ ಆರಂಭವನ್ನು ಒದಗಿಸಿದರು. ಕೇವಲ 29 ಎಸೆತ ಎದುರಿಸಿದ ಶಾ 51 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಇನ್ನು ಮೊದಲ ಪಂದ್ಯದಲ್ಲಿ ವಿಫಲವಾಗಿದ್ದ ಡೇವಿಡ್ ವಾರ್ನರ್ ಈ ಪಂದ್ಯದಲ್ಲಿ ಮತ್ತೆ ಫಾರ್ಮ್‌ಗೆ ಮರಳಿದ್ದಾರೆ. ವಾರ್ನರ್ ಅವರಿಂದ 61 ರನ್‌ಗಳ ಕೊಡುಗೆ ದೊರೆತಿದೆ. ರಿಷಬ್ ಪಂತ್ 27 ರನ್‌ಗಳಿಸಿ ಔಟಾದರೆ ಅಕ್ಷರ್ ಪಟೇಲ್ 14 ಎಸೆತಗಳಲ್ಲಿ 22 ರನ್ ಬಾರಿಸಿದರೆ ಶಾರ್ದೂಲ್ ಠಾಕೂರ್ 11 ಎಸೆತದಲ್ಲಿ 19 ರನ್‌ಗಳ ಕೊಡುಗೆ ನೀಡಿದ್ದಾರೆ.

ಕೊಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಆಂಡ್ರೆ ರಸೆಲ್, ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ರಸಿಖ್ ಸಲಾಂ, ವರುಣ್ ಚಕ್ರವರ್ತಿ
ಬೆಂಚ್: ಟಿಮ್ ಸೌಥಿ, ಆರನ್ ಫಿಂಚ್, ಮೊಹಮ್ಮದ್ ನಬಿ, ಶೆಲ್ಡನ್ ಜಾಕ್ಸನ್, ಚಮಿಕಾ ಕರುಣರತ್ನೆ, ಬಾಬಾ ಇಂದ್ರಜಿತ್, ರಿಂಕು ಸಿಂಗ್, ಅನುಕುಲ್ ರಾಯ್, ಶಿವಂ ಮಾವಿ, ಪ್ರಥಮ್ ಸಿಂಗ್, ಅಭಿಜೀತ್ ತೋಮರ್, ಅಮನ್ ಹಕೀಮ್ ಖಾನ್, ಅಶೋಕ್ ಶರ್ಮಾ, ರಮೇಶ್ ಕುಮಾರ್
ಡೆಲ್ಲಿ ಕ್ಯಾಪಿಟಲ್ಸ್: ಸ್ಕ್ವಾಡ್ ಆಡುವ ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್, ಸರ್ಫರಾಜ್ ಖಾನ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್
ಬೆಂಚ್: ಅನ್ರಿಚ್ ನೋರ್ಕಿಯಾ, ಮನ್‌ದೀಪ್ ಸಿಂಗ್, ಶ್ರೀಕರ್ ಭರತ್, ಟಿಮ್ ಸೀಫರ್ಟ್, ಅಶ್ವಿನ್ ಹೆಬ್ಬಾರ್, ಪ್ರವೀಣ್ ದುಬೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್, ಲುಂಗಿ ಎನ್‌ಗಿಡಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications